Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಡಿಕೆಶಿ ಆಗ್ಲಿ, ಸತೀಶ್ ಜಾರಕಿಹೊಳಿಯೂ ಅಲ್ಲ : ಯತ್ನಾಳ್ ಹೇಳಿದ ಹೆಸರೇನು..?

---Advertisement---

ಬೆಂಗಳೂರು: ಕಾಂಗ್ರೆಸ್ ಸರ್ಕಾರದಲ್ಲಿ ಸದ್ಯದ ಹಾಟ್ ಟಾಪಿಕ್ ಅಂದ್ರೆ ಅದು ಸಿಎಂ ಬದಲಾವಣೆ ವಿಚಾರ. ಡಿಸಿಎಂ ಡಿಕೆ ಶಿವಕುಮಾರ್ ಈ ವಿಚಾರಕ್ಕೆ ತುದಿಗಾಲಲ್ಲಿ ನಿಂತಿರುವುದು ಎಲ್ಲರಿಗೂ ಗೊತ್ತಿರುವ ವಿಚಾರ. ಇದನ್ನ ಹೊರತುಪಡಿಸಿದರೆ ಸತೀಶ್ ಜಾರಕಿಹೊಳಿ ಅವರು ಕೂಡ ಸಿಎಂ ಆಗ್ತಾರೆ ಎಂಬ ಚರ್ಚೆ ಹುಟ್ಟುಕೊಂಡಿತ್ತು. ಇದೀಗ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಅವರು ಶಾಕಿಂಗ್ ನ್ಯೂಸ್ ಒಂದನ್ನ ಹೇಳಿದ್ದಾರೆ. ಸಿಎಂ ಬದಲಾದರೆ ಯಾರಾಗಬಹುದು ಎಂಬುದನ್ನು ಹೇಳಿದ್ದಾರೆ.

ಸಿಎಂ ಹುದ್ದೆಗೆ ಸಾಕಷ್ಟು ಪೈಪೋಟಿ ಇದೆ. ಆದರೆ ಯಾರೂ ಸಿಎಂ ಆಗುವುದಿಲ್ಲ. ಡಾರ್ಕ್ ಹಾರ್ಸ್ ಒಬ್ಬರು ಮುಖ್ಯಮಂತ್ರಿಯಾಗಲಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಿಎಂ ಆಗಲಿದ್ದಾರೆ ಎಂಬ ಮಾತನ್ನ ಹೇಳಿದ್ದಾರೆ. ಈ ಮೂಲಕ ಬಸನಗೌಡ ಪಾಟೀಲ್ ಮಲ್ಲಿಕಾರ್ಜುನ ಖರ್ಗೆ ವಿಚಾರವನ್ನ ಹುಟ್ಟುಹಾಕಿದ್ದಾರೆ.

ಯಾರು ಸಿಎಂ ಆಗಬೇಕು ಅಂತ ನಿರ್ಧಾರ ಮಾಡುತ್ತಾರೆಯೇ? ಎಂದರು. ನವೆಂಬರ್ ಕ್ರಾಂತಿ ಏನೂ ನಡೆಯಲ್ಲ. ಉತ್ತರಾಧಿಕಾರಿ ವಿಚಾರದಲ್ಲಿ ಯತೀಂದ್ರ ಅವರ ಹೇಳಿಕೆ‌ ಅದು ಅವರು ವೈಯಕ್ತಿಕ‌ ವಿಚಾರ. ಸಿಎಂ ಮುಂದಿನ ಚುನಾವಣೆ ನಿಲ್ಲುವ ವಿಚಾರ ಅದು ಅವರು ವೈಯಕ್ತಿಕ ವಿಚಾರ. ಎಲ್ಲಾ ಸಮಾಜದವರು ಸಿಎಂ ಆಗಬೇಕು ಎಂದು ಬಯಸುತ್ತಾರೆ.‌ ದಲಿತ ಸಿಎಂ ವಿಚಾರ ಕೂಡಾ ಹಾಗೆ. ಅದನ್ನು ಎಲ್ಲಿ ಚರ್ಚೆ ನಡೆಸಬೇಕೋ ಅಲ್ಲೇ ನಡೆಸಬೇಕು ಎಂದು ಪ್ರಿಯಾಂಕ ಖರ್ಗೆ ಹೇಳಿದರು. ದಲಿತ ಸಿಎಂ ಒತ್ತಾಯವೂ ಕೇಳಿ ಬರ್ತಿದೆ. ಜೊತೆಗೆ ಇತ್ತೀಚೆಗಷ್ಟೇ ಮಲ್ಲಿಕಾರ್ಜುನ ಖರ್ಗೆ ಅವರು ಈ ಹಿಂದೆ ಸಿಎಂ ಆಗುವ ಅವಕಾಶ ಕೈ ತಪ್ಪಿದ್ದರ ಬಗ್ಗೆ ಮಾತನಾಡಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...