ನವದೆಹಲಿ: ಡಿಕೆ ಶಿವಕುಮಾರ್ ಅವರನ್ನು ಸದ್ಯಕ್ಕೆ ಬಂಧಿಸಲ್ಲ ಎಂದು ಹೈಕೋರ್ಟ್ ಸ್ಪಷ್ಟನೆ ನೀಡಿದ್ದಾರೆ. ಅಕ್ರಮ ಹಣ ವರ್ಗಾವಣೆ ಕೇಸ್ ನಲ್ಲಿ ಇಡಿ ಅಧಿಕಾರಿಗಳು ದೆಹಲಿ ಹೈಕೋರ್ಟ್ ಗೆ ಸೂಚನೆ ನೀಡಿದ್ದಾರೆ.
ಡಿಕೆ ಶಿವಕುಮಾರ್ ಅವರು ಸಲ್ಲಿಸಿದ್ದ ಅರ್ಜಿಯೊಂದನ್ನು ಸಲ್ಲಿಸಿದ್ದರು. ತಮ್ಮ ವಿರುದ್ಧ ದಾಖಲಾದ ಎರಡನೇ ದೂರು ರದ್ದುಗೊಳಿಸುವಂತೆ, ಬಂಧನದಿಂದ ರಕ್ಷಣೆ ನೀಡುವಂತೆ ಕೋರಿ ಡಿ.ಕೆ ಶಿವಕುಮಾರ್ ದೆಹಲಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಡಿ.ಕೆ ಶಿವಕುಮಾರ್ ಪರ ಹಿರಿಯ ವಕೀಲ ಕಪಿಲ್ ಸಿಬಲ್ ವಾದ ಮಂಡಿಸಿದರು.
ಈ ಕೇಸ್ ಸಂಬಂಧ ಅದಾಗಲೇ ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ. ಎರಡನೇ ಕೇಸ್ ದಾಖಲಿಸಿ ವಿಚಾರಣೆ ನಡೆಸುವ ಅಗತ್ಯವಿರಲಿಲ್ಲ. ಇದನ್ನು ಈಗಾಗಲೇ ಸಿಬಿಐ ತನಿಖೆ ನಡೆಸುತ್ತಿದೆ. ಬಂಧನದಿಂದ ರಕ್ಷಣೆ ನೀಡಬೇಕು ಎಂದು ಮನವಿ ಮಾಡಿದರು. ಈ ಸಂಬಂಧ ವಿಚಾರಣೆ ನಡೆಸಿತ್ತು ಹೈಕೋರ್ಟ್. ವಿಚಾರಣೆಯ ವೇಳೆ ಇಡಿ ಅಧಿಕಾರಿಗಳು ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.