ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
ಬೆಂಗಳೂರು: ಅಥಣಿ ಕ್ಷೇತ್ರದ ಟಿಕೆಟ್ ಸಿಗದ ಕಾರಣಕ್ಕೆ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ರಾಜೀನಾಮೆ ನೀಡಲು ನಿರ್ಧಾರ ಮಾಡಿದ್ದಾರೆ. ಸದ್ಯ ರಾಜೀನಾಮೆ ಪತ್ರ ತಲುಪಿಸಲು ಬೆಂಗಳೂರಿಗೆ ಬಂದು ಇಳಿದಿದ್ದಾರೆ. ಸವದಿ ಅವರ ಹಿಂದೆ ಡಿಕೆ ಶಿವಕುಮಾರ್ ಅವರಿದ್ದಾರೆ ಎನ್ನಲಾಗಿದೆ.
ಸದ್ಯ ಸವದಿ ಅವರು ಸಾಂಬ್ರಾದಿಂದ ಬೆಂಗಳೂರಿಗೆ ಬಂದಿಳಿದಿದ್ದಾರೆ. ಸವದಿಯನ್ನು ಬೆಂಗಳೂರಿಗೆ ಕರೆತರಲು ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ನೀಡಲಾಗಿತ್ತು. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ನೀಡಿದ ಜವಬ್ದಾರಿಯನ್ನು ಅಚ್ಚುಕಟ್ಟಾಗಿ ನಿಭಾಯಿಸಿದ್ದಾರೆ. ಈಗಾಗಲೇ ಸವದಿ ಅವರು ಬೆಂಗಳೂರಿಗೆ ಬಂದಿದ್ದಾರೆ. ಸಿಡಿದೆದ್ದಿರುವ ಲಕ್ಷ್ಮಣ ಸವದಿ ಅವರನ್ನು ಸಮಾಧಾನ ಪಡಿಸಲು ಬಿಜೆಪಿ ಕೂಡ ಪ್ರಯತ್ನ ಮಾಡಿದೆ. ಆದರೆ ಬಿಜೆಪಿ ನಾಯಕರಿಗೆ ಸಿಗದಂತೆ ಕಾಯಲಾಗಿದೆ ಎಂಬ ಮಾತುಗಳು ಕೇಳಿ ಬರುತ್ತಿದೆ.
ಲಕ್ಷ್ಮಣ ಸವದಿ ಅವರಿಗೆ ವಿಶೇಷ ವಿಮಾನ ಬುಕ್ ಮಾಡಿದ್ದೆ ಡಿಕೆ ಶಿವಕುಮಾರ್ ಎನ್ನಲಾಗಿದೆ. ಸವದಿ ಜೊತೆಗೆ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಸಹೋದರ ಚನ್ಬರಾಜ ಹಟ್ಟಿಹೊಳಿ ಕೂಡ ಕಾಣಿಸಿಕೊಂಡಿದ್ದಾರೆ. ಸದ್ಯ ಸವದಿ ಬೆಂಗಳೂರಿನ ಅವರ ನಿವಾಸ ತಲುಪಿದ್ದಾರೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್