in ,

2-3 ಕ್ಷೇತ್ರ ಬಿಟ್ಟು ಉಳಿದ ಕ್ಷೇತ್ರದ ಅಭ್ಯರ್ಥಿಗಳ ಹೆಸರು ಒಂದೇ ಸಲ ಪ್ರಕಟ : ಸೋನಿಯಾ ಗಾಂಧಿ ಭೇಟಿ ಬಳಿಕ ಡಿಕೆಶಿ ಹೇಳಿಕೆ

suddione whatsapp group join

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ದೆಹಲಿಗೆ ಭೇಟಿ ಕೊಟ್ಟು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನ ಭೇಟಿಯಾಗಿದ್ದಾರೆ. ವಿಧಾನ ಪರಿಷತ್ ಚುನಾವಣೆ ಕೂಡ ಇರುವ ಕಾರಣ ಆ ಬಗ್ಗೆಯೂ ಚರ್ಚೆ ನಡೆದಿದೆ.

ಇನ್ನು ಭೇಟಿ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸೋನಿಯಾ ಗಾಂಧಿ ಅವರನ್ನು ಭೇಟಿಯಾಗಿ ಹಲವು ವಿಚಾರಗಳನ್ನು ಚರ್ಚಿಸಿದ್ದೇನೆ. ಅದರಲ್ಲೂ ಮುಖ್ಯವಾಗಿ ವಿಧಾನ ಪರಿಷತ್ ಚುನಾವಣೆ ಬಗ್ಗೆ ಚರ್ಚೆ ನಡೆಸಲಾಗಿದೆ. ಅಭ್ಯರ್ಥಿಗಳ ಬಗ್ಗೆಯೂ ಮಾತುಕತೆ ನಡೆದಿದೆ. 2-3 ಕ್ಷೇತ್ರ ಬಿಟ್ಟು ಇನ್ನುಳಿದ ಕ್ಷೇತ್ರಗಳಲ್ಲಿ ಒಂದೇ ಸಲಕ್ಕೆ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಲಾಗುವುದು ಎಂದಿದ್ದಾರೆ.

ಟ್ವಿಟ್ಟರ್ ನಲ್ಲೂ ಫೋಟೋ ಶೇರ್ ಮಾಡಿ, ಈ ವಿಚಾರ ಹಂಚಿಕೊಂಡಿರುವ ಡಿ ಕೆ ಶಿವಕುಮಾರ್, ಶ್ರೀಮತಿ ಸೋನಿಯಾ ಗಾಂಧಿ ಅವರನ್ನು ಭೇಟಿಯಾಗಲು ಅವಕಾಶ ಸಿಕ್ಕಿತ್ತು. ರಾಜಕೀಯಕ್ಕೆ ಸಂಬಂಧಿಸಿದಂತೆ ಹಲವು ವಿಚಾರಗಳನ್ನ ಚರ್ಚಿಸಿದ್ದೇನೆ ಎಂದಿದ್ದಾರೆ.

What do you think?

-1 Points
Upvote Downvote

Written by suddionenews

Leave a Reply

Your email address will not be published. Required fields are marked *

GIPHY App Key not set. Please check settings

ಸೂರಜ್ ರೇವಣ್ಣ ವಿರುದ್ಧ ಗೆಲ್ಲುವುದು ಕಷ್ಟವಲ್ಲ : ಕಾಂಗ್ರೆಸ್ ಮುಖಂಡ ಶಂಕರ್

ಈ ರಾಶಿಯವರು ನಿಮ್ಮ ನಿರೀಕ್ಷೆ ಮೀರಿ ಹಣ ಗಳಿಸುವಿರಿ..!