ರಾಮನಗರ: ಕನಕಪುರ ಕ್ಷೇತ್ರದಿಂದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸ್ಪರ್ಧೆಗೆ ಬಯಸಿದ್ದಾರೆ. ನಾಮಪತ್ರ ಕೂಡ ಸಲ್ಲಿಕೆ ಮಾಡಿದ್ದಾರೆ. ಆದರೆ ಡಿಕೆ ಶಿವಕುಮಾರ್ ಅವರ ನಾಮಪತ್ರ ತಿರಸ್ಕಾರ ಆಗುವ ಆತಂಕ ಕಾಂಗ್ರೆಸ್ ಮಂದಿಯನ್ನು ಕಾಡಿತ್ತು. ಇದೇ ಕಾರಣಕ್ಕಾಗಿಯೇ ಸಂಸದ ಡಿಕೆ ಸುರೇಶ್ ಅವರಿಂದ ಮತ್ತೆ ನಾಮ ಪತ್ರ ಸಲ್ಲಿಕೆ ಮಾಡಿಸಿದ್ದರು. ಇದೀಗ ಡಿಕೆ ಶಿವಕುಮಾರ್ ಅವರ ನಾಮಪತ್ರ ಅಂಗೀಕಾರವಾಗಿದೆ.
ತೆರಿಗೆ ವಿಚಾರವಾಗಿ ಡಿಕೆ ಶಿವಕುಮಾರ್ ಅವರ ನಾಮಪತ್ರ ರಿಜೆಕ್ಟ್ ಆಗುವ ಸಾಧ್ಯತೆ ಇತ್ತು. ಚುನಾವಣಾ ಸೂಚಕರು ತೆರಿಗೆ ಕಟ್ಟಿಲ್ಲವೆಂದು ಆಕ್ಷೇಪ ವ್ಯಕ್ತಪಡಿಸಿದ್ದರು. ಆದ್ರೆ ಕಾಂಗ್ರೆಸ್ ಕಾಂಗ್ರೆಸ್ ಏಜೆಂಟರು ಎಲ್ಲಾ ತೆರಿಗೆ ಕಟ್ಟಿರುವ ಬಗ್ಗೆ ಮಾಹಿತಿ ನೀಡಿದ್ದು, ಡಿಕೆ ಶಿವಕುಮಾರ್ ಅವರ ನಾಮಪತ್ರ ಅಂಗೀಕಾರವಾಗಿದೆ.
ಇನ್ನು ಡಿಕೆ ಶಿವಕುಮಾರ್ ಅವರ ನಾಮಪತ್ರ ತಿರಸ್ಕಾರವಾಗುವ ಭೀತಿಯಿಂದ ಡಿಕೆ ಸುರೇಶ್ ಅವರು ಕೂಡ ನಾಮಪತ್ರ ಸಲ್ಲಿಕೆ ಮಾಡಿದ್ದರು. ಈಗ ಡಿಕೆಶಿ ಅವರ ನಾಮಪತ್ರ ಅಂಗೀಕಾರವಾಗಿರುವ ಕಾರಣ ಡಿಕೆ ಸುರೇಶ್ ಅವರು ಏಪ್ರಿಲ್ 24ರಂದು ನಾಮಪತ್ರ ವಾಪಾಸ್ ತೆಗೆದುಕೊಳ್ಳುವ ಸಾಧ್ಯತೆ ಇದೆ.





GIPHY App Key not set. Please check settings