ಬೆಂಗಳೂರು: ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ನೇತೃತ್ವದಲ್ಲಿ ಕರ್ನಾಟಕದಲ್ಲಿ ಪಕ್ಷ ಸಂಘಟನೆಯನ್ನು ಬಹಳ ಅದ್ಭುತವಾಗಿ ಮಾಡಿದ್ದಾರೆ. ಅದರಿಂದಾಗಿಯೇ ಈ ಬಾರಿ ಅಧಿಕಾರಕ್ಕೂ ಬಂದಿದ್ದಾರೆ. ಇದೀಗ ಡಿಸಿಎಂ ಡಿಕೆ ಶಿವಕುಮಾರ್ ಕಣ್ಣು ತೆಲಂಗಾಣದ ಮೇಲಿದೆ. ತೆಲಂಗಾಣದಲ್ಲಿ ಕಾಂಗ್ರೆಸ್ ಗೆಲುವಿಗೆ ಆಪರೇಷನ್ ಕಾಂಗ್ರೆಸ್ ಶುರುವಾಗಿದೆ ಎಂಬ ಗುಸಗುಸು ಕೇಳಿಸುತ್ತಿದೆ.
ವೈಎಸ್ಆರ್ಟಿಪಿ ಅಧ್ಯಕ್ಷೆ ಶರ್ಮಿಳಾ ಅವರನ್ನು ಕಾಂಗ್ರೆಸ್ ಗೆ ಕರೆತರಯವ ಮೆಗಾ ಪ್ಲ್ಯಾನ್ ನಡೆಯುತ್ತಿದೆ ಎನ್ನಲಾಗಿದೆ. ಅದಕ್ಕೆ ರುವಾರಿಯಾಗಿರುವುದು ಕರ್ನಾಟಕದ ಡಿಸಿಎಂ ಶಿವಕುಮಾರ್. ಈ ಭೇಟಿ ಯಶಸ್ವಿಯಾದರೆ ಶರ್ಮಿಳಾ, ಮುಂದಿನ ವಾರವೇ ಕಾಂಗ್ರೆಸ್ ಹೈಕಮಾಂಡ್ ಭೇಟಿಯಾಗಲಿದ್ದಾರೆ.
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ಸೋನಿಯಾ ಗಾಂಧಿ ಹಾಗೂ ರಾಹುಲ್ ಸಮ್ಮುಖದಲ್ಲಿ ನಡೆಯುವ ಸಭೆಯಲ್ಲಿ ಕಾಂಗ್ರೆಸ್ ಜೊತೆ ತಮ್ಮ ಪಕ್ಷವನ್ನು ಮೈತ್ರಿ ಮಾಡಿಕೊಳ್ಳುವುದು ಅಥವಾ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಚರ್ಚೆ ನಡೆಸಲಿದ್ದಾರಂತೆ. ಈ ಹಿಂದೆ ಡಿ.ಕೆ.ಶಿವಕುಮಾರ್ ಅವರನ್ನು ಶರ್ಮಿಳಾ ಭೇಟಿ ಮಾಡಿದ್ದರು. ಬೆಂಗಳೂರಿನ ಸದಾಶಿವನಗರದಲ್ಲಿರುವ ಡಿ.ಕೆ.ಶಿವಕುಮಾರ್ ನಿವಾಸದಲ್ಲಿ ಶರ್ಮಿಳಾ ಭೇಟಿಯಾಗಿ, ಮಾತುಕತೆ ನಡೆಸಿದ್ದರು.