ಬೆಂಗಳೂರು: ಸಂಕ್ರಾಂತಿ ಹಬ್ಬದ ಸಮಯದಲ್ಲಿ ಸಚುವೆ ಲಕ್ಷ್ಮೀ ಹೆಬ್ಬಾಳ್ಕರ್ ಕಾರು ಅಪಘಾತವಾಗಿತ್ತು. ಅದರಲ್ಲಿದ್ದ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಸಹೋದರನಿಗೆ ಗಂಭೀರ ಗಾಯವಾಗಿದೆ. ಅದರಲ್ಲೂ ಲಕ್ಷ್ಮೀ ಹೆಬ್ಬಾಳ್ಕರ್ ಮೂಳೆ ಸಮಸ್ಯೆಯಾಗಿದೆ. ಜೋರು ಪೆಟ್ಟಾಗಿದೆ. ಹೀಗಾಗಿ ಆಸ್ಪತ್ರೆಗೆ ಅಡ್ಮಿಟ್ ಆಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇತ್ತೀಚೆಗೆ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ್, ಡಿಕೆ ಶಿವಕುಮಾರ್ ಸೇರಿದಂತೆ ಹಲವರು ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಭೇಟಿ, ಮಾಡಿ ಆರೋಗ್ಯ ವಿಚಾರಿಸಿದ್ದರು. ಇದರ ಬೆನ್ನಲ್ಲೇ ಜೆಡಿಎಸ್ ಟ್ವೀಟ್ ಮಾಡಿ ಪ್ರಶ್ನೆ ಮಾಡಿದೆ.
![](https://suddione.com/content/uploads/2024/10/gifmaker_me-5-1.gif)
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಕಾರು ಅಪಘಾತವಾಗಿ ಬೆಳಗಾವಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಡಿಸಿಎಂ @DKShivakumar, ಸಚಿವ @BZZameerAhmedK ಸೇರಿದಂತೆ ಕಾಂಗ್ರೆಸ್ ನಾಯಕರುಗಳು ಓಡೋಡಿ ಹೋಗಿ ಸಚಿವೆಯ ಆರೋಗ್ಯ ವಿಚಾರಿಸಿ ಶೀಘ್ರ ಚೇತರಿಕೆಗೆ ಹಾರೈಸಿ ಬರುತ್ತಿದ್ದಾರೆ. ಇದು ತಪ್ಪಲ್ಲ.. ಆದರೆ
ಬೆಳಗಾವಿ, ಬಳ್ಳಾರಿ, ರಾಯಚೂರು ಸೇರಿದಂತೆ ಸರ್ಕಾರಿ ಆಸ್ಪತ್ರೆಗಳಲ್ಲಿ ಬಾಣಂತಿಯರು ಮತ್ತು ನವಜಾತ ಶಿಶುಗಳ ಸರಣಿ ಸಾವುಗಳಾದಾಗ ಮಹಿಳಾ & ಮಕ್ಕಳ ಕಲ್ಯಾಣ ಸಚಿವೆ @laxmi_hebbalkar ಅವರಾಗಲಿ, ಬಳ್ಳಾರಿ ಉಸ್ತುವಾರಿ ಸಚಿವ ಜಮೀರ್ ಆಗಲಿ ಅಥವಾ ಉಪಮುಖ್ಯಮಂತ್ರಿ ಡಿಕೆಶಿ ಆಗಲಿ ಒಮ್ಮೆಯೂ ಆಸ್ಪತ್ರೆಗೆ ಭೇಟಿ ನೀಡಿಲ್ಲ. ಮೃತರ ಕುಟುಂಬದವರಿಗೆ ಸಾಂತ್ವನವನ್ನು ಹೇಳಲೇ ಇಲ್ಲ. @INCKarnataka ಸರ್ಕಾರದಲ್ಲಿ ಜನಸಾಮಾನ್ಯರ ಜೀವಕ್ಕೆ ಬೆಲೆಯೇ ಇಲ್ಲ… ಸರ್ಕಾರದ ಬೇಜವಾಬ್ದಾರಿ, ನಿರ್ಲಕ್ಷ್ಯಕ್ಕೆ ಬಡವರು ಬಲಿಯಾದರೇ ಡೋಂಟ್ ಕೇರ್. ಕಾಂಗ್ರೆಸ್ ನಾಯಕರಿಗೆ ಆದರೇ ವಿಶೇಷ ಕಾಳಜಿ. ಕಾಂಗ್ರೆಸ್ ಸರ್ಕಾರದ ಈ ಇಬ್ಭಗೆ ನೀತಿಗೆ ಧಿಕ್ಕಾರ ಎಂದು ಟ್ವೀಟ್ ಮಾಡಿದೆ.
![](https://suddione.com/content/uploads/2025/01/studio-11.webp)