Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಡಿ.ಕೆ.ಶಿವಕುಮಾರ್ ಮತೀಯ ಶಕ್ತಿಗಳೊಡನೆ ಕೈಜೋಡಿಸುವುದಿಲ್ಲ : ವಿ.ಎಸ್.ಉಗ್ರಪ್ಪ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ. ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 27 : ಪಕ್ಷ ನಿಷ್ಟರಾಗಿರುವ ರಾಜ್ಯದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಯಾವುದೇ ಕಾರಣಕ್ಕೂ ಮತೀಯ ಶಕ್ತಿಗಳೊಡನೆ ಕೈಜೋಡಿಸುವುದಿಲ್ಲವೆಂದು ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಸ್ಪಷ್ಠಪಡಿಸಿದರು.

ಬಚ್ಚಬೋರನಹಟ್ಟಿ ಸಮೀಪವಿರುವ ಎಸ್.ಪಿ.ಆನಂದ್‍ರವರ ಕುರಿ ಫಾರಂನ್ನು ಗುರುವಾರ ವೀಕ್ಷಿಸಿದ ನಂತರ ಪತ್ರಿಕೆಯೊಂದಿಗೆ ಮಾತನಾಡಿದ ಅವರು ಡಿ.ಕೆ.ಶಿ.ರವರು ಬಿಜೆಪಿ. ಸೇರುತ್ತಾರೆಂಬ ಊಹಾ ಪೋಹಗಳು ಸತ್ಯಕ್ಕೆ ದೂರವಾದುದು. ಬಿಜೆಪಿ. ಹಾಗೂ ಅವರ ರಾಜಕೀಯ ವೈರಿಗಳು ಹಬ್ಬಿಸುತ್ತಿರುವ ಇಂತಹ ಅಪ ಪ್ರಚಾರ ನಿಲ್ಲಬೇಕು. ಇಂದಿರಾಗಾಂಧಿ ಕುಟುಂಬಕ್ಕೆ ನಿಷ್ಟರಾಗಿರುವ ಡಿ.ಕೆ.ಶಿವಕುಮಾರ್‍ರವರು ಎಂದಿಗೂ ಅಧಿಕಾರಕ್ಕಾಗಿ ಆಸೆ ಪಟ್ಟವರಲ್ಲ. ಜಾತ್ಯಾತೀತ ಸಿದ್ದಾಂತಗಳ ಮೇಲೆ ನಂಬಿಕೆಯಿಟ್ಟು ರಾಜಕೀಯ ಬದುಕು ಕಟ್ಟಿಕೊಂಡವರು. ಹೈಕಮಾಂಡ್ ನೀಡಿರುವ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸುತ್ತಿದ್ದಾರೆ. 2028 ರ ಚುನಾವಣೆಯು ನನ್ನ ನಾಯಕತ್ವದಲ್ಲಿಯೇ ನಡೆಯುತ್ತದೆಂದು ಹೇಳಿರುವಾಗ ಬಿಜೆಪಿ. ಸೇರುವ ಮಾತೆಲ್ಲಿಂದ ಬಂತು. ಇದೆಲ್ಲಾ ವಿರೋಧಿಗಳ ಕುಹಕ ಎಂದು ಡಿ.ಕೆ.ಶಿ. ಬಗ್ಗೆ ವಿವಾದ ಹುಟ್ಟುಹಾಕುತ್ತಿರುವವರಿಗೆ ವಿ.ಎಸ್.ಉಗ್ರಪ್ಪ ತಿರುಗೇಟು ನೀಡಿದರು.

ಪಕ್ಷದಲ್ಲಿ ಯಾವುದೇ ಸ್ಥಾನಮಾನಗಳ ಬಗ್ಗೆ ಡಿ.ಕೆ.ಶಿವಕುಮಾರ್ ಎಂದಿಗೂ ಚಿಂತಿಸಿದವರಲ್ಲ. ಯಾವ ಕಾಲಘಟ್ಟದಲ್ಲಿ ಯಾರಿಗೆ ಮುಖ್ಯಮಂತ್ರಿ ಸ್ಥಾನ ನೀಡಬೇಕೆಂಬುದನ್ನು ಹೈಕಮಾಂಡ್ ನಿರ್ಧರಿಸುತ್ತದೆ. ಕಾಂಗ್ರೆಸ್ ಮೇಲೆ ಅಚಲವಾದ ನಂಬಿಕೆಯಿಟ್ಟಿರುವ ಅವರು ಎಂದಿಗೂ ಬಿಜೆಪಿ. ಕಡೆ ಮುಖ ಮಾಡಿದವರಲ್ಲ. ಪಕ್ಷದಲ್ಲಿಯೇ ಉಳಿದು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಶಕ್ತಿಯಾಗಿರುತ್ತಾರೆಂದು ಹೇಳಿದರು.

ಎಸ್.ಪಿ.ಆನಂದ್, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಡಾ.ದೊಡ್ಡಮಲ್ಲಯ್ಯ ಈ ಸಂದರ್ಭದಲ್ಲಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...