Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕಾಂಗ್ರೆಸ್ ಸೇರಿರುವ ಗೀತಕ್ಕನ ಜೊತೆ ಶಿವಣ್ಣ ನಾಳೆ ಎಲ್ಲೆಲ್ಲಾ ಪ್ರಚಾರ ಮಾಡ್ತಾರೆ ಗೊತ್ತಾ..?

---Advertisement---

ಬೆಂಗಳೂರು: ದೊಡ್ಮನೆ ಸೊಸೆ ಗೀತಾ ಶಿವರಾಜ್ಕುಮಾರ್ ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಈ ಮೂಲಕ ಕಾಂಗ್ರೆಸ್ ಅಭ್ಯರ್ಥಿಗಳ ಪ್ರಚಾರ ನಡೆಸಲಿದ್ದಾರೆ. ಗೀತಕ್ಕನ ಜೊತೆಗೆ ಶಿವಣ್ಣ ಕೂಡ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಳ್ಳಲಿದ್ದಾರೆ. ನಾಳೆ ಕಾಂಗ್ರೆಸ್ ಅಭ್ಯರ್ಥಿಗಳ ಪರ ಶಿವಣ್ಣ ಕೂಡ ಪ್ರಚಾರದಲ್ಲಿ ಭಾಗಿಯಾಗಲಿದ್ದಾರೆ.

ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನು ಕೇವಲ 10 ದಿನಗಳು ಮಾತ್ರ ಬಾಕಿ ಇದೆ. ಹೀಗಾಗಿ ಭರ್ಜರಿ ಪ್ರಚಾರ ಕಾರ್ಯಗಳು ನಡೆಯುತ್ತಿವೆ. ನಟ ಶಿವರಾಜ್ಕುಮಾರ್ ಕೂಡ ನಾಳೆಯಿಂದ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ. ಶಿವಮೊಗ್ಗದ ಸೊರಬ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಧು ಬಂಗಾರಪ್ಪ ಅವರ ಪರ ಭರ್ಜರಿ ಪ್ರಚಾರ ನಡೆಸಲಿದ್ದಾರೆ.

ಶಿವಮೊಗ್ಗದಲ್ಲಿ ಪ್ರಚಾರ ನಡೆಸಿದ ಬಳಿಕ, ವರುಣಾದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಪರ ಪ್ರಚಾರ ನಡೆಸಲಿದ್ದಾರೆ. ವರುಣಾ‌ ನಂತರ ಹುಬ್ಬಳ್ಳಿ – ಧಾರಾವಾಡ ಸೆಂಟ್ರಲ್ ಕ್ಷೇತ್ರದಲ್ಲಿ ಜಗದೀಶ್ ಶೆಟ್ಟರ್ ಪರ ಪ್ರಚಾರ ನಡೆಸಲಿದ್ದಾರೆ. ಶಿರಸಿಯಲ್ಲಿ ಭೀಮಣ್ಣ ನಾಯಕ್. ಮತ್ತು ಅಶೋಕ್ ಖೇಣಿ ಪರವೂ ಪ್ರಚಾರ ನಡೆಸಲಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...