Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಗೃಹ ಸಚಿವ ಅರಗ ಜ್ಞಾನೇಂದ್ರ ಒಬ್ಬ ಹುಚ್ಚ, ಅವರಿಗೆ ತುರ್ತು ಚಿಕಿತ್ಸೆ ಅಗತ್ಯವಿದೆ: ಡಿ.ಕೆ. ಶಿವಕುಮಾರ್

Facebook
Twitter
Telegram
WhatsApp

ಬೆಂಗಳೂರು: ಗೃಹ ಸಚಿವ ಅರಗ ಜ್ಞಾನೇಂದ್ರ ಒಬ್ಬ ಹುಚ್ಚ. ಹೀಗಾಗಿ ಏನೇನೋ ಮಾತಾಡುತ್ತಿದ್ದಾರೆ. ಅವರಿಗೆ ತುರ್ತು ಚಿಕಿತ್ಸೆ ಅಗತ್ಯವಿದೆ. ಅವರನ್ನು ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲಿಸಬೇಕಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಟೀಕಿಸಿದ್ದಾರೆ.

ಬೆಂಗಳೂರಿನ ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳಿಗೆ ಅವರು ಗುರುವಾರ ಪ್ರತಿಕ್ರಿಯೆ ನೀಡಿದರು.

ಬಿಟ್ ಕಾಯಿನ್ ಹ್ಯಾಕಿಂಗ್ ಆರೋಪಿ ಶ್ರೀಕಿಯನ್ನು ಬಳಸಿಕೊಂಡು ಯುವ ಕಾಂಗ್ರೆಸ್ ಅಧ್ಯಕ್ಷರ ಚುನಾವಣೆಯಲ್ಲಿ ಅಕ್ರಮ ಎಸಗಿರುವ ಬಗ್ಗೆ ಕಾಂಗ್ರೆಸ್ ನಾಯಕರು ತಮಗೆ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ದೂರು ಬಂದರೆ ತನಿಖೆ ನಡೆಸುವುದಾಗಿ ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿರುವ ಬಗ್ಗೆ ಮಾಧ್ಯಮದವರ ಪ್ರಸ್ತಾಪಕ್ಕೆ ಶಿವಕುಮಾರ್ ಅವರು ಹೀಗೆ ಪ್ರತಿಕ್ರಿಯೆ ವ್ಯಕ್ತಪಡಿಸಿದರು.

ಬಿಟ್ ಕಾಯಿನ್ ಹಗರಣದ ಬಗ್ಗೆ ಪ್ರಧಾನಿ ಅವರಿಗೆ ಲಿಖಿತ ದೂರು ಹೋಗಿದೆ. ಇದು ಅಧಿಕೃತ ಪತ್ರ. ಅದರಲ್ಲಿ ಸಿಎಂ ಕುಟುಂಬದ ಸದಸ್ಯರು, ಹಲವು ಮಂತ್ರಿಗಳು, ಬಿಜೆಪಿ ರಾಜ್ಯಾಧ್ಯಕ್ಷರು, ಸಂಸತ್ ಸದಸ್ಯರು ಸೇರಿದಂತೆ ಹಲವರ ಹೆಸರುಗಳು ಇವೆ. ಅವರು ಹಗರಣದಲ್ಲಿ ಶಾಮೀಲಾಗಿದ್ದಾರೆ ಎಂದು ಆರೋಪಿಸಲಾಗಿದೆ. ಗೃಹ ಸಚಿವರು ಮೊದಲು ಈ ದೂರಿನ ಬಗ್ಗೆ ಸುಮೊಟೋ ಕೇಸು ದಾಖಲಿಸಿ, ತನಿಖೆ ಮಾಡಿಸಲಿ. ಆಮೇಲೆ ಯೂತ್ ಕಾಂಗ್ರೆಸ್ ಬಗ್ಗೆ ಮಾತಾಡಲಿ ಎಂದು ಖಾರವಾಗಿ ಹೇಳಿದರು.

ಯುವ ಕಾಂಗ್ರೆಸ್ ಅಧ್ಯಕ್ಷರ ಚುನಾವಣೆ ನಡೆದಾಗ ಶ್ರೀಕಿ ಜೈಲಿನಲ್ಲಿದ್ದನಲ್ಲಾ, ಅವನು ಹೇಗೆ ನಲಪಾಡ್ ಪರ ರಿಗ್ಗಿಂಗ್ ಗೆ (ನಕಲಿ ಮತದಾನ) ಸಹಾಯ ಮಾಡಲು ಸಾಧ್ಯ ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಶಿವಕುಮಾರ್ ಅವರು, ಅದಕ್ಕೆ ನಾನು ಹೇಳಿದ್ದು ಹೋಮ್ ಮಿನಿಸ್ಟರ್ ಒಬ್ಬ ಹುಚ್ಚ ಎಂದು. ಅವರಿಗೆ ಸಾಮಾನ್ಯ ಜ್ಞಾನವೇ ಇಲ್ಲ. ನಾನು ಏನು ಮಾತನಾಡುತ್ತಿದ್ದೇನೆ ಎಂಬುದರ ಪರಿವೆಯೇ ಇಲ್ಲ. ಹೀಗಾಗಿ ಅವರನ್ನು ಮೊದಲು ನಿಮ್ಹಾನ್ಸ್ ಗೆ ದಾಖಲಿಸಿ ಚಿಕಿತ್ದೆ ಕೊಡಿಸಬೇಕಿದೆ ಎಂದರು.

ಶ್ರೀಕಿ ಜೈಲಿನಲ್ಲಿದ್ದಾಗ ಅವರಿಗೆ ಲ್ಯಾಪ್ ಟಾಪ್ ಅಥವಾ ಕಂಪ್ಯೂಟರ್ ಒದಗಿಸಿ, ಹ್ಯಾಕಿಂಗ್ ಮಾಡಿರಬಹುದು ಎಂಬ ಮಾತುಗಳಿವೆಯಲ್ಲ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ವ್ಯಕ್ತಪಡಿಸಿದ ಅವರು, ‘ಅದನ್ನೇ ನಾನು ಹೇಳುತ್ತಿರುವುದು. ನನ್ನ ಮಗನಿಗೆ ಕಸ್ಟಡಿಲ್ಲಿದ್ದಾಗ ಪೊಲೀಸರು ಡ್ರಗ್ಸ್ ಸರಬರಾಜು ಮಾಡಿದ್ದಾರೆ ಎಂದು ಶ್ರೀಕಿ ಅವರ ತಂದೆ ನ್ಯಾಯಾಲಯಕ್ಕೆ ದೂರು ಸಲ್ಲಿಸಿದ್ದಾರೆ. ಶ್ರೀಕಿ ಕೂಡ ನ್ಯಾಯಾಲಯಕ್ಕೆ ನೀಡಿರುವ ಹೇಳಿಕೆಯಲ್ಲಿ ಇದನ್ನು ಒಪ್ಪಿಕೊಂಡಿದ್ದಾನೆ. ಕೋರ್ಟ್ ಕೂಡ ಈ ಬಗ್ಗೆ ತನಿಖೆಗೆ ಆದೇಶಿಸಿದೆ ಎಂದು ಹೇಳಿದರು.

ಶ್ರೀಕಿಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡರಸಿ ಎಂದು ಕೋರ್ಟ್ ಸ್ಪಷ್ಟ ಆದೇಶ ನೀಡಿದ್ದರೂ ಅದನ್ನು ಮಾಡಿಲ್ಲ. ಕೋವಿಡ್ ನೆಪವೊಡ್ಡಿ ಬೇರೆ ಕಡೆ ಪರೀಕ್ಷೆ ಮಾಡಲಾಗಿದೆ. ಕೋರ್ಟ್ ಕೂಡ ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದೆ. ಯಾಕಾಗಿ ಬೇರೆ ಕಡೆ ಪರೀಕ್ಷೆ ಮಾಡಿಸಿದರು? ಯಾರು ಇದಕ್ಕೆ ಜವಾಬ್ದಾರರು? ಯಾವ ಮಂತ್ರಿಗಳು ಜವಾಬ್ದಾರರು? ಬೇರೆ ಯಾರೆಲ್ಲ ಇದಕ್ಕೆ ಹೊಣೆಗಾರರು ಎಂಬುದು ಹೊರಬರಬೇಕಲ್ಲವೇ? ಆದರೆ ಅಪ್ರಬುದ್ಧ, ಜ್ಞಾನವೇ ಇಲ್ಲದ ಗೃಹ ಸಚಿವರು ಶಾಲಾ ಬಾಲಕನಂತೆ ಮಾತನಾಡುತ್ತಿದ್ದಾರೆ ಎಂದು ಛೇಡಿಸಿದರು.

ನೀವು ಈ ಬಗ್ಗೆ ಹೋರಾಟ, ಪ್ರತಿಭಟನೆ ಹಮ್ಮಿಕೊಳ್ಳುತ್ತೀರಾ ಎಂಬ ಪ್ರಶ್ನೆಗೆ, ‘ನಾನು ವಿಧಾನ ಪರಿಷತ್ ಚುನಾವಣೆ ಪ್ರಕ್ರಿಯೆಯಲ್ಲಿ ನಿರತನಾಗಿದ್ದೇನೆ. ನನ್ನ ಸಹೋದ್ಯೋಗಿಗಳು ಇದನ್ನು ಸೂಕ್ತ ರೀತಿಯಲ್ಲಿ ನಿಭಾಯಿಸಲಿದ್ದಾರೆ ಎಂದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ದಾಖಲೆ ಇಲ್ಲದೆ ಸಾಗಿಸುತ್ತಿದ್ದ 20 ಲಕ್ಷ ವಶಕ್ಕೆ 

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್, 19 :  ನಗರದ ತಿರುಮಲ ಡಾಬ ಚೆಕ್ ಪೋಸ್ಟ್ ಬಳಿಯಲ್ಲಿ ಮಧ್ಯಾಹ್ನ ಸುಮಾರು 3.00 ಗಂಟೆ ಸಮಯದಲ್ಲಿ ಯಾವುದೇ ಸೂಕ್ತ ದಾಖಲಾತಿ ಇಲ್ಲದೆ ಸಾಗಿಸುತ್ತಿದ್ದ ರೂ.20,93,928 ರ ಮೊತ್ತವನ್ನು ಸಂಬಂಧಿಸಿದ

ಇದು ಪಿಕ್ ಪಾಕೆಟ್ ಸರ್ಕಾರ : ಹಿರಿಯೂರಿನಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

ಸುದ್ದಿಒನ್, ಹಿರಿಯೂರು, ಏಪ್ರಿಲ್, 19  : ಗ್ಯಾರಂಟಿ ಯೋಜನೆ ಅಡಿಯಲ್ಲಿ ಮಹಿಳೆಯರಿಗೆ 2 ಸಾವಿರ ಹಣ ಕೊಟ್ಟು ಕುಟುಂಬದ ಮುಖ್ಯಸ್ಥರಿಂದ ಪ್ರತಿ ತಿಂಗಳು  5 ರಿಂದ 6 ಸಾವಿರ ವಸೂಲಿ ಮಾಡುತ್ತಿದ್ದಾರೆ . ಇದು

error: Content is protected !!