ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
ಬೆಂಗಳೂರು: ಡಿಕೆ ಶಿವಕುಮಾರ್ ಸದ್ಯಕ್ಕೆ ಹಲವು ಹುದ್ದೆಗಳನ್ನ ನಿರ್ವಹಿಸ್ತಾ ಇದ್ದಾರೆ. ಡಿಸಿಎಂ ಜೊತೆಗೆ ಬೆಂಗಳೂರು ಅಭಿವೃದ್ಧಿ ಖಾತೆ, ಕೆಪಿಸಿಸಿ ಅಧ್ಯಕ್ಷ ಸ್ಥಾನದ ಜವಬ್ದಾರಿಯು ಅವರ ಮೇಲಿದೆ. ಇದೀಗ ಅವರ ತಮ್ಮ ಡಿಕೆ ಸುರೇಶ್ ಅವರು ಅಧ್ಯಕ್ಷ ಸ್ಥಾನದ ಬಗ್ಗೆ ಮಾತನಾಡಿದ್ದಾರೆ. ಅವರಿಗೆ ಅಧ್ಯಕ್ಷ ಸ್ಥಾನದಲ್ಲಿ ಮುಂದುವರೆಯುವುದಕ್ಕೆ ಇಷ್ಟವಿಲ್ಲ ಎಂಬುದನ್ನ ಹೇಳಿದ್ದಾರೆ.
ಅವರಿಗೆ ಅಧ್ಯಕ್ಷ ಸ್ಥಾನದಲ್ಲಿ ಉಳಿಯಬೇಕೆಂಬ ಆಸೆಯಿಲ್ಲ. ಹೈಕಮಾಂಡ್ ಏನು ಹೇಳುತ್ತೋ ಆ ರೀತಿ ನಡೆದುಕೊಳ್ಳುತ್ತಾರೆ. ಸಂಪುಟ ಪುನರ್ ರಚನೆ ಎಂಬುದನ್ನು ನಾನು ಮಾಧ್ಯಮಗಳಲ್ಲಿ ನೋಡಿದ್ದೇನೆ. ನಾಯಕತ್ವದ ವಿಚಾರ ಹೈಕಮಾಂಡ್ ನಿರ್ಧಾರ ಮಾಡುತ್ತದೆ. ಹೈಕಮಾಂಡ್ ತೀರ್ಮಾನವೇ ಅಂತಿಮ. ಹೈಕಮಾಂಡ್ ಏನು ಮಾಡುತ್ತೆ ನೋಡೋಣಾ. ಅಂಪುಟ ಪುನರ್ ರಚನೆ ಸಿಎಂ ಸರ್ವಾಧಿಕಾರ. ಶಿವಕುಮಾರ್ ಅವರ ಸಲಹೆಯನ್ನ ಕೇಳಿದ್ರೆ ಕೊಡ್ತಾರೆ. ಸಿಎಂ ಇದ್ದಾರೆ ಅದನ್ನೆಲಲ ನೋಡಿಕೊಳ್ಳುವುದಕ್ಕೆ. ಹೈಕಮಾಂಡ್ ಹೇಳಿದ್ದನ್ನ ಶಿವಕುಮಾರ್ ಕೇಳುತ್ತಾರೆ ಎಂದಿದ್ದಾರೆ.
ಇದೆ ವೇಳೆ ನಾಯಕರ ದೆಹಲಿ ಪ್ರವಾಸದ ಬಗ್ಗೆ ಮಾತನಾಡುತ್ತಾ, ನನಗೆ ಬೇರೆ ಕೆಲಸವಿದೆ. ನಾಳೆ ನಾನು ಕೂಡ ದೆಹಲಿಗೆ ಹೋಗಬಹುದು. ನನ್ನ ಪಾಡಿದೆ ನಾನು ದೆಹಲಿಗೆ ಹೋಗ್ತೇನೆ. ಸಿಎಂ, ಡಿಸಿಎಂ ಕಾರ್ಯಕ್ರಮಕ್ಕೆ ಹೋಗಿದ್ದರು. ವಾಪಾಸ್ ಬರುತ್ತಿದ್ದಾರೆ. ಎಲ್ಲವನ್ನು ಕಾದು ನೋಡೋಣಾ ಎಂದು ಡಿಕೆ ಸುರೇಶ್ ಹೇಳಿದ್ದಾರೆ. ಈ ಮಾತು ರಾಜಕೀಯ ವಲಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೂ ಸಾಕಷ್ಟು ಕಾಂಪಿಟೇಷನ್ ಇದೆ. ಹೀಗಿರುವಾಗ ಡಿಕೆ ಶಿವಕುಮಾರ್ ಅವರು ಅಧ್ಯಕ್ಷ ಸ್ಥಾನದ ಆಸೆ ಇಟ್ಟುಕೊಂಡಿಲ್ಲ ಎಂದಾಗ ಹೈಕಮಾಂಡ್ ಆಸಕ್ತಿ ಇರೋರಿಗೆ ಅವಕಾಶ ಕೊಡುತ್ತಾ ನೋಡಬೇಕಿದೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್