ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
ಸುದ್ದಿಒನ್
ಆಯುರ್ವೇದವು ಪ್ರತಿದಿನ ಒಂದು ಲವಂಗವನ್ನು ಬಾಯಿಯಲ್ಲಿ ಹಾಕಿಕೊಳ್ಳುವುದರಿಂದ ಅನೇಕ ಪ್ರಯೋಜನಗಳಿವೆ ಎಂದು ಹೇಳುತ್ತದೆ. ಇವುಗಳನ್ನು ನಮ್ಮ ದೈನಂದಿನ ಆಹಾರದಲ್ಲಿ ಸೇವಿಸುವುದು ಏಕೆ ಅಗತ್ಯ ಎಂದು ತಿಳಿದುಕೊಳ್ಳೋಣ.
ಹಲ್ಲು ನೋವಿಗೆ :
ಹಲ್ಲುನೋವು ನಿವಾರಿಸಲು ಲವಂಗವನ್ನು ಹಲವು ವರ್ಷಗಳಿಂದ ಬಳಸಲಾಗುತ್ತಿದೆ. ಲವಂಗದ ಎಣ್ಣೆಯನ್ನು ಟೂತ್‌ಪೇಸ್ಟ್‌ಗಳು ಮತ್ತು ಔಷಧಿಗಳಲ್ಲಿಯೂ ಸಹಾ ಬಳಸಲಾಗುತ್ತದೆ. ತೀವ್ರವಾದ ಹಲ್ಲುನೋವು ಇದ್ದರೆ, ದವಡೆಯಲ್ಲಿ ಲವಂಗ ಇಟ್ಟು ಹೀರುವುದರಿಂದ ತಕ್ಷಣ ಪರಿಹಾರ ಸಿಗುತ್ತದೆ. ಇದು ಅನೇಕ ಉರಿಯೂತ ನಿವಾರಕ ಗುಣಗಳನ್ನು ಹೊಂದಿದೆ.
ಬಾಯಿ ದುರ್ವಾಸನೆ :
ಆಗಾಗ್ಗೆ ಬಾಯಿ ದುರ್ವಾಸನೆಯಿಂದ ಬಳಲುತ್ತಿರುವವರಿಗೆ ಲವಂಗ ಅದ್ಭುತವಾದ ಮನೆ ಮದ್ದು. ಲವಂಗವನ್ನು ಬಾಯಿಯಲ್ಲಿ ಅಗಿಯುವುದರಿಂದ ಅಥವಾ ಹೀರುವುದರಿಂದ ಬಾಯಿಯ ದುರ್ವಾಸನೆ ತಕ್ಷಣವೇ ಕಡಿಮೆಯಾಗುತ್ತದೆ. ಬಾಯಿ ತಾಜಾವಾಗುತ್ತದೆ. ಹ್ಯಾಲಿಟೋಸಿಸ್ ಅನ್ನು ಗುಣಪಡಿಸುತ್ತದೆ.
ಒಸಡುಗಳಿಂದ ರಕ್ತ :
ಬಾಯಿಯಲ್ಲಿರುವ ಯಾವುದೇ ರೀತಿಯ ಸಮಸ್ಯೆಯನ್ನು ಲವಂಗ ಗುಣಪಡಿಸುತ್ತದೆ. ಇದು ಒಸಡು ಕಾಯಿಲೆಗಳಿಂದ ಪರಿಹಾರ ನೀಡುತ್ತದೆ. ಒಸಡುಗಳ ಊತವನ್ನು ಕಡಿಮೆ ಮಾಡುತ್ತದೆ ಮತ್ತು ರಕ್ತಸ್ರಾವವನ್ನು ನಿಲ್ಲಿಸುತ್ತದೆ.
ಅಜೀರ್ಣ
ಮಕ್ಕಳು ಮತ್ತು ವಯಸ್ಕರು ಇಬ್ಬರೂ ಕಾಲಕಾಲಕ್ಕೆ ಅಜೀರ್ಣದಿಂದ ಬಳಲುತ್ತಾರೆ. ಹೊಟ್ಟೆ ಉಬ್ಬಿಕೊಂಡು ತೀವ್ರ ಅಸ್ವಸ್ಥತೆ ಉಂಟಾಗುತ್ತದೆ. ಇದರಿಂದ ಹೊಟ್ಟೆ ನೋವು ಮತ್ತು ತಲೆತಿರುಗುವಿಕೆ ಕೂಡ ಉಂಟಾಗಬಹುದು. ಈ ರೀತಿ ಅನಿಸಿದರೆ, ತಕ್ಷಣ ಬಾಯಿಯಲ್ಲಿ ಒಂದು ಸಣ್ಣ ಲವಂಗವನ್ನು ಹಾಕಿ. ಇದರ ಔಷಧೀಯ ಗುಣಗಳು ಅಜೀರ್ಣ ಸಮಸ್ಯೆಗಳಿಂದ ರಕ್ಷಿಸುತ್ತವೆ.
ಇದಲ್ಲದೆ, ಲವಂಗವನ್ನು ಅಗಿಯುವುದರಿಂದ ಜೀರ್ಣಕಾರಿ ಕಿಣ್ವಗಳು ಉತ್ಪತ್ತಿಯಾಗುತ್ತವೆ. ಇದರಿಂದ ನಾವು ಸೇವಿಸುವ ಆಹಾರದಲ್ಲಿರುವ ಪೋಷಕಾಂಶಗಳನ್ನು ದೇಹಕ್ಕೆ ಸುಲಭವಾಗಿ ಸೇರಿಕೊಳ್ಳಲು ಸಾಧ್ಯವಾಗುತ್ತದೆ.
ತೀವ್ರ ಕೆಮ್ಮಿಗೆ
ತೀವ್ರ ಕೆಮ್ಮಿನಿಂದ ಬಳಲುತ್ತಿರುವವರಿಗೆ ಲವಂಗವನ್ನು ನೀಡಲು ಪ್ರಯತ್ನಿಸಿ. ಇದರ ಬ್ಯಾಕ್ಟೀರಿಯಾ ವಿರೋಧಿ ಗುಣಗಳು ಕೆಮ್ಮಿನಿಂದ ಪರಿಹಾರ ನೀಡುತ್ತದೆ.
ಗಂಟಲು ನೋವಿನಿಂದ ಬಳಲುತ್ತಿದ್ದರೆ
ಗಂಟಲು ನೋವು ಇದ್ದರೆ, ಲವಂಗ ಚಹಾ ಕುಡಿಯಿರಿ ಅಥವಾ ಲವಂಗವನ್ನು ನೇರವಾಗಿ ಅಗಿಯಿರಿ. ಇದು ಗಂಟಲಿನಲ್ಲಿರುವ ಬ್ಯಾಕ್ಟೀರಿಯಾಗಳನ್ನು ಕಡಿಮೆ ಮಾಡುತ್ತದೆ ಮತ್ತು ಗಂಟಲು ನೋವನ್ನು ನಿವಾರಿಸಲು ಸಹಾಯ ಮಾಡುತ್ತದೆ.
ಇದರ ಬ್ಯಾಕ್ಟೀರಿಯಾ ವಿರೋಧಿ ಗುಣಲಕ್ಷಣಗಳು ಸೋಂಕುಗಳ ವಿರುದ್ಧ ಹೋರಾಡುವುದಲ್ಲದೆ, ಒಟ್ಟಾರೆ ಆರೋಗ್ಯದ ದೃಷ್ಟಿಯಿಂದಲೂ ಇದು ತುಂಬಾ ಪರಿಣಾಮಕಾರಿಯಾಗಿದೆ.
ಒತ್ತಡ ಕಡಿಮೆ ಮಾಡಲು

ಲವಂಗವು ಒತ್ತಡ ಮತ್ತು ಆತಂಕವನ್ನು ನಿವಾರಿಸುವ ಗುಣಗಳನ್ನು ಹೊಂದಿದೆ. ಇದು ತಕ್ಷಣವೇ ಆತಂಕವನ್ನು ಕಡಿಮೆ ಮಾಡುತ್ತದೆ ಮತ್ತು ಮನಸ್ಸನ್ನು ಶಾಂತಗೊಳಿಸುತ್ತದೆ.
(ಪ್ರಮುಖ ಸೂಚನೆ: ಆರೋಗ್ಯ ತಜ್ಞರು ಮತ್ತು ಇತರ ಅಧ್ಯಯನಗಳಿಂದ ಪಡೆದ ಮಾಹಿತಿಯ ಆಧಾರದ ಮೇಲೆ ನಾವು ಈ ವಿವರಗಳನ್ನು ಒದಗಿಸುತ್ತಿದ್ದೇವೆ. ಇದು ಕೇವಲ ಪ್ರಾಥಮಿಕ ಮಾಹಿತಿಯಾಗಿದ್ದು, ಇಲ್ಲಿ ಒದಗಿಸಲಾದ ವಿಷಯಗಳು ಕೇವಲ ತಿಳುವಳಿಕೆಗಾಗಿ ಮಾತ್ರ. ನಿಮಗೆ ಯಾವುದೇ ಅನುಮಾನಗಳು ಅಥವಾ ಸಮಸ್ಯೆಗಳಿದ್ದರೆ ವೈದ್ಯರನ್ನು ಸಂಪರ್ಕಿಸುವುದು ಸೂಕ್ತ.)

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್