Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನಾಳೆ ಸರ್ವ ಧರ್ಮ ಸ್ವಾಮೀಜಿಗಳ ಸಮ್ಮುಖದಲ್ಲಿ ಕರ್ನಾಟಕದ `ಮುಖ್ಯಮಂತ್ರಿ’ ಆಗಿ ಡಿಕೆಶಿ ಪ್ರಮಾಣವಚನ ಸ್ವೀಕಾರ

---Advertisement---

ಸುದ್ದಿಒನ್,ಬೆಂಗಳೂರು,ಜೂನ್.02: ಕರ್ನಾಟಕದ ರಾಜಕೀಯ ಇತಿಹಾಸದಲ್ಲೇ ಹಿಂದೆಂದೂ ಕಾಣದ ಅಪರೂಪದ ಕ್ಷಣವೊಂದಕ್ಕೆ ಸಿಲಿಕಾನ್ ಸಿಟಿ ಸಾಕ್ಷಿಯಾಗಲು ಕ್ಷಣಗಣನೆ ಆರಂಭವಾಗಿದೆ. ನಾಳೆ ಅಂದರೆ ಜೂನ್ 3ರ ಬುಧವಾರ ಸಂಜೆ 4.05ಕ್ಕೆ ಲೋಕಭವನದ ಗಾಜಿನ ಮನೆಯಲ್ಲಿ ಡಿಕೆ ಶಿವಕುಮಾರ್ ಅವರು ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಮಹತ್ವದ ಸಮಾರಂಭದ ಮೂಲಕ ನಾಡಿನಲ್ಲಿ ಶಾಂತಿ, ಸೌಹಾರ್ದತೆ ಮತ್ತು ಸರ್ವಧರ್ಮ ಸಹಿಷ್ಣುತೆಯ ಹೊಸದೊಂದು ಸಂದೇಶ ಸಾರಲು ಡಿಕೆಶಿ ಸಜ್ಜಾಗಿದ್ದಾರೆ.

ಇತಿಹಾಸದಲ್ಲೇ ಪ್ರಥಮ: 55ಕ್ಕೂ ಹೆಚ್ಚು ಧರ್ಮಗುರುಗಳ ಸಮ್ಮುಖದಲ್ಲಿ ಅಧಿಕಾರ ಸ್ವೀಕಾರ

ರಾಜ್ಯ ರಾಜಕಾರಣದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಎಲ್ಲಾ ಧರ್ಮ ಹಾಗೂ ಸಮುದಾಯಗಳ ಪೂಜ್ಯ ಸ್ವಾಮೀಜಿಗಳು ಮತ್ತು ಧರ್ಮಗುರುಗಳ ಸಮ್ಮುಖದಲ್ಲಿ ಸಿಎಂ ಒಬ್ಬರ ಪ್ರಮಾಣ ವಚನ ಕಾರ್ಯಕ್ರಮ ನಡೆಯುತ್ತಿದೆ. ವಿವಿಧ ಮಠಗಳ ಶ್ರೀಗಳು, ಫಾದರ್‌ ಗಳು ಹಾಗೂ ಮೌಲ್ವಿಗಳು ಸೇರಿದಂತೆ ಸುಮಾರು 55ಕ್ಕೂ ಹೆಚ್ಚು ಧರ್ಮಗುರುಗಳಿಗೆ ಸರ್ಕಾರದಿಂದ ಅಧಿಕೃತ ಆಹ್ವಾನ ನೀಡಲು ಸ್ವತಃ ಡಿಕೆ ಶಿವಕುಮಾರ್ ಅವರೇ ಸೂಚಿಸಿದ್ದಾರೆ. ಡಿಕೆಶಿ ಕಚೇರಿಯಿಂದ ಬಂದಿರುವ ಅತಿಥಿಗಳ ಪಟ್ಟಿಯ ಆಧಾರದ ಮೇಲೆ ಶಿಷ್ಟಾಚಾರ ವಿಭಾಗವು ಈಗಾಗಲೇ ಆಹ್ವಾನ ಪತ್ರಿಕೆ ತಲುಪಿಸುವ ಕೆಲಸದಲ್ಲಿ ಬ್ಯುಸಿಯಾಗಿದೆ.

ತಮ್ಮ ಧಾರ್ಮಿಕ ನಂಬಿಕೆ ಮತ್ತು ಜ್ಯೋತಿಷ್ಯವನ್ನು ಅಪ್ಪಟವಾಗಿ ಪಾಲಿಸುವ ಡಿಕೆ ಶಿವಕುಮಾರ್ ಅವರು, ಜ್ಯೋತಿಷಿಗಳು ಹಾಗೂ ಸ್ವಾಮೀಜಿಗಳು ಸೂಚಿಸಿದ ನಕ್ಷತ್ರ, ದಿನಾಂಕ ಮತ್ತು ಶುಭ ಮುಹೂರ್ತವನ್ನು ಚಾಚೂ ತಪ್ಪದೆ ಫಾಲೋ ಮಾಡುತ್ತಿದ್ದಾರೆ. ಅವರ ಸಲಹೆಯಂತೆ ಸೂರ್ಯ ಮೂಡುವ ದಿಕ್ಸೂಚಿಯಾದ ಪೂರ್ವಾಭಿಮುಖವಾಗಿ ನಿಂತು ಡಿಕೆಶಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇದಕ್ಕಾಗಿ ಲೋಕಭವನದ ಗಾಜಿನ ಮನೆಯಲ್ಲಿ ವಿಶೇಷವಾಗಿ ಪೂರ್ವ ದಿಕ್ಕಿಗೆ ಮುಖ ಮಾಡಿರುವ ಭವ್ಯ ವೇದಿಕೆಯನ್ನು ಸಿದ್ಧಪಡಿಸಲಾಗುತ್ತಿದೆ.

ಲೋಕಭವನದ ಗಾಜಿನ ಮನೆಯಲ್ಲಿ ಸುಮಾರು 1,100 ಗಣ್ಯರಿಗೆ ಆಸನಗಳ ವ್ಯವಸ್ಥೆ ಕಲ್ಪಿಸಲಾಗಿದೆ. ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು, ಧರ್ಮಗುರುಗಳು, ಹೈಕೋರ್ಟ್ ನ್ಯಾಯಾಧೀಶರು ಹಾಗೂ ವಿಶೇಷ ಆಹ್ವಾನಿತರಿಗಾಗಿ ಅತ್ಯಾಧುನಿಕ ಮಾದರಿಯ ವಿಐಪಿ ಆಸನಗಳನ್ನು ಕಾಯ್ದಿರಿಸಲಾಗಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

Join WhatsApp

Join Now

Join Telegram

Join Now