ಬೆಂಗಳೂರು : ಮೈತ್ರಿ ಸರ್ಕಾರ ಬೀಳಿಸುವುದಕ್ಕೆ ಡಿಕೆ ಶಿವಕುಮಾರ್ ಅವರೇ ಕಾರಣ. ಹೆಗಲ ಮೇಲೆ ಕೈ ಹಾಕಿ ಜೋಡೆತ್ತು ಅಂತ ಹೇಳಿ ನಂಬಿಕೆ ದ್ರೋಹ ಮಾಡಿದರು ಅಂತ ಮಾಜಿ ಸಿಎಂ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದರು. ಇದೀಗ ಡಿಕೆ ಸುರೇಶ್, ಡಿಕೆ ಶಿವಕುಮಾರ್ ಪರ ಬ್ಯಾಟ್ ಬೀಸಿದ್ದಾರೆ.
ಇಡೀ ರಾಜ್ಯದ ಜನರಿಗೆ ಇವರ ಮೈತ್ರಿ ಏನು, ಯಾವುದಕ್ಕಾಗಿ ಮೈತ್ರಿ ಮಾಡಿಕೊಳ್ಳುತ್ತಾರೆ ಅನ್ನೋದನ್ನ ಕಳೆದ ಹದಿನೈದು ವರ್ಷದಿಂದ ಜನ ನೋಡಿಕೊಂಡು ಬಂದಿದ್ದಾರೆ. ಅಧಿಕಾರಕ್ಕೋಸ್ಕರ ಏನು ಬೇಕಾದರೂ ಮಾಡುತ್ತಾರೆ. ಕಾರ್ಯಕರ್ತರನ್ನು, ಜನರನ್ನು ಉಳಿಸಿಕೊಳ್ಳಲು ಈ ರೀತಿ ಸುಳ್ಳು ಹೇಳುತ್ತಿದ್ದಾರೆ.
ಮೈತ್ರಿ ಮಾಡಿಕೊಂಡಿದ್ದು ನಿಜ, ಸಂಪೂರ್ಣ ಅಧಿಕಾರ ಕೊಟ್ಟಿದ್ದು ನಿಜ, ಮಂಡ್ಯದ ಜನ ತಿರಸ್ಕಾರ ಮಾಡಿದ್ದು ನಿಜ. ತಿರಸ್ಕಾರ ಮಾಡುವುದಕ್ಕೆ ಏನು ಕಾರಣ ಎಂಬುದನ್ನು ಮಂಡ್ಯದ ಜನರನ್ನೇ ಕೇಳಿ ತಿಳಿದುಕೊಳ್ಳಬೇಕು ಎಂದಿದ್ದಾರೆ. ಈ ಮೂಲಕ ಮಾಜಿ ಸಿಎಂ ಕುಮಾರಸ್ವಾಮಿ ಮಾಡಿದ್ದ ಆರೋಪಕ್ಕೆ ಡಿಕೆ ಸುರೇಶ್ ತಿರುಗೇಟು ನೀಡಿದ್ದಾರೆ.
ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!
ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






