Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮಾಜಿ ಪ್ರಧಾನಿ ದೇವೇಗೌಡರನ್ನು ಭೇಟಿಯಾದ ಡಿ.ಕೆ. ಶಿವಕುಮಾರ್ : ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮಕ್ಕೆ ಆಹ್ವಾನ

---Advertisement---

ಸುದ್ದಿಒನ್,ಬೆಂಗಳೂರು,ಜೂನ್.03: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಇಂದು ಸಂಜೆ ಅಧಿಕಾರ ಸ್ವೀಕರಿಸಲಿರುವ ಡಿ.ಕೆ. ಶಿವಕುಮಾರ್ ಅವರು, ಪ್ರಮಾಣವಚನ ಕಾರ್ಯಕ್ರಮಕ್ಕೂ ಮುನ್ನ ಮಹತ್ವದ ರಾಜಕೀಯ ಭೇಟಿಗಳನ್ನು ಮುಂದುವರಿಸಿದ್ದಾರೆ.

ಇಂದು ಬೆಳಗ್ಗೆ ಮಾಜಿ ಸಿಎಂಗಳಾದ ಸಿದ್ದರಾಮಯ್ಯ ಹಾಗೂ ಬಿ.ಎಸ್. ಯಡಿಯೂರಪ್ಪ ಅವರನ್ನು ಆಮಂತ್ರಿಸಿದ ಬೆನ್ನಲ್ಲೇ, ಡಿಕೆಶಿ ಅವರು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ. ದೇವೇಗೌಡ ಅವರನ್ನು ಮುಖತಃ ಭೇಟಿಯಾಗಿ ಆಶೀರ್ವಾದ ಪಡೆದಿದ್ದಾರೆ.

ಇಂದು ಇಂದು ಸಂಜೆ ಲೋಕಭವನ ನಡೆಯಲಿರುವ ಅದ್ಧೂರಿ ಪದಗ್ರಹಣ ಕಾರ್ಯಕ್ರಮಕ್ಕೆ ಸಾಕ್ಷಿಯಾಗುವಂತೆ ಹಿರಿಯ ನಾಯಕ ಹೆಚ್.ಡಿ. ದೇವೇಗೌಡ ಅವರಿಗೆ ಡಿ.ಕೆ. ಶಿವಕುಮಾರ್ ಅವರು ಅಧಿಕೃತವಾಗಿ ಆಹ್ವಾನ ಪತ್ರಿಕೆ ನೀಡಿದರು. ಹಿರಿಯ ಮುಖಂಡರ ನಿವಾಸಕ್ಕೆ ತೆರಳಿದ ಡಿಕೆಶಿ, ಅತ್ಯಂತ ಆತ್ಮೀಯವಾಗಿ ಕಾರ್ಯಕ್ರಮಕ್ಕೆ ಆಮಂತ್ರಿಸಿದ್ದು, ರಾಜ್ಯ ರಾಜಕಾರಣದಲ್ಲಿ ಈ ಭೇಟಿ ತೀವ್ರ ಕುತೂಹಲ ಮೂಡಿಸಿದೆ.

Join WhatsApp

Join Now

Join Telegram

Join Now