Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಡಿಕೆ ಶಿವಕುಮಾರ್ ಸಿಎಂ ಆಗಲಿ ಅಂದ್ರು ಆದಿಚುಂಚನಗಿರಿ ಸ್ವಾಮೀಜಿ

---Advertisement---

ಹಾಸನ: ಡಿಸಿಎಂ ಡಿಕೆ ಶಿವಕುಮಾರ್ ಅವರಿಗೂ ಸಿಎಂ ಆಗುವ ಅವಕಾಶ ನೀಡಲಿ ಎಂದು ಒಕ್ಕಲಿಗ ಸಮುದಾಯದವರು ಆಸೆ ಪಡ್ತಾ ಇದ್ದಾರೆ. ಅದಕ್ಕಾಗಿ ದೆಹಲಿ ತನಕ ಹೋಗಿಯು ಮನವಿ ಮಾಡಿ ಬಂದಿದ್ದಾರೆ. ಇದೀಗ ಆದಿಚುಂಚನಗಿರಿಯ ಪೀಠಾಧಿಪತಿ ನಿರ್ಮಲಾನಂದ ಸ್ವಾಮೀಜಿ ಅವರು ಡಿಕೆ ಶಿವಕುಮಾರ್ ಅವರು ಸಿಎಂ ಆಗಲಿ ಎಂದೇ ಬಯಸಿದ್ದಾರೆ.

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಕುಂದೂರು ಮಠದಲ್ಲಿ ಮಾತನಾಡಿದ ನಿರ್ಮಲಾನಂದ ಸ್ವಾಮಿಗಳು, ಸದ್ಯದ ರಾಜಕೀಯ ಬೆಳವಣಿಗೆಯನ್ನು ಮಾಧ್ಯಮಗಳಲ್ಲಿ ನೋಡುತ್ತಿದ್ದೇನೆ. ನಮ್ಮವರೊಬ್ಬರು ಸಿಎಂ ಆಗ್ತಾರೆ ಅಂತ ಅಂದುಕೊಂಡಿದ್ದೇವೆ. ಈಗ ಎರಡೂವರೆ ವರ್ಷ ಆದ ಮೇಲೆ ನಮ್ಮ ಸಮುದಾಯದವರು, ಸಿಎಂ ಆಗುತ್ತಾರೆ ಎಂದುಕೊಂಡಿದ್ದೇವೆ. ಡಿಕೆಶಿ ಎರಡೂವರೆ ವರ್ಷ ಆದ ಮೇಲೆ ಸಿಎಂ ಆಗಬೇಕು ಎಂದುಕೊಂಡಿದ್ದೇವೆ. ಡಿಕೆಶಿ ಎರಡೂವರೆ ವರ್ಷ ಆದಮೇಲೆ ಸಿಎಂ ಆಗ್ಬೇಕು ಎಂಬ ಆಸೆ ನಮಗೂ ಇದೆ. ಇನ್ನುಳಿದ ಎರಡೂವರೆ ವರ್ಷ ಡಿಕೆಶಿ ಅಭಿಲಾಷೆ ನಮಗು ಇದೆ ಎಂದಿದ್ದಾರೆ. ಸಾವಿರಾ್ಉ ಭಕ್ತರು ಕರೆ ಮಾಡುತ್ತಾರೆ. ಮೂರು ಪಕ್ಷಗಳಲ್ಲೂ ಒಳ್ಳೆಯ ನಾಯಕರಿದ್ದಾರೆ.

ಡಿಕೆ ಶಿವಕುಮಾರ್ ಶಿಸ್ತಿನ ಸಿಪಾಯಿ. ಪಕ್ಷದ ಏಳಿಗೆಗಾಗಿ ದುಡಿದಿದ್ದಾರೆ. ಡಿಕೆಶಿ ಸಿಎಂ ಆಗಬೇಕು. ಭಕ್ತರು ನಮ್ಮ ಜೊತೆ ಹೇಳಿಕೊಂಡಿದ್ದಾರೆ.  ಡಿಕೆಶಿ ಸಿಎಂ ಆಗಬೇಕೆಂದು ಭಕ್ತರು ಆಸೆ ವ್ಯಕ್ತಪಡಿಸಿದ್ದಾರೆ . ಎರಡೂವರೆ ಎರಡೂವರೆ ಅಧಿಕಾರ ಹಂಚಿಕೆ ವಿಚಾರ ಜನರು ಚರ್ಚೆ ಮಾಡುತ್ತಿದ್ದಾರೆ . ಡಿಕೆಶಿಗೆ ರಾಜಕೀಯ ಒಳಸುಳಿ ಗೊತ್ತಿದೆ . ರಾಜ್ಯದಲ್ಲಿ  ರಾಜಕೀಯ ಅಸ್ಥಿರತೆ ಆದ್ರೆ ಅಭಿವೃದ್ಧಿ ಕುಂಠಿತವಾಗುತ್ತದೆ .  ಅಭಿವೃದ್ಧಿ ಮಾರಕವಾಗುತ್ತದೆ.  ನಮ್ಮ ರಾಜ್ಯದ ಹಿತದೃಷ್ಟಿಯಿಂದ, ಹೈಕಮಾಂಡ್ ಸಮಸ್ಯೆ ಬಗೆಹರಿಸಲಿ ಎಂದು ಆದಿಚುಂಚನಗಿರಿ ಪೀಠಾಧಿಪತಿ ನಿರ್ಮಲಾನಂದನಾಥ ಸ್ವಾಮೀಜಿ ಹೇಳಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now