Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ನಮ್ಮನ್ನ ಪ್ರಚೋದಿಸಬೇಡಿ ಎಂದ ಡಿಕೆಶಿ ಆಪ್ತ ಇಕ್ಬಾಲ್ : ಏನಾಯ್ತು ಅಂಥದ್ದು..?

---Advertisement---

ಬೆಂಗಳೂರು: ಇತ್ತೀಚೆಗೆ ಯತೀಂದ್ರ ಸಿದ್ದರಾಮಯ್ಯ ಅವರು ಹೇಳಿದ್ದ ಮಾತು ಕಾಂಗ್ರೆಸ್ ನಲ್ಲಿ ಬೂದಿ ಮುಚ್ಚಿದ ಕೆಂಡದಂತೆ ಇದ್ದಂತ ಸಿಎಂ ಕುರ್ಚಿ ಕದನ ಮತ್ತೆ ಹೊಗೆಯಾಡುವಂತೆ ಮಾಡಿದೆ. ನಮ್ಮ ತಂದೆಯೇ ಐದು ವರ್ಷ ಸಿಎಂ ಆಗಿರ್ತಾರೆ. ಹೈಕಮಾಂಡ್ ನಾಯಕರು ಕೂಡ ಒಪ್ಪಿದ್ದಾರೆ ಎಂಬ ಮಾತನ್ನ ಹೇಳಿದ್ದಾರೆ. ಇದು ಕಾಂಗ್ರೆಸ್ ನಾಯಕರಲ್ಲಿಯೇ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಡಿಕೆ ಶಿವಕುಮಾರ್ ಬಣದ ನಾಯಕರು ಈ ಮಾತಿಗೆ ರೊಚ್ಚಿ ಗೆದ್ದಿದ್ದಾರೆ.

ಅದರಲ್ಲೂ ಮೊದಲಿನಿಂದಲೂ ಡಿಕೆ ಶಿವಕುಮಾರ್ ಸಿಎಂ ಆಗಬೇಕು ಎಂದು ಆಸೆ ಪಡುತ್ತಿರುವ, ಡಿಕೆ ಶಿವಕುಮಾರ್ ಸಿಎಂ ಆಗಿಯೇ ಆಗ್ತಾರೆ ಎಂದು ಹೇಳುತ್ತಾ ಬಂದಿರುವ ಡಿಕೆಶಿ ಆಪ್ತ, ರಾಮನಗರದ ಶಾಸಕ ಇಕ್ಬಾಲ್ ಇದೀಗ ಮತ್ತೆ ಮಾತನ್ನಾಡಿದ್ದಾರೆ. ಯತೀಂದ್ರ ಅವರ ಹೇಳಿಕೆಗೆ ಖಡಕ್ಕಾಗಿಯೇ ಎಚ್ಚರಿಕೆ ಕೊಟ್ಟಿದ್ದಾರೆ. ಈ ವಿಚಾರಕ್ಕೆ ನಮ್ಮನ್ನು ಪ್ರಚೋದಿಸಬೇಡಿ ಎಂದಿದ್ದಾರೆ.

ಈ ಎಲ್ಲಾ ಬೆಳವಣಿಗೆಯ ನಡುವೆ ಡಿಸಿಎಂ ಡಿಕೆ ಶಿವಕುಮಾರ್ ದೆಹಲಿ ಯಾತ್ರೆ ಕೈಗೊಂಡಿದ್ದಾರೆ. ರಾಜ್ಯದ ನೀರಾವರಿ ಯೋಜನೆಗಳ ಸಂಬಂಧ ಈ ಯಾತ್ರೆಯನ್ನ ಮಾಡಲಾಗ್ತಿದೆ ಅಂತ ಖುದ್ದು ಡಿಸಿಎಂ ಡಿಕೆ ಶಿವಕುಮಾರ್ ಅವರೇ ಹೇಳಿದ್ದಾರೆ. ಆದರೆ ಅವರು ದೆಹಲಿಗೆ ಹೋಗ್ತಿದ್ದಾರೆ ಅಂದ್ರೆ ಒಂದಷ್ಟು ಚರ್ಚೆಗಳು ಹುಟ್ಟಿಕೊಳ್ತವೆ. ಹೈಕಮಾಂಡ್ ಮುಂದೆ ಮತ್ತೆ ತಮ್ಮ ಬೇಡಿಕೆಯನ್ನ ಇಡಬಹುದು, ಆ ಬಗ್ಗೆ ಚರ್ಚೆ ಮಾಡಬಹುದು ಎಂಬ ನಿರೀಕ್ಷೆ ಇದೆ. ಇತ್ತ ಮುಂದೆ  ಪಂಚ ರಾಜ್ಯಗಳ ಚುನಾವಣಾ ಅಗ್ನಿಪರೀಕ್ಷೆ ಎದುರಾಗಿದೆ, ಹೀಗಾಗಿ ಸಿಎಂ ಚೇಂಜ್ ವಿಚಾರ ಹೈಕಮಾಂಡ್​ಗೆ ಧರ್ಮ ಸಂಕಟ ತಂದಿಟ್ಟಿದೆ..

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...