ಉಪಚುನಾವಣೆಯಲ್ಲಿ ಚನ್ನಪಟ್ಟಣದಿಂದ ಸ್ಪರ್ಧೆ ಮಾಡ್ತಾರಾ ಡಿಕೆ ಸುರೇಶ್ ?

suddionenews
1 Min Read

 

 

ರಾಮನಗರ: ಇತ್ತಿಚೆಗಷ್ಟೇ ನಡೆದ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಸೋಲು ಅನುಭವಿಸಿರುವ ಡಿಕೆ ಶಿವಕುಮಾರ್ ಉಪಚುನಾವಣರಯಲ್ಲಿ ಸ್ಪರ್ಧೆ ಮಾಡ್ತಾರಾ ಎಂಬ ಪ್ರಶ್ನೆ ಎಲ್ಲರನ್ನು ಕಾಡುತ್ತಿದೆ. ಕುಮಾರಸ್ವಾಮಿ ಸಂಸದರಾದ ಮೇಲೆ ಚನ್ನಪಟ್ಟಣ ಕ್ಷೇತ್ರ ತೆರವಾಗಿದೆ. ಹೀಗಾಗಿ ಉಪಚುನಾವಣೆ ನಡೆಯಲಿದ್ದು, ಡಿಕೆ ಸುರೇಶ್ ಈ ಕ್ಷೇತ್ರದಿಂದ ಸ್ಪರ್ಧೆ ಮಾಡ್ತಾರಾ ಎಂಬ ಪ್ರಶ್ನೆಗೆ ಅವರೇ ಸ್ಪಷ್ಟನೆ ನೀಡಿದ್ದಾರೆ.

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಿಂದ ನಾನು ಸ್ಪರ್ಧೆ ಮಾಡಲ್ಲ. ಕಾಂಗ್ರೆಸ್ ನಿಂದ ಅಚ್ಚರಿಯ ವ್ಯಕ್ತಿಯನ್ನು ಕಣಕ್ಕೆ ಇಳಿಸುತ್ತೇವೆ‌. ಕಳೆದ ಹತ್ತು ವರ್ಷದಿಂದ ಅಭಿವೃದ್ಧಿ ಕೆಲಸವನ್ನು ಮಾಡಿದ್ದೇನೆ. ನನಗೆ ರಾಮನಗರ ಮಾಧ್ಯಮದವರು ಪ್ರೋತ್ಸಾಹ ಕೊಟ್ಟಿದ್ದಾರೆ. ರಾಜಕೀಯದಲ್ಲಿ ನನಗೆ ಆಸಕ್ತಿ ಇರಲಿಲ್ಲ. ಉಪಚುನಾವಣೆ ನಡೆದಾಗ ಜಿಲ್ಲೆ ಹಾಗೂ ರಾಜ್ಯದ ನಾಯಕರು ಸ್ಪರ್ಧೆ ಮಾಡುವಂತೆ ನನ್ನನ್ನು ಒತ್ತಾಯಿಸಿದರು. ಡಿ.ಕೆ. ಶಿವಕುಮಾರ್ ಅವರಿಗೆ ಒತ್ತಡ ತಂದು ನನ್ನನ್ನು ರಾಜಕೀಯಕ್ಕೆ ಬರುವಂತೆ ಮಾಡಿದರು. ಹತ್ತು ವರ್ಷ ಎಂಟು ತಿಂಗಳು ಕಾಲ ಕೆಲಸ‌ ಮಾಡಲು ಅವಕಾಶ ಮಾಡಿಕೊಟ್ಟಿದ್ದಾರೆ. ಅವಕಾಶ ಕೊಟ್ಟಿದ್ದಕ್ಕೆ ತಕ್ಕನಾಗಿ ಧೀನ ದಲಿತರ, ಮಹಿಳೆಯರ ಪರವಾಗಿ‌ಕೆಲಸ ಮಾಡಿದ್ದೇನೆ.

ಎರಡು ಬಾರಿ ಸಂಸತ್ ಸದಸ್ಯನಾಗಿ ಕೆಲಸ ಮಾಡಿದ್ದೇನೆ. ರಾಮನಗರ ಜಿಲ್ಲೆಗೆ ಕೆಲಸ ಮಾಡಿದ ಆತ್ಮತೃಪ್ತಿ ಇದೆ. ನಾನು ಮತ ಕೇಳುವ ಸಂದರ್ಭದಲ್ಲೂ ಬೇರೆಯವರ ಹೆಸರಿನಲ್ಲಿ ಮತ ಕೇಳಿಲ್ಲ. ನಾನು ಮಾಡಿದ ಕೆಲಸಕ್ಕೆ ಕೂಲಿ ಕೇಳಿದ್ದೇನೆ. ಜನ ಅದನ್ನು ಸರಸಾಗಟವಾಗಿ ತಿರಸ್ಕಾರ ಮಾಡಿದ್ದಾರೆ. ಇನ್ನು ಮುಂದೆ ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಕೆಲಸ ಮಾಡುತ್ತೇನೆ. ನಾನು ಹೊಸದಾಗಿ ಬಂದಾಗ ಜನ ಕೆಲಸ ಮಾಡ್ತಾರೆ ಅಂತ ಗೆಲ್ಲಿಸಿದ್ರು. ಡಾಕ್ಟರ್ ಬಂದಾಗ ಡಾಕ್ಟರ್ ಅವರನ್ನೂ ಗೆಲ್ಲಿಸಿದ್ದಾರೆ. ಅವರಿಗೆ ನಾನು ಈ ಸಂದರ್ಭದಲ್ಲಿ ಅಭಿನಂದನೆ ಸಲ್ಲಿಸಿದ್ದೇನೆ. ಮಾಧ್ಯಮಗಳು ನನ್ನನ್ನು ಹೇಗೆ ಬಿಂಬಿಸಿದವು, ಅವರನ್ನು ಹೇಗೆ ಬಿಂಬಿಸಿದವು ಎಂಬುದು ಗೊತ್ತಿದೆ. ಹೀಗಾಗಿ ಮಾಧ್ಯಮಗಳಿಗೂ ಅಭಿನಂದನೆ ಅರ್ಪಿಸುತ್ತೇನೆ ಎಂದರು.

Share This Article
Leave a Comment

Leave a Reply

Your email address will not be published. Required fields are marked *