ಮೇಕೆದಾಟು ಯೋಜನೆಗಾಗಿ ಕಾಂಗ್ರೆಸ್ ಪಕ್ಷ ದೊಡ್ಡ ಮಟ್ಟದ ಪಾದಯಾತ್ರೆಯನ್ನೇ ಹಮ್ಮಿಕೊಂಡಿತ್ತು. ದೊಡ್ಡಮಟ್ಟದ ಸುದ್ದಿ ಮಾಡಿತ್ತು. ಇದೀಗ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿದೆ.ಡಿಕೆ ಶಿವಕುಮಾರ್ ಡಿಸಿಎಂ ಜೊತೆಗೆ ಜಲಸಂಪನ್ಮೂಲ ಖಾತೆಯನ್ನು ಪಡೆದಿದ್ದಾರೆ. ಇಂದು ಸಭೆಯಲ್ಲಿ ಮತ್ತೆ ಮೇಕೆದಾಟು ಯೋಜನೆ ಬಗ್ಗೆ ಚರ್ಚೆ ನಡೆಸಿದ್ದಾರೆ. ಮೇಕೆದಾಟು ಯೋಜನೆ ಜಾರಿಗೆ ಬಂದರೆ ಬೆಂಗಳೂರಿಗರ ನೀರಿನ ಬವಣೆ ತೀರಲಿದೆ. ಹೀಗಾಗಿ ಸಭೆಯಲ್ಲಿ ಈ ವಿಚಾರ ಪ್ರಸ್ತಾಪ ಮಾಡಿದ್ದಾರೆ.
ಸಚಿವರಾದ ಮೇಲೆ ಅಧಿಕಾರಿಗಳ ಜೊತೆಗೆ ತಮ್ಮ ಮೊದಲ ಸಭೆ ನಡೆಸಿದ್ದಾರೆ. ಈ ಸಭೆಯಲ್ಲಿ ಮೇಕೆದಾಟು ಯೋಜನೆಯ ಕುರಿತು ಪ್ರಸ್ತಾಪ ಮಾಡಿದ್ದಾರೆ. 67.16 TMC ನೀರನ್ನು ಸಂಗ್ರಹಿಸಲು ಮೇಕೆದಾಟು ಅಣೆಕಟ್ಟನ್ನು ನಿರ್ಮಿಸಲಾಗುತ್ತದೆ. 400 ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸಲು ಯುನಿಟ್ ಗಳನ್ನು ನಿರ್ಮಿಸಬೇಕಿದೆ.
ಈ ಯೋಜನೆಗೆ 9 ಸಾವಿರ ಕೋಟಿ ವೆಚ್ಚದ ಅಂದಾಜು ಮಾಡಲಾಗಿದೆ. ಅದು 2019ರಲ್ಲಿ. ಈಗಿನ ಖರ್ಚು ವೆಚ್ಚದಲ್ಲಿ ಹೆಚ್ಚು ಕಡಿಮೆಯಾಗಬಹುದು. ಅದರಲ್ಲೂ ಮುಖ್ಯವಾಗಿ ಬೆಂಗಳೂರಿಗರಿಗೆ ಕುಡಿಯುವ ನೀರು ಬಳಸಿಕೊಳ್ಳಲು ಹೆಚ್ವುವರಿಯಾಗಿ 4.75 ಟಿಎಂಸಿ ನೀರು ಬಳಸಿಕೊಳ್ಳಲು ಈ ಯೋಜನೆ ಬಳಸಿಕೊಳ್ಳಲಾಗುತ್ತದೆ.