Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬಿಗ್ ಬಾಸ್ ಬಂದ್ ಗೆ ಡಿಕೆ ಶಿವಕುಮಾರ್ ಕಾರಣ : ಫಸ್ಟ್ ರಿಯಾಕ್ಷನ್ ಕೊಟ್ರು ಡಿಸಿಎಂ

ಡಿಕೆ ಶಿವಕುಮಾರ್
---Advertisement---

ಬೆಂಗಳೂರು: ಈ ಹಿಂದೆ ಫಿಲ್ಮ್ ಫೆಸ್ಟಿವಲ್ ಗೆ ಕಲಾವಿದರು ಹೆಚ್ಚಿನ ಸಂಖ್ಯೆಯಲ್ಲಿ ಬಂದಿಲ್ಲವಾದ್ದರಿಂದ ಇಂಡಸ್ಟ್ರಿಯ ನಟ್ಟುಬೋಲ್ಟ್ ಹೇಗೆ ಟೈಟ್ ಮಾಡಬೇಕು ಅನ್ನೋದು ನಮಗೆ ಗೊತ್ತು ಎಂದಿದ್ದರು. ಈಗ ಬಿಗ್ ಬಾಸ್ ಮನೆಗೆ ಲಾಕ್ ಬಿದ್ದ ಕಾರಣಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಅವರೇ ಕಾರಣ ಎಂಬ ಚರ್ಚೆಗಳಾಗ್ತಾ ಇದೆ. ಸಿಕ್ಕಾಪಟ್ಟೆ ಟ್ರೋಲ್ ಕೂಡ ಆಗ್ತಾ ಇದೆ. ಜೆಡಿಎಸ್ ಕೂಡ ಈ ಸಂಬಂಧ ಟ್ವೀಟ್ ಮಾಡಿತ್ತು. ಬಿಗ್ ಬಾಸ್ ರಿಯಾಲಿಟಿ ಶೋ ಬಂದ್ ಮಾಡಿಸಿ, ಕಲಾವಿದರ ಮೇಲೆ ಸೇಡು ತೀರಿಸಿಕೊಂಡ ನಟ್ಟು ಬೋಲ್ಟ್ ಮಿನಿಸ್ಟರ್ ಡಿಕೆ ಶಿವಕುಮಾರ್ ಎಂದು ಟ್ವೀಟ್ ಮಾಡಿತ್ತು.

ಇದೀಗ ಈ ಸಂಬಂಧ ಡಿಕೆ ಶಿವಕುಮಾರ್ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಕುಮಾರಸ್ವಾಮಿ ಮತ್ತು ಜೆಡಿಎಸ್ ನವರು ರಾಜಕೀಯ ಮಾಡಲಿ. ನಾನು ಅದರ ಬಗ್ಗೆ ತಲೆಕೆಡಿಸಿಕೊಳ್ಳಲ್ಲ. ಮಾಲಿನ್ಯ ನಿಯಂತ್ರಣ ಮಂಡಳಿಯವರು ಮಾಡಿದ್ದಾರೆ. ನಾನು ಜಿಲ್ಲಾಧಿಕಾರಿಗಳಿಗೆ ಹೇಳಿದ್ದೀನಿ. ಉದ್ಯೋಗ ಮುಖ್ಯ. ಏನೇ ಇದ್ದರೂ ಅವರಿಗೆ ಒಂದು ಅವಕಾಶ ಸಿಗಬೇಕು. ಸಮಸ್ಯೆ ಬಗೆಹರಿಸಿಕೊಳ್ಳಿ ಎಂದು ಹೇಳಿದ್ದೇನೆ. ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರಿಗೂ ಕಾಲ್ ಮಾಡಿದ್ದೆ. ನಮ್ಮಲ್ಲಿ ಮನರಂಜನೆ ಸಹ ಮುಖ್ಯ‌

ನಾನೇ ಉದ್ಘಾಟನೆ ಮಾಡಿದ್ದೀನಿ. ಅವರಿಗೆ ನನ್ನ ಬಗ್ಗೆ ಮಾತನಾಡಿಲ್ಲ ಅಂದ್ರೆ ನೆಮ್ಮದಿ ಇರಲ್ಲ. ಅವರಿಗೆ ಶಕ್ತಿ ಬರಲ್ಲ, ನಿದ್ದೆ ಬರಲ್ಲ ಅವರಿಗೆ. ಬಿಗ್ ಬಾಸ್ ಆಗಲಿ, ಯಾವುದೇ ಆಗಲಿ, ಮನೋರಂಜನೆ ಇರಬೇಕು. ಹೂಡಿಕೆ ಮಾಡಿರುತ್ತಾರೆ ಏನೋ ತಪ್ಪು ಮಾಡಿರ್ತಾರೆ. ತಪ್ಪನ್ನು ಸರಿ ಮಾಡಿಕೊಳ್ಳಲು ಅವಕಾಶ ಕೊಡಬೇಕು. ಇದು ನನ್ನ ಸಲಹೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...