Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಇಂದು ಯಾವೆಲ್ಲಾ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ ಗೊತ್ತಾ..?

---Advertisement---

 

 

ಬೆಂಗಳೂರು: ರಾಜ್ಯದಲ್ಲಿ ಇಂದು ಮಳೆಯಾಗಿದೆ. ಎಲ್ಲೆಡೆ ಬೆಳ್ಳಂ ಬೆಳಗ್ಗೆಯೇ ಮಳೆ ಸುರಿದಿದ್ದು, ಕೆಲಸಗಳಿಗೆ ಹೊರಟವರು ಸ್ವಲ್ಪ ಕಸಿವಿಸಿಯಾಗಿದ್ದಾರೆ. ಆದರೆ ಮಳೆ ಬಂದಿದ್ದು ಕಂಡು ರೈತನ ಮನಸ್ಸು ಕೊಂಚ ಹಗುರಾಗಿದೆ. ಯಾಕಂದ್ರೆ ಮುಂಗಾರು ಮಳರ ಆರಂಭದಲ್ಲಿಯೇ ಕೈಕೊಟ್ಟಿತ್ತು. ಹೀಗಾಗಿ ರೈತರು ಆತಂಕಗೊಂಡಿದ್ದರು.

ಇಂದಿನಿಂದ ಮತ್ತೆ ಮುಂಗಾರು ಮಳೆ ಚುರುಕಾಗುವ ಎಲ್ಲಾ ಲಕ್ಷಣಗಳು ಕಾಣಿಸುತ್ತಿದೆ. ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ರಾಮನಗರ, ಮಂಡ್ಯ, ಚಾಮರಾಜನಗರ, ಮೈಸೂರು, ಕೊಡಗು, ತುಮಕೂರು, ಚಿತ್ರದುರ್ಗ, ವಿಜಯನಗರ, ಬಳ್ಳಾರಿ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ‌ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನುಳಿದಂತೆ ಹಲವು ಜಿಲ್ಲೆಗಳಲ್ಲಿ ಉತ್ತಮ ಮತ್ತು ಸಾಧಾರಣ ಮಳೆಯಾಗಲಿದೆ.

ಇನ್ನು ಬಿಪರ್ ಜಾಯ್ ಚಂಡಮಾರುತದ ಪರಿಣಾ‌ಮದಿಂದಾಗಿ ರಾಜ್ಯದಲ್ಲಿ ಮುಂಗಾರು ಮಳೆಗೆ ಅಡ್ಡಿಯಾಗಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್ ಮೊದಲ ವಾರದಿಂದಾನೇ ಮುಂಗಾರು ಮಳೆ ಜೋರಾಗಬೇಕಿತ್ತು. ಆದರೆ ಮೂರನೃ ವಾರವಾದರೂ ಮಳೆಯ ಸುಳಿವೇ ಇರಲಿಲ್ಲ. ಇಂದಿನಿಂದ ಮುಂಗಾರು ಆರಂಭದ ಸೂಚನೆಯನ್ನು ಹವಮಾನ ಇಲಾಖೆ ನೀಡಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment