Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸುಪ್ರೀಂ ಕೋರ್ಟ್ ನಲ್ಲಿ ಡಿಕೆ ಶಿವಕುಮಾರ್ ಅರ್ಜಿ ವಜಾ..!

ಡಿಕೆ ಶಿವಕುಮಾರ್
---Advertisement---

ನವದೆಹಲಿ: ಆದಾಯ ಮೀರಿ ಆಸ್ಕಿ ಗಳಿಕೆ ಪ್ರಕರಣದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಹಿನ್ನಡೆಯಾಗಿದೆ. ಸುಪ್ರೀಂಕೋರ್ಟ್ ಪ್ರಕರಣ ರದ್ದುಕೋರಿ‌ ಸಲ್ಲಿಕೆ ಮಾಡಿದ್ದ ಅರ್ಜಿಯನ್ನು ವಜಾಗೊಳಿಸಿದೆ. ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ ಗೆ ಡಿಕೆ ಶಿವಕುಮಾರ್ ಮೇಲ್ಮನವಿ ಸಲ್ಲಿಸಿದ್ದರು‌. ಪ್ರಕರಣ ರದ್ದುಕೋರಿ ಮೇಲ್ಮನವಿ ಅರ್ಜಿ ಸಲ್ಲಿಕೆ ಮಾಡಿದ್ದರು‌.

ಸಿಬಿಐ ತನಿಖೆ ನಡೆಸುತ್ತಿದೆ. ಈ ಪ್ರಕರಣ ರದ್ದು ಮಾಡಲು ಹೈಕೋರ್ಟ್ ಗೆ ಅರ್ಜಿ ಸಲ್ಲಿಕೆ ಮಾಡಿತ್ತು. ಅದೇ ಕೇಸಲ್ಲಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ಇಂದು ಸುಪ್ರೀಂ ಕೋರ್ಟ್ ಈ ಸಂಬಂಧ ವಿಚಾರಣೆ ನಡೆಸಿದೆ‌. ಬೇಲಾ ತ್ರಿವೇದಿ ಅವರ ಪೀಠದಲ್ಲಿ ಇಂದು ವಿಚಾರಣೆ ನಡೆದಿದೆ. ಡಿಕೆ ಶಿವಕುಮಾರ್ ಅವರ ಪರ ವಕೀಲರಾದ ರೋಹ್ಟಗಿ ಅವರು, ಒಂದೇ ಪ್ರಕರಣದಲ್ಲಿ ಎರಡು ರೀತಿಯಾದ ತನಿಖೆಯನ್ನು ಮಾಡುವುದಕ್ಕೆ ಬರುವುದಿಲ್ಲ. ಐಟಿ ದಾಳಿ ನಡೆದಿದ್ದಾಗ 41 ಲಕ್ಷ ಹಣ ಸಿಕ್ಕಿತ್ತು. ಆ ಕೇನ್ನ ಆದಾಯ ತೆರಿಗೆ ಈ ಕೇಸನ್ನು ನೋಡುತ್ತಾ ಇದೆ. ಆದರೆ ಸಿಬಿಐ ಇದರಲ್ಲಿ ತನಿಖೆ ನಡೆಸುವ ಅಗತ್ಯವಿಲ್ಲ. ಇದನ್ನು ರದ್ದು ಮಾಡಬೇಕು ಎಂದು ಮನವಿ ಮಾಡುತ್ತಾರೆ. ಆದರೆ ಬೇಲಾ ತ್ರಿವೇದಿ ಅವರಿದ್ದ ಪೀಠ ಇದನ್ನು ತಿರಸ್ಕರಿಸಿದೆ.

41 ಲಕ್ಷ ಸಿಕ್ಕಿರುವ ಹಣದ ಬಗ್ಗೆ ತನಿಖೆಯಾಗಬೇಕಿದೆ. ಐಟಿಗೆ ಕ್ರಮ ತೆಗೆದುಕೊಳ್ಳುವ ಅಧಿಕಾರ ಇರುವುದಿಲ್ಲ. ಹೀಗಾಗಿ ಅದರ ತನಿಖೆ ಆಗಬೇಕು. ಸಿಬಿಐ ತನಿಖೆ ನಡೆಸುತ್ತಿರುವುದು ಸರಿಯಾಗಿ ಇದೆ ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ. ಈ ಮೂಲಕ ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಹಿನ್ನಡೆಯಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment