Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮುಖ್ಯಮಂತ್ರಿ ಆಗಿ ಪ್ರಮಾಣವಚನಕ್ಕೂ ಮುನ್ನ ತಾಯಿ ಗೌರಮ್ಮ ಆಶೀರ್ವಾದ ಪಡೆದ ಡಿ.ಕೆ. ಶಿವಕುಮಾರ್

---Advertisement---

ಸುದ್ದಿಒನ್,ಬೆಂಗಳೂರು,ಜೂನ್.03:ಇಂದು ಸಂಜೆ ಲೋಕಭವನದಲ್ಲಿ ನಡೆಯಲಿರುವ ಭವ್ಯ ಪ್ರಮಾಣವಚನ ಸಮಾರಂಭಕ್ಕೂ ಮುನ್ನ, ಕರ್ನಾಟಕದ ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಭಾವನಾತ್ಮಕ ಕ್ಷಣವೊಂದಕ್ಕೆ ಸಾಕ್ಷಿಯಾದರು.

ಅಧಿಕಾರ ಸ್ವೀಕಾರಕ್ಕೂ ಮುನ್ನ ಬೆಂಗಳೂರಿನ ತಮ್ಮ ನಿವಾಸದಲ್ಲಿ ತಾಯಿ ಗೌರಮ್ಮ ಅವರನ್ನು ಭೇಟಿ ಮಾಡಿದ ಡಿ.ಕೆ. ಶಿವಕುಮಾರ್, ಅವರ ಪಾದಗಳಿಗೆ ನಮಸ್ಕರಿಸಿ, ತಾಯಿಯ ಆಶೀರ್ವಾದ ಪಡೆದರು. ಮಗ ರಾಜ್ಯದ ಅತ್ಯುನ್ನತ ಸ್ಥಾನಕ್ಕೇರುತ್ತಿರುವ ಈ ಸಂದರ್ಭದಲ್ಲಿ ತಾಯಿ ಗೌರಮ್ಮ ಅವರು ಹರಸಿ, ಸಿಹಿ ತಿನ್ನಿಸಿ ಹಾರೈಸಿದರು.

ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಇಂದು ಸಂಜೆ 4.05ಕ್ಕೆ ಲೋಕಭವನದ ಗಾಜಿನಮನೆಯಲ್ಲಿ ಡಿ.ಕೆ. ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಲಿದ್ದು, ಅದಕ್ಕೂ ಮುನ್ನ ಹೆತ್ತ ತಾಯಿಯ ಆಶೀರ್ವಾದ ಪಡೆದು ಭಾವುಕರಾದರು. ಈ ಸಂದರ್ಭದಲ್ಲಿ ಕುಟುಂಬದ ಇತರ ಸದಸ್ಯರು ಉಪಸ್ಥಿತರಿದ್ದರು.

Join WhatsApp

Join Now

Join Telegram

Join Now