Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಯತೀಂದ್ರ ಅವರ ಹೇಳಿಕೆಗೆ ಡಿಕೆ ಬಣ ಶಾಕ್ : ಯಾರು..? ಏನೆಲ್ಲಾ ಹೇಳಿದ್ರು..?

---Advertisement---

ಬೆಳಗಾವಿ: ಚಳಿಗಾಲದ ಅಧಿವೇಶನ ನಡೆಯುತ್ತಿದ್ದು, ಇಲ್ಲಿಯೂ ತಮ್ಮ ತಂದೆಯೇ ಐದು ವರ್ಷ ಸಿಎಂ ಎಂಬ ಮಾತನ್ನ ಯತೀಂದ್ರ ಅವರು ಉಚ್ಛಾರ ಮಾಡಿದ್ದಾರೆ. ಈ ಹೇಳಿಕೆಗೆ ಡಿಕೆ ಶಿವಕುಮಾರ್ ಬೆಂಬಲಿಗರು ಸಹಜವಾಗಿಯೇ ಪ್ರತಿಕ್ರಿಯೆ ನೀಡಿದ್ದಾರೆ. ಹಾಗಾದ್ರೆ ಯಾರ್ಯಾರು ಏನೇನು ಹೇಳಿದ್ರು ಎಂಬ ಮಾಹಿತಿ ಇಲ್ಲಿದೆ ನೋಡಿ.

ಶಾಸಕ ಶಿವಗಂಗಾ ಬಸವರಾಜ್ ಮಾತನಾಡುತ್ತಾ, ಜನವರಿ 2ರಂದು ನಾನು ಮಾತನಾಡ್ತೀನಿ. ಯತೀಂದ್ರ ಅವರ ಸಿಎಂ ಪೂರ್ಣಾವಧಿ ಹೇಳಿಕೆ ಬಗ್ಗೆ ನನಗೆ ಗೊತ್ತಿಲ್ಲ. ನಾನು ಆಮೇಲೆ ಮಾತನಾಡ್ತೀನಿ ಅಂತ ಹೇಳಿದ್ದಾರೆ. ಸಚುವೆ ಲಕ್ಷ್ಮೀ ಹೆಬ್ಬಾಳ್ಕರ್ ಈ ಸಂಬಂಧ ಮಾತನಾಡಿದ್ದು, ಸಿಎಂ – ಡಿಸಿಎಮನ ಅವರೇ ಹೈಕಮಾಂಡ್ ತೀರ್ಮಾನಕ್ಕೆ ಬದ್ಧ ಅಂತ ಹೇಳಿರುವಾವ ಬೇರೆಯವರ ಸ್ಟೇಟ್ಮೆಂಟ್ ಗೆ ಮಹತ್ವ ಇಲ್ಲ. ಕಾಂಗ್ರೆಸ್ ಪಕ್ಷದಲ್ಲಿ ಒಂದು ಶಿಸ್ತು ಇದೆ. ಆ ಶಿಸ್ತಿನ ಪ್ರಕಾರವೇ ಹೋಗ್ತೀವಿ. ಹೈಕಮಾಂಡ್ ನಿರ್ಧಾರಕ್ಕೆ ನಾವೆಲ್ಲಾ ಬದ್ಧರಾಗಿರ್ತೇವೆ ಎಂದು ಉತ್ತರ ನೀಡಿದ್ದಾರೆ.

ಶಾಸಕ ರವಿಕುಮಾರ್ ಗಣಿಗ ಪ್ರತಿಕ್ರಿಯೆ ನೀಡಿದ್ದು, ಆಲ್ ದಿ ಬೆಸ್ಟ್ ಯತೀಂದ್ರ ಅವರಿಗೆ. ನಾಯಕತ್ವ ವಿಚಾರದ ಬಗ್ಗೆ ನಮ್ಮ ಹೈಕಮಾಂಡ್ ತೀರ್ಮಾನ ಮಾಡುತ್ತೆ. ಸಿದ್ದರಾಮಯ್ಯ ಸಾಹೇಬ್ರು ಏನು ಹೇಳಿದ್ರು. ಹೈಕಮಾಂಡ್ ಹೇಳಿದ ದಿನ ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ ಎಂಬುದನ್ನ ಹೇಳಿದ್ದಾರೆ. ಸೋ ಬೆಸ್ಟ್ ಆಫ್ ಲಕ್ ಯತೀಂದ್ರ ಅಂತ ಹೇಳಬಹುದು ಎಂದಿದ್ದಾರೆ. ಕುಣಿಗಲ್ ರಂಗನಾಥ್ ಅವರು ಮಾತನಾಡಿದ್ದು, ನನಗೆ ಮಾತನಾಡಿ ಅಂದಿದ್ದಾರೆ, ನಾನು ಮಾತನಾಡಲ್ಲ. ಹೈಕಮಾಂಡ್ ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳುತ್ತದೆ ಎಂದು ಕುಣಿಗಲ್ ರಂಗನಾಥ್ ತಿಳಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now