ಗೆಲುವಿಗಾಗಿ ನಿಖಿಲ್ ಕುಮಾರಸ್ವಾಮಿ ಎಷ್ಟೆಲ್ಲಾ ಓಡಾಟ ನಡೆಸುತ್ತಿದ್ದಾರೆ ಗೊತ್ತಾ..?

suddionenews
1 Min Read

2023ರ ಚುನಾವಣೆ ಇನ್ನು ಕೆಲವೇ ತಿಂಗಳಲ್ಲಿ ಅನೌನ್ಸ್ ಆಗಲಿದೆ. ಈಗಿನಿಂದಾನೇ ಪ್ರಚಾರ ಕಾರ್ಯವನ್ನು ಶುರು ಮಾಡಿಕೊಂಡಿದ್ದಾರೆ. ಜನರ ಬಳಿ ಹೋಗಿ ಸಮಸ್ಯೆ ಕೇಳಲು ಆರಂಭಿಸಿದ್ದಾರೆ. ಜೆಡಿಎಸ್ ಈ ಬಾರಿ ಬಹುಮತದೊಂದಿಗೆ ಅಧಿಕಾರಕ್ಕೆ ಬರಲೇಬೇಕೆಂಬ ಪಣ ತೊಟ್ಟಿದೆ. ಅದೇ ಕಾರಣಕ್ಕಾಗಿಯೇ ಪಂಚರತ್ನ ರಥಯಾತ್ರೆಯನ್ನು ನಡೆಸುತ್ತಿದೆ.

ನಿಖಿಲ್ ಕುಮಾರಸ್ವಾಮಿ ಕೂಡ ಅಖಾಡದಲ್ಲಿ ಆಕ್ಟೀವ್ ಆಗಿದ್ದಾರೆ. ತಂದೆಯನ್ನು ಸಿಎಂ ಸ್ಥಾನದಲ್ಲಿ ಕೂರಿಸಿಬೇಕೆಂಬ ಬಯಕೆಯಿಂದಾಗಿ ನಿಖಿಲ್ ಕುಮಾರಸ್ವಾಮಿ ಕಾಲಿಗೆ ಚಕ್ರ ಕಟ್ಟಿಕೊಂಡವರಂತೆ ಓಡಾಡುತ್ತಿದ್ದಾರೆ. ಜನರ ಬಳಿಗೆ ಹೋಗಿ ಸಮಸ್ಯೆಗಳನ್ನು ಆಲಿಸುವುದು ಅಲ್ಲದೆ, ಅವರ ಕಷ್ಟಗಳನ್ನು ಆಲಿಸುತ್ತಿದ್ದಾರೆ.

ಈಗಾಗಲೇ ನಿಖಿಲ್ ಕುಮಾರಸ್ವಾಮಿ ಅವರನ್ನು ರಾಮನಗರದ ಅಭ್ಯರ್ಥಿ ಎಂದು ಘೋಷಣೆ ಮಾಡಲಾಗಿದೆ. ಹೀಗಾಗಿ ರಾಮನಗರ, ಚನ್ನಪಟ್ಟಣ ಎರಡು ಕ್ಷೇತ್ರದಲ್ಲಿ ಓಡಾಟ ಶುರು ಮಾಡಿದ್ದಾರೆ. ಬೆಂಬಲಿಗರ ಜೊತೆಗೆ ಬೈಕ್ ನಲ್ಲಿಯೇ ಹಳ್ಳಿ ಹಳ್ಳಿಗೆ ಹೋಗಿ, ಜನರ ಹತ್ತಿರ ಸಮಸ್ಯೆಗಳನ್ನು ಆಲಿಸುತ್ತಿದ್ದಾರೆ. ಪ್ರತಿ ಗ್ರಾಮದಲ್ಲೂ ಸಭೆ ನಡೆಸಿ, ಅಹವಾಲು ಸ್ವೀಕರಿಸುತ್ತಿದ್ದಾರೆ. ನಮ್ಮ ತಂದೆಯನ್ನು ಮತ್ತೊಮ್ಮೆ ಸಿಎಂ ಮಾಡಿ ಎಂದು ಮನವಿ ಮಾಡುತ್ತಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *