Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಡಿಕೆ ಶಿವಕುಮಾರ್ ಸಿಎಂ ಆಗಲಿ : ಮಾಜಿ ಸಚಿವ ಅಶ್ವತ್ಥ್ ನಾರಾಯಣ್ ಹಾರೈಕೆ

---Advertisement---

ಬೆಂಗಳೂರು: ಕೆಲವೊಂದು ಸಲ ರಾಜಕಾರಣಿಗಳು ನಡೆದುಕೊಳ್ಳುವ ರೀತಿ, ರಾಜಕೀಯವೇ ಬೇರೆ ವೈಯಕ್ತಿಕ ಅಭಿಪ್ರಾಯವೇ ಬೇರೆ ಎನಿಸಿಬಿಡುತ್ತದೆ. ಅದು ಮತ್ತೊಮ್ಮೆ ಇಂದು ಪ್ರೂವ್ ಆಗಿದೆ. ಸರ್ಕಾರಿ ಕಾರ್ಯಕ್ರಮದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಮಾಜಿ ಸಚಿವ ಅಶ್ವತ್ಥ್ ನಾರಾಯಣ್ ಅವರು ಭಾಗಿಯಾಗಿದ್ದರು. ಈ ವೇಳೆ ಅಶ್ವತ್ಥ್ ನಾರಾಯಣ್ ಅವರು ಡಿಕೆ ಶಿವಕುಮಾರ್ ಅವರ ಬಗ್ಗೆ ಹಾಡಿ ಹೊಗಳಿದ್ದಾರೆ.

 

ಬಾಗಿಲಿಗೆ ಬಂತು ಸರ್ಕಾರ ಸೇವೆಗೆ ಇರಲಿ ಸಹಕಾರ ಎಂಬ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರುಮ ಡಿಕೆ ಶಿವಕುಮಾರ್ ಸಿಎಂ ಆಗಲಿ ಎಂದು ಈ ಕಾರ್ಯಕ್ರಮದ ಮೂಲಕ ಹಾರೈಸಿದ್ದಾರೆ. ಇನ್ನು ಉನ್ನತ ಮಟ್ಟಕ್ಕೆ ಹೋಗಲಿ, ಇನ್ನೂ ಎತ್ತರಕ್ಕೆ ಬೆಳೆಯಲಿ ಎಂದಿದ್ದಾರೆ.

ಕಾಂಗ್ರೆಸ್ ಸರ್ಕಾರದಿಂದ ಜನಸ್ಪಂದನಾ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಜನರ ಸಮಸ್ಯೆಗಳನ್ನು ಡಿಸಿಎಂ ಡಿಕೆ ಶಿವಕುಮಾರ್ ಆಲಿಸಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಅಶ್ವತ್ಥ್ ನಾರಾಯಣ್ ಅವರ ಒಂದೊಂದು ಮಾತಿಗೂ ಡಿಕೆಶಿ ಬೆಂಬಲಿಗರು ಸಂತಸಪಟ್ಟರು. ಡಿಕೆ ಶಿವಕುಮಾರ್ ಕೂಡ ಈ ಮಾತು ಕೇಳಿಸಿಕೊಂಡು ಒಂದು ಸ್ಮೈಲ್ ನೀಡಿ ಸುಮ್ಮನೆ ಆದರು. ಜಮೀರ್ ಅಹ್ಮದ್ ಮಾತ್ರ ಜೋರು ಚಪ್ಪಾಳೆ ತಟ್ಟಿದರು. ಡಿಕೆ ಶಿವಕುಮಾರ್ ಮುಂದೆ ಸಿಎಂ ಆಗಲಿ ಎಂಬ ಮಾತಿಗೆ ಸಭೆಯಲ್ಲಿ ನೆರೆದಿದ್ದ ಜನ ತುಂಬಾ ಖುಷಿ ಪಟ್ಟು ಚಪ್ಪಾಳೆ ಹೊಡೆದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...