ರಾಮನಗರ: ಮೇಕೆದಾಟು ಯೋಜನೆಗೆ ಸರ್ಕಾರಕ್ಕೆ ಒತ್ತಡ ಹೇರಲು ಕಾಂಗ್ರೆಸ್ ನಾಯಕರು ಪಾದಯಾತ್ರೆ ನಡೆಸಲು ಈಗಾಗಲೇ ಸಿದ್ಧತೆ ನಡೆಸಿದೆ. ಈ ಹಿನ್ನೆಲೆ ಅಣೆಕಟ್ಟು ನಿರ್ಮಿಸಲು ಯೋಜನೆ ರೂಪಿಸಿರುವ ಸ್ಥಳಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ಅಷ್ಟೇ ಅಲ್ಲ ಕೆಲವು ನಾಯಕರೊಂದಿಗೆ ಸಂಗಮಕ್ಕೆ ತೆರಳಿದ್ದ ಡಿ ಕೆ ಶಿವಕುಮಾರ್ ತೆಪ್ಪ ವಿಹಾರವನ್ನು ನಡೆಸಿದ್ದಾರೆ. ಮೇಕೆದಾಟು ಯೋಜನೆ ಮುಂದುವರೆಸಲು ಸರ್ಕಾರಕ್ಕೆ ಒತ್ತಡ ಹಾಕಲು ಎಲ್ಲಾ ತಯಾರಿ ನಡೆಸಿದ್ದಾರೆ.
ಮೇಕೆದಾಟು ಯೋಜನೆಗಾಗಿ ಮೇಕೆದಾಟುವಿನಿಂದ ಬೆಂಗಳೂರಿನ ತನಕ ಪಾದಯಾತ್ರೆ ಮಾಡಲು ನಿರ್ಧರಿಸಿದ್ದಾರೆ. ಈ ಸಂಬಂಧ ಕಾಂಗ್ರೆಸ್ ನಾಯಕರ ಜೊತೆ ಸಭೆಯೊಂದನ್ನ ಮಾಡಿ, ಚರ್ಚಿಸಿ, ದಿನಾಂಕ ನಿಗಧಿ ಮಾಡುವುದಾಗಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹೇಳಿದ್ದಾರೆ. ಜನವರಿ ಮೊದಲ ವಾರದಲ್ಲೇ ಪಾದಯಾತ್ರೆ ಮಾಡಲು ತೀರ್ಮಾನಿಸಲಾಗಿದೆ ಎನ್ನಲಾಗಿದೆ.