Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಆಳ್ವಾಸ್ ನಿಂದ ಜಿಲ್ಲೆಯ ಪ್ರತಿಭಾವಂತ ವಿದ್ಯಾರ್ಥಿ ವೇತನ ಪರೀಕ್ಷೆ

---Advertisement---

ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್. 17 : ಜಿಲ್ಲೆಯಲ್ಲಿ ಹತ್ತನೇ ತರಗತಿ ವ್ಯಾಸಂಗ ಮಾಡುತ್ತಿರುವ ಎಲ್ಲಾ ವರ್ಗದ ಪ್ರತಿಭಾವಂತ ವಿದ್ಯಾರ್ಥಿಗಳಿಗಿದು ಸುವರ್ಣಾವಕಾಶ.

ಮೂಡುಬಿದ್ರೆಯ ಆಳ್ವಾಸ್ ಪಿಯು ಕಾಲೇಜ್ ಪ್ರವೇಶಾತಿಗಾಗಿ ನಗರದ ಪಿಳ್ಳೆಕೆರೆನಹಳ್ಳಿಯ ಬಾಪೂಜಿ ಸಮೂಹ ವಿದ್ಯಾಸಂಸ್ಥೆಯಲ್ಲಿ ಪ್ರಸಕ್ತ ಸಾಲಿನ ಹತ್ತನೇ ತರಗತಿ ಓದುತ್ತಿರುವ ವಿದ್ಯಾರ್ಥಿ ವಿದ್ಯಾರ್ಥಿನಿಯರ ಉನ್ನತ ವ್ಯಾಸಂಗದ ಅನುಕೂಲಕ್ಕಾಗಿ ಆಳ್ವಾಸ್ ಅಕಾಡೆಮಿಕ್ ವಿದ್ಯಾರ್ಥಿ ವೇತನ ಪರೀಕ್ಷೆ ಆಯೋಜಿಸಲಾಗಿದೆ.

ಡಿಸೆಂಬರ್ 21 ರಂದು ಭಾನುವಾರ ಬೆಳಿಗ್ಗೆ 10 ಗಂಟೆಯಿಂದ 11 ರವರೆಗೆ ವಿಜ್ಞಾನ ಮತ್ತು ಗಣಿತ ವಿಷಯಾಧಾರಿತ ಎಂಸಿಕ್ಯೂ ಮಾದರಿ ಪರೀಕ್ಷೆ ಬರೆಯಬಹುದಾಗಿದೆ. ವಿದ್ಯಾರ್ಥಿಗಳು ಪರೀಕ್ಷೆಗೆ ಬರುವಾಗ ಆಧಾರ್ ನಂಬರ್, ದೂರವಾಣಿ ಸಂಖ್ಯೆ ಹಾಗೂ ಪಾಸ್ ಪೋಟ್೯ ಸೈಜ್ ಫೋಟೋ ತರಲು ಸೂಚಿಸಲಾಗಿದೆ. ಭಾನುವಾರ ಬೆಳಿಗ್ಗೆ 9 ಗಂಟೆಗೆ ನೋಂದಣಿ ಆರಂಭವಾಗಲಿದೆ. ಪ್ರತಿಭಾವಂತ ವಿದ್ಯಾರ್ಥಿಗಳು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬೇಕೆಂದು ಆಳ್ವಾಸ್ ನುಡಿಸಿರಿ ಘಟಕದ ಗೌರವಾಧ್ಯಕ್ಷ ಐಶ್ವರ್ಯಫೋಟ್೯ ಮಾಲೀಕ ಅರುಣ್ ಕುಮಾರ್, ನುಡಿಸಿರಿ ಘಟಕಾಧ್ಯಕ್ಷ ಹಾಗೂ ಶಸಾಪ ರಾಜ್ಯ ಉಪಾಧ್ಯಕ್ಷ ಕೆ.ಎಂ.ವೀರೇಶ್ ಮತ್ತು ನುಡಿಸಿರಿ ಘಟಕ ಜಿಲ್ಲಾ ಸಂಚಾಲಕ ಹಾಗೂ ರಂಗ ನಿರ್ದೇಶಕ ಕೆ.ಪಿ.ಎಂ.ಗಣೇಶಯ್ಯ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಉಪನ್ಯಾಸಕರಾದ ಶಿವಪ್ರಸಾದ್ 9986662447 ಮತ್ತು ದೊಡ್ಡಗೌಡರು 7353846785 ಸಂಪರ್ಕಿಸಲು ಕೋರಲಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now