Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಡಿಕೆ ಶಿವಕುಮಾರ್ ಮಂತ್ರಾಲಯ ರೌಂಡ್ : ಪಂಚಮುಖಿ ಆಂಜನೇಯನ ಬಳಿ ಮಾಡಿದ ಸಂಕಲ್ಪವೇನು..?

---Advertisement---

 

ರಾಯಚೂರು: ಇಂದು ಡಿಸಿಎಂ ಡಿಕೆ ಶಿವಕುಮಾರ್ ಅವರು ಮಂತ್ರಾಲಯಕ್ಕೆ ಕುಟುಂಬ ಸಮೇತ ಭೇಟಿ ನೀಡಿದ್ದಾರೆ. ರಾಯರ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದ್ದಾರೆ. ಬಳಿಕ ಸುಬುದೇಂದ್ರ ಶ್ರೀಗಳನ್ನ ಭೇಟಿ ಮಾಡಿ, ಆಶೀರ್ವಾದ ಪಡೆದಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿ, ಜೋಡೋ ಯಾತ್ರೆಯ ಸಮಯದಲ್ಲಿ ನಾನು ಮತ್ತು ರಾಹುಲ್ ಗಾಂಧಿ ಅವರು ಮಂತ್ರಾಲಯಕ್ಕೆ ಬಂದಿದ್ದೆವು. ಮತ್ತೆ ಬರಬೇಕು ಎಂದುಕೊಂಡರು ಅದು ಸಾಧ್ಯವಾಗಲೇ ಇಲ್ಲ. ಅದಕ್ಕೂ ದೇವರ ಅನುಗ್ರಹ ಇರಬೇಕು ಅಲ್ವಾ ಎಂದಿದ್ದಾರೆ.

ಕಳೆದ ಬಾರಿ ರಾಯರನ್ನ ಬೇಡಿದ್ದಕ್ಕೆ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಿದೆ. ಮಠದ ಕಾರ್ಯಕ್ರಮಗಳಲ್ಲಿ ಭಾಗಿಯಾಗುತ್ತೇನೆ ಎಂದಿದ್ದಾರೆ. ಇದರ ಜೊತೆಗೆ ಇಂದು ಮಂತ್ರಾಲಯದಲ್ಲಿ ಧರ್ಮಪತ್ನಿಯ ಸಮೇತ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ ದರ್ಶನ ಪಡೆಯುವ ಸೌಭಾಗ್ಯ ಲಭಿಸಿತು. ಈ ಪವಿತ್ರ ಕ್ಷಣದಲ್ಲಿ, ನಾಡಿನ ಸಮಸ್ತ ಜನತೆಯ ಒಳಿತಿಗಾಗಿ ಮತ್ತು ಎಲ್ಲರ ಸುಖ-ಶಾಂತಿಗಾಗಿ ರಾಯರಲ್ಲಿ ಪ್ರಾರ್ಥಿಸಲಾಯಿತು. ರಾಯರಿದ್ದಾರೆ ಎಂದು ಬರೆದುಕೊಂಡಿರುವ ಟ್ವೀಟ್ ಬಗ್ಗೆ ಸಾಕಷ್ಟು ಚರ್ಚೆಯಾಗುತ್ತಿದೆ.

 

ಸಿಎಂ ಸ್ಥಾನದ ಆಕಾಂಕ್ಷಿಯಾಗಿದ್ದಾರೆ ಡಿಕೆ ಶಿವಕುಮಾರ್. ಅದಕ್ಕೆ ತಕ್ಕಂತೆ ಪಂಚಮುಖಿ ಆಂಜನೇಯ ಸ್ವಾಮಿ ದೇವಸ್ಥಾನದ ಅರ್ಚಕರು ಶುಭ ನುಡಿದಿದ್ದಾರೆ. ಪಂಚಮುಖಿ ಆಂಜನೇಯ ಸ್ವಾಮಿ ದೇಗುಲದಲ್ಲಿ ಡಿಕೆ ಶಿವಕುಮಾರ್ ಸಂಕಲ್ಪ ಮಾಡಿದ್ದು, ಈ ಹಿಂದೆಯೂ ತನ್ನ ಸಂಕಲ್ಪದಿಂದಲೇ ಸರ್ಕಾರ ಅಧಿಕಾರಕ್ಕೆ ಬಂದಿದೆ ಎಂದು ಈ ಹಿಂದೆಯೂ ಸ್ವತಃ ಡಿಸಿಎಂ ಹೇಳಿದ್ದರು. ಇದೀಗ ಮತ್ತೊಮ್ಮೆ ಸಂಕಲ್ಪ ಮಾಡಿದ್ದಾರೆ. ಈ ಬಾರಿ ಅವರು ಸಿಎಂ ಆಗೇ ಆಗ್ತಾರೆಂದು ದೇಗುಲದ ಪ್ರಧಾನ ಅರ್ಚಕ ಶಾಮಾಚಾರ್ಯರು ಭವಿಷ್ಯ ನುಡಿದಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now