Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮೈಸೂರು ಸ್ಯಾಂಡಲ್ ಸೋಪ್ ರಾಯಭಾರಿಯಾದ ತಮನ್ನಾ ತೆಗೆದುಕೊಳ್ಳುವ ಸಂಭಾವನೆ ಎಷ್ಟು ಕೋಟಿ ಗೊತ್ತಾ..?

---Advertisement---

ಮೈಸೂರು ಸ್ಯಾಂಡಲ್ ಸೋಪ್ ಬಳಸುವುದೆಂದರೆ ಎಲ್ಲರಿಗೂ ಇಷ್ಟ. ಆ ವಾಸನೆಗೇನೆ ಫಿದಾ ಆದವರು ಹೆಚ್ಚು. ಆದ್ರೆ ಸ್ವಲ್ಪ ದುಬಾರಿಯೇ ಸರಿ. ಇದೀಗ ಹೊಸ ವಿಷಯವೇನು ಅಂದ್ರೆ ಸ್ಯಾಂಡಲ್ ಸೋಪ್ ಗೆ ರಾಯಭಾರಿಯನ್ನ ನೇಮಕ ಮಾಡಲಾಗಿದೆ. ಖ್ಯಾತ ನಟಿ, ಮಿಲ್ಕಿ ಬ್ಯೂಟಿ ತಮನ್ನಾ ಅವರನ್ನ ರಾಯಭಾರಿಯನ್ನಾಗಿ ನೇಮಿಸಲಾಗಿದೆ.

ಸೌತ್ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಂತ ತಮನ್ನಾ, ಸದ್ಯ ಬಾಲಿವುಡ್ ನತ್ತ ಮುಖ ಮಾಡಿದ್ದಾರೆ. ಇದೀಗ ಕರ್ನಾಟಕದ ಹೆಮ್ಮೆಯ ಸೋಪ್ ಆಗಿರುವ ಮೈಸೂರು ಸ್ಯಾಂಡಲ್ ಸೋಪ್ ಗೆ ರಾಯಭಾರಿಯಾಗಿದ್ದಾರೆ. ಈ ಪ್ರಚಾರಕ್ಕಾಗಿ ಅವರಿಗೆ ನೀಡುತ್ತಿರುವ ಹಣವೆಷ್ಟು ಎಂಬುದರ ಬಗ್ಗೆಯೂ ಸರ್ಕಾರ ಮಾಹಿತಿಯನ್ನ ಬಹಿರಂಗ ಪಡಿಸಿದೆ. ತಮನ್ನಾಗೆ ಮೈಸೂರ್ ಸ್ಯಾಂಡಲ್ ನೀಡಿತ್ತಿರುವ ಮೊತ್ತವನ್ನ ಕೇಳಿದ್ರೆ ನಿಜಕ್ಕೂ ಶಾಕ್ ಆಗದೆ ಇರುವುದಿಲ್ಲ.

ತಮನ್ನಾಗೆ ದೇಶದಾದ್ಯಂತ ಅಭಿಮಾನಿಗಳಿದ್ದಾರೆ. ಹಾಗೇ ಮಿಲ್ಕಿ ಬ್ಯೂಟಿ ಎಂದೇ ಖ್ಯಾತಿ ಪಡೆದಿದ್ದಾರೆ. ಮೈಸೂರು ಸ್ಯಾಂಡಲ್ ಸೋಪನ್ನು ದೇಶಾದ್ಯಂತ ಪಸರಿಸುವುದಕ್ಕೆ ಪ್ಲ್ಯಾನ್ ನಡೆದಿದೆ. ಎಲ್ಲೆಡೆ ಮೈಸೂರು ಸ್ಯಾಂಡಲ್ ಸೋಪಿನ ಮಹತ್ವ ತಿಳಿಸಿ, ಮಾರಾಟ ಹೆಚ್ಚಳ ಮಾಡುವುದಕ್ಕೆ ಸರ್ಕಾರ ಯೋಜನೆ ರೂಪಿಸಿದ್ದು, ಅದಕ್ಕಾಗಿ ತಮನ್ನಾ ಅವರನ್ನ ಆಯ್ಕೆ ಮಾಡಿಕೊಳ್ಳಲಾಗಿದೆ. ತಮನ್ನಾ ಮೈಸೂರು ಸ್ಯಾಂಡಲ್ ಸೋಪ್ ನ ರಾಯಭಾರಿಯಾಗಿ ಎರಡು ವರ್ಷ ಎರಡು ದಿನಗಳ ಕಾಲಕ್ಕೆ ಒಪ್ಪಿಗೆ ನೀಡಿದ್ದಾರೆ. ಇದಕ್ಕಾಗಿ ತಮನ್ನಾ ಪಡೆಯುತ್ತಿರುವುದು ಬರೋಬ್ಬರಿ 6 ಕೋಟಿ ಎರಡು ಲಕ್ಷ ರೂಪಾಯಿ‌. ರಾಯಭಾರಿಯಾಗಿ ಕಾಣಿಸಿಕೊಳ್ಳುವುದಕ್ಕೆ ವರ್ಷಕ್ಕೆ ಮೂರು ಕೋಟಿ ಒಂದು ಲಕ್ಷದಂತೆ ಚಾರ್ಜ್ ಮಾಡಿದ್ದಾರೆ. ದುಬಾರಿ ಸಂಭಾವನೆಯನ್ನು ಪಡೆದು ಸೋಪ್ ಅನ್ನು ಪ್ರಚಾರ ಮಾಡಲು ಹೊರಟಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...