Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಬಮೂಲ್ ಆಡಳಿತ ಮಂಡಳಿ ನಿರ್ದೇಶಕನ ಸ್ಥಾನಕ್ಕೆ ಡಿಕೆ ಸುರೇಶ್ ಅರ್ಜಿ..!

---Advertisement---

 

ಬೆಂಗಳೂರು; ರಾಜಕೀಯದಲ್ಲಿ ಆಕ್ಟೀವ್ ಆಗಿರುವವರು ಯಾವತ್ತಿಗೂ ಅದರಿಂದ ದೂರ ಉಳಿದು, ಸೈಲೆಂಟ್ ಆಗುತ್ತೇವೆ ಎಂಬುದು ಸಾಧ್ಯವಿಲ್ಲದ ಮಾತು. ಯಾಕಂದ್ರೆ ಆ ರಾಜಕಾರಣ ಸೆಳೆಯುತ್ತಾ ಇರುತ್ತದೆ. ಅದಕ್ಕೆ ಸ್ಪಷ್ಟ ಉದಾಹರಣೆ ಡಿಕೆ ಸುರೇಶ್ ಅವರು. ಕಳೆದ ಲೋಕಸಭಾ ಚುನಾವಣೆಯಲ್ಲಿ ಸೋತ ಬಳಿಕ ನನಗೆ ರಾಜಕೀಯವೇ ಬೇಡ, ವಿಶ್ರಾಂತಿ ಬೇಕು ಎಂದಿದ್ದರು. ಇದೀಗ ಮತ್ತೆ ರಾಜಕಾರಣದತ್ತ ಬರ್ತಿದ್ದಾರೆ. ಕನಕಪುರದ ಬಮೂಲ್ ಆಡಳಿತ ಮಂಡಳಿಯ ನಿರ್ದೇಶಕನ ಸ್ಥಾನಕ್ಕೆ ಅರ್ಜಿ ಹಾಕಿದ್ದಾರೆ.

ಈ ಬಗ್ಗೆ ಮಾತನಾಡಿರುವ ಡಿಕೆ ಸುರೇಶ್ ಅವರು, ನಮ್ಮ ಜಿಲ್ಲೆಯ, ಪಕ್ಷದ ಹಿರಿಯ ನಾಯಕರು ಹಾಗೂ ಕಾರ್ಯಕರ್ತರ ಒತ್ತಾಯದ ಮೇರೆಗೆ ಕನಕಪುರ ನಿರ್ದೇಶನದ ಸ್ಥಾನಕ್ಕೆ, ಬೆಂಗಳೂರು ಒಕ್ಕೂಟದ ನಿರ್ದೇಶನದ ಸ್ಥಾನಕ್ಕೆ ಇವತ್ತು ಅರ್ಜಿಯನ್ನ ಸಲ್ಲಿಸಬೇಕು ಅಂತ ಹೇಳಿ ಎಲ್ಲಾ ಮುಖಂಡರು ತೀರ್ಮಾನ ಮಾಡಿದ್ದಾರೆ. ಅದರಂತೆ ಇವತ್ತು ಅರ್ಜಿ ಸಲ್ಲಿಸಿದ್ದೇನೆ.

ಈಗಲೂ ನನ್ನ ಮೂಡ್ ರೆಸ್ಟ್ ನಲ್ಲಿಯೇ ಇದೆ. ನಾನು ನಮ್ಮ ನಾಯಕರಿಗೆ ಎಲ್ಲಾ ವಿಚಾರಗಳನ್ನ ಹೇಳಿದ್ದೀನಿ. ಪಕ್ಷದ‌ ಮುಖಂಡರಿಗೆ ಹಲವಾರು ವಿಚಾರಗಳನ್ನ ಹಂಚಿಕೊಂಡಿದ್ದೀನಿ. ಆದರೆ ಕೆಲವೊಂದು ವಿಚಾರದಲ್ಲಿ ನಾವೂ ಅವರ ಮಾತಿಗೂ ಗೌರವ ಕೊಡಬೇಕಾಗುತ್ತದೆ. ಆ ಒಂದು ನಿಟ್ಟಿನಲ್ಲಿ ಅವರು ಸಲಹೆ ನೀಡಿದ್ದಾರೆ. ಮಾರ್ಗದರ್ಶನ ತೋರಿದ್ದಾರೆ. ಅದರಂತೆ ಇವತ್ತು ಅರ್ಜಿ ಸಲ್ಲಿಕೆ ಮಾಡ್ತಾ ಇದ್ದೀನಿ. ಪಕ್ಷದ ಮುಖಂಡರು ಸರ್ವಾನುಮತದಿಂದ ಅವರ ಅನಿಸಿಕೆಗಳನ್ನ ವ್ಯಕ್ತಪಡಿಸಿದಾಗ, ನಾನೊಬ್ಬ ಪಕ್ಷದ ಕಾರ್ಯಕರ್ತನಾಗಿ, ಅವರ ಮಾತುಗಳಿಗೆ ತಲೆಬಾಗಬೇಕಾಯ್ತು. ಹೀಗಾಗಕ ಅರ್ಜಿಯನ್ನು ಸಲ್ಲಿಕೆ ಮಾಡಿದ್ದೇನೆ ಎಂದಿದ್ದಾರೆ. ಈ ಮೂಲಕ ಬಮೂಲ್ ಅಧ್ಯಕ್ಷನಾಗುವ ಹಿಂಗಿತ ವ್ಯಕ್ತಪಡಿಸಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...