ಬೆಂಗಳೂರು: 2023ರ ವಿಧಾನಸಭಾ ಚುನಾವಣೆಗೆ ಈಗಾಗಲೇ ಭರ್ಜರಿ ತಯಾರಿಗಳು ನಡೆಯುತ್ತಿವೆ. ಇದರ ಜೊತೆಗೆ ಟಿಕೆಟ್ ಆಕಾಂಕ್ಷಿಗಳ ಪಟ್ಟಿಯೂ ದೊಡ್ಡದಾಗಿ ಬೆಳೆಯುತ್ತಿದೆ. ಈ ಮಧ್ಯೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಟಿಕೆಟ್ ವಿಚಾರಕ್ಕೆ ಖಡಕ್ ಸೂಚನೆ ನೀಡಿದ್ದಾರೆ. ಒಬ್ಬರಿಗೆ ಒಂದೇ ಟಿಕೆಟ್ ಅಂತ ಹೇಳಿದ್ದಾರೆ. ಇದು ಸಿದ್ದರಾಮಯ್ಯ ಅವರಿಗೆ ಟಾಂಗ್ ಕೊಟ್ಟ ರೀತಿಯಲ್ಲಿದೆ ಎಂದು ಹೇಳಲಾಗುತ್ತಿದೆ.
ಸಿದ್ದರಾಮಯ್ಯ ಸದ್ಯ ಈ ಬಾರಿ ಸ್ಪರ್ಧಿಸುವಂತ ಕ್ಷೇತ್ರ ಹುಡುಕುತ್ತಿದ್ದಾರೆ. ಟಿಕೆಟ್ ಗಾಗಿ ಅರ್ಜಿ ಸಲ್ಲಿಸಿದ್ದರು ಕೂಡ ಇನ್ನು ಕ್ಷೇತ್ರ ನಿಗದಿ ಮಾಡಿಲ್ಲ. ಹೈಕಮಾಂಡ್ ಹೇಳಿದ ಕ್ಷೇತ್ರದಿಂದ ನಿಲ್ಲುತ್ತೇನೆ ಎಂದು ಹೇಳಿದ್ದಾರೆ. ಕಲೆದ ಬಾರಿ ಎರಡು ಕ್ಷೇತ್ರಗಳಿಂದ ಸ್ಪರ್ಧೆ ನಡೆಸಿದ್ದರು. ಈ ಬಾರಿಯೂ ಅದೇ ಪ್ಲ್ಯಾನ್ ನಲ್ಲಿದ್ದರು ಎನ್ನಲಾಗುತ್ತಿತ್ತು. ಅದಕ್ಕೆ ಬ್ರೇಕ್ ಹಾಕುವಂತ ಹೇಳಿಕೆ ನೀಡಿದ್ದಾರೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು.
ಯಾರಿಗೆ ಆಗಲಿ ಒಬ್ಬರಿಗೆ ಒಂದೇ ಟಿಕೆಟ್. ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡೋಣಾ. ಇಲ್ಲಿ ವ್ಯಕ್ತಿ ಮುಖ್ಯವಾಗಬಾರದು, ಪಕ್ಷ ಮುಕ್ಯವಾಗಬೇಕು. ಪಕ್ಷ ಮೊದಲು ಅಧಿಕಾರಕ್ಕೆ ಬಂದರೆ ಎಲ್ಲರಿಗೂ ಅಧಿಕಾರ ಸಿಗುತ್ತದೆ. ಎಲ್ಲರಿಗೂ ಅವರದ್ದೇ ಆದ ಶಕ್ತಿ ಇರುತ್ತದೆ. ಸೋ ಅವರವರ ಶಕ್ತಿ ಏನು ಎಂಬುದು ಗೊತ್ತಾಗುವುದಿಲ್ಲ ಎಂದಿದ್ದಾರೆ.