Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ ಡಿಸಿಯಾಗಿದ್ದ ದಿವ್ಯಾ ಪ್ರಭು ಸೇರಿದಂತೆ ಮೂವರಿಗೆ ರಾಷ್ಟ್ರಪತಿ ಪ್ರಶಸ್ತಿ

---Advertisement---

ಜನವರಿ 25: ಭಾರತ ಚುನಾವಣಾ ಆಯೋಗ ಅತ್ಯುತ್ತಮ ಚುನಾವಣಾ ಅಭ್ಯಾಸಗಳನ್ನು ಪ್ರೋತ್ಸಾಹಿಸಲು ಪ್ರತಿ ವರ್ಷ ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ನೀಡುವ ರಾಷ್ಟ್ರಮಟ್ಟದ ಪ್ರಶಸ್ತಿಗಳಿಗೆ ಭಾಜನರಾಗಿದ್ದ ರಾಜ್ಯದ ಮೂವರಿಗೆ ಇಂದು ರಾಷ್ಟ್ರಪತಿಗಳು ಪ್ರಶಸ್ತಿ ಪ್ರಧಾನ ಮಾಡಿದರು.

2023ನೇ ಸಾಲಿನ ರಾಷ್ಟ್ರಮಟ್ಟದ ಪ್ರಶಸ್ತಿಗಳಿಗೆ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದ ಸರ್ಕಾರಿ ಇಲಾಖೆ ಅಥವಾ ಸಂಸ್ಥೆಗಳಿಗೆ ನೀಡುವ ಪ್ರಶಸ್ತಿಗೆ ವಾಣಿಜ್ಯ ತೆರಿಗೆ ಇಲಾಖೆಯ ಆಯುಕ್ತರಾದ ಶ್ರೀಮತಿ ಶಿಖಾ ಸಿ ಹಾಗೂ ಸಾಮಾನ್ಯ ಪ್ರಶಸ್ತಿ ವರ್ಗದಡಿಯಲ್ಲಿ ಚಿತ್ರದುರ್ಗ ಜಿಲ್ಲೆಯ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿರುವ ಶ್ರೀಮತಿ ದಿವ್ಯಾ ಪ್ರಭು ಅವರು ಮತ್ತು ಉತ್ತಮ ಜನಜಾಗೃತಿ ಕೈಗೊಂಡಿದ್ದಕ್ಕಾಗಿ ವಿದ್ಯುನ್ಮಾನ (ರೇಡಿಯೋ ) ಪ್ರಶಸ್ತಿಗೆ ಬೆಂಗಳೂರಿನ ರೇಡಿಯೋ ಮಿರ್ಚಿ ಎಫ್ ಎಮ್ ಆಯ್ಕೆಯಾಗಿತ್ತು.

ಶ್ರೀಮತಿ ಶಿಖಾ ಸಿ ಅವರು ಕಳೆದ 2023 ರ ಸಾಲಿನಲ್ಲಿ ನಡೆದ ರಾಜ್ಯ ವಿಧಾನಸಭಾ ಚುನಾವಣಾ ಸಂದರ್ಭದಲ್ಲಿ ವಾಣಿಜ್ಯ ತೆರಿಗೆ ಆಯುಕ್ತರಾಗಿ ಇಲಾಖೆಯ ಮೂಲಕ ಮತದಾರರಲ್ಲಿ ಉಚಿತ ಉಡುಗೊರೆಗಳ ಕುರಿತು ಹಮ್ಮಿಕೊಂಡಿದ್ದ ಜನಜಾಗೃತಿ, ವಾಣಿಜ್ಯ ಕ್ಷೇತ್ರದಲ್ಲಿ ಚುನಾವಣಾ ನೀತಿ ಸಂಹಿತಿ ಪಾಲನೆ ಸೇರಿದಂತೆ ಕಟ್ಟುನಿಟ್ಟಿನ ಚುನಾವಣೆ ನಡೆಸಲು ಪ್ರಮುಖ ಪಾತ್ರವಹಿಸಿದ್ದಕ್ಕಾಗಿ ಆಯೋಗ ಅವರನ್ನು ಹಾಗೂ ಇಲಾಖೆಯನ್ನು ಈ ಪ್ರಶಸ್ತಿಗೆ ಪರಿಗಣಿಸಿದೆ.

ಶ್ರೀಮತಿ ದಿವ್ಯಾಪ್ರಭು ಅವರು ಮತದಾರರ ಪಟ್ಟಿ ನಿರ್ವಹಣೆಯಲ್ಲಿ ಯುವ ಮತದಾರರ ನೋಂದಣಿ, ವಿಶೇಷ ಮತದಾರರ ನೋಂದಣಿ ಹೆಚ್ಚಳ ಸೇರಿದಂತೆ ಅವರು ಚುನಾವಣೆಯಲ್ಲಿ ನಿರ್ವಹಿಸಿದ ಕಾರ್ಯಗಳ ಮೂಲಕ ರಾಷ್ಟ್ರಮಟ್ಟದಲ್ಲಿ ಅತ್ಯುತ್ತಮರಾಗಿ ಗುರುತಿಸಿಕೊಂಡಿದ್ದನ್ನು ಆಯೋಗ ಪ್ರಶಸ್ತಿಗೆ ಪರಿಗಣಿಸಿದೆ.

ಆಯೋಗವು ಚುನಾವಣೆಗಳಲ್ಲಿ ಕಾರ್ಯನಿರ್ವಹಿಸಿದ ಅಧಿಕಾರಿಗಳನ್ನು ಪ್ರೋತ್ಸಾಹಿಸಲು ಹಾಗೂ ಅವರನ್ನು ಅಭಿನಂದಿಸಲು ಪ್ರತಿ ವರ್ಷ ಸಾಮಾನ್ಯ ವರ್ಗ, ವಿಶೇಷ ವರ್ಗ, ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದ ಸರ್ಕಾರಿ ಇಲಾಖೆ ಅಥವಾ ಸಂಸ್ಥೆಗಳು ಹಾಗೂ ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸಿದ ರಾಜ್ಯ ಎಂದು ನಾಲ್ಕು ವಿಭಾಗಗಳಲ್ಲಿ ಪ್ರಶಸ್ತಿಗಳನ್ನು ನೀಡಿ ಗೌರವಿಸುತ್ತದೆ.

ಅದೇ ರೀತಿಯಲ್ಲಿ ಆಯೋಗವು ಮತದಾರರಲ್ಲಿ ಚುನಾವಣಾ ಜಾಗೃತಿ ಕುರಿತಂತೆ ಅತ್ಯುತ್ಮಮವಾಗಿ ಕಾರ್ಯನಿರ್ವಹಿಸುವ ಮಾಧ್ಯಮ ಸಂಸ್ಥೆಗಳಿಗೆ ಮುದ್ರಣ, ವಿದ್ಯುನ್ಮಾನ (ಟಿವಿ), ವಿದ್ಯುನ್ಮಾನ (ರೇಡಿಯೋ) ಸೇರಿದಂತೆ ಡಿಜಿಟಲ್ ಮಾಧ್ಯಮ (ಸಾಮಾಜಿಕ ಜಾಲತಾಣ) ಎಂದು ನಾಲ್ಕು ವರ್ಗಗಳಲ್ಲಿ ಪ್ರಶಸ್ತಿಗಳನ್ನು ನೀಡಿ ಗೌರವಿಸುತ್ತದೆ.

ಕರ್ನಾಟಕದಲ್ಲಿ ಕಳೆದ ಸಾಲಿನಲ್ಲಿ ನಡೆದ ರಾಜ್ಯ ವಿಧಾನಸಭೆ ಸಾರ್ವತ್ರಿಕ ಚುನಾವಣೆ-2023  ರ  ಸಮಯದಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿ ರಾಷ್ಟ್ರಪ್ರಶಸ್ತಿಗೆ ಭಾಜನರಾಗಿರುವ ವಾಣಿಜ್ಯ ತೆರಿಗೆ ಇಲಾಖೆಯ ಆಯುಕ್ತರಾದ ಶ್ರೀಮತಿ ಶಿಖಾ ಸಿ ಹಾಗೂ ಚಿತ್ರದುರ್ಗ ಜಿಲ್ಲೆಯ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿರುವ ಶ್ರೀಮತಿ ದಿವ್ಯಾ ಪ್ರಭು ಮತ್ತು ಬೆಂಗಳೂರಿನ ರೇಡಿಯೋ ಮಿರ್ಚಿ ಎಫ್ ಎಮ್ ತಂಡಕ್ಕೆ ಶುಭಾಷಯಗಳು ಎಂದು ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಅವರು ಹರ್ಷ ವ್ಯಕ್ತಪಡಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment