ಖಾಲಿ ಹೊಟ್ಟೆಯಲ್ಲಿ ಒಂದು ಚಮಚ ತುಪ್ಪ ಸೇವಿಸಿದರೆ ಆರೋಗ್ಯಕ್ಕೆ ಏನೆಲ್ಲಾ ಉಪಯೋಗ ಇದೆ ಗೊತ್ತಾ ?

 

ಸುದ್ದಿಒನ್ : ಭಾರತೀಯ ಪಾಕಪದ್ಧತಿಯಲ್ಲಿ ತುಪ್ಪವನ್ನು ಹೆಚ್ಚಾಗಿ ಬಳಸಲಾಗುತ್ತದೆ.  ಇದನ್ನು ಸೂಪರ್‌ಫುಡ್ ಎಂತಲೂ ಕರೆಯುತ್ತಾರೆ. ತುಪ್ಪವನ್ನು ಆಯುರ್ವೇದ ಚಿಕಿತ್ಸೆಗಳಲ್ಲಿಯೂ ಕೂಡಾ ಹೆಚ್ಚಾಗಿ ಬಳಸಲಾಗುತ್ತದೆ. ತುಪ್ಪವು ಉತ್ಕರ್ಷಣ ನಿರೋಧಕಗಳು, ಆರೋಗ್ಯಕರ ಕೊಬ್ಬುಗಳು, ಜೀವಸತ್ವಗಳು ಮತ್ತು ಖನಿಜಗಳಿಂದ ಸಮೃದ್ಧವಾಗಿದೆ. ಇದು ವಿಟಮಿನ್ ಎ, ಇ, ಡಿ, ಕೆ, ಒಮೆಗಾ -3 ಮತ್ತು ಒಮೆಗಾ -6 ನಂತಹ ಕೊಬ್ಬಿನಾಮ್ಲಗಳು, ಲಿನೋಲಿಕ್ ಮತ್ತು ಬ್ಯುಟರಿಕ್ ಆಮ್ಲಗಳಂತಹ ಉತ್ಕರ್ಷಣ ನಿರೋಧಕಗಳು ಸಮೃದ್ಧವಾಗಿದೆ.

ಅದರಲ್ಲೂ ದೇಸಿ ಹಸುವಿನ ತುಪ್ಪ ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎನ್ನುತ್ತಾರೆ ತಜ್ಞರು. ಜೀವಕೋಶಗಳನ್ನು ಪುನರುಜ್ಜೀವನಗೊಳಿಸಲು ಇದು ಪರಿಣಾಮಕಾರಿ ಎಂದು ತಜ್ಞರು ಹೇಳುತ್ತಾರೆ.  ಪ್ರತಿದಿನ ಬೆಳಗ್ಗೆ ಒಂದು ಚಮಚ ದೇಸಿ ಹಸುವಿನ ತುಪ್ಪವನ್ನು ಸೇವಿಸಿದರೆ ಹಲವಾರು ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದು ಎನ್ನುತ್ತಾರೆ ತಜ್ಞರು.

ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಒಂದು ಚಮಚ ದೇಸಿ ತುಪ್ಪವನ್ನು ಸೇವಿಸಿದರೆ ಜೀರ್ಣಕ್ರಿಯೆ ಚುರುಕಾಗುತ್ತದೆ. ಜಟರಾಗ್ನಿ ಎಂಬ ಹೊಟ್ಟೆಯಲ್ಲಿ ಆಮ್ಲದ ಉತ್ಪಾದನೆಯನ್ನು ತುಪ್ಪ ಉತ್ತೇಜಿಸುತ್ತದೆ ಎಂದು ತಜ್ಞರು ಹೇಳುತ್ತಾರೆ. ಇದು ಆಹಾರವನ್ನು ಉತ್ತಮವಾಗಿ ಜೀರ್ಣಿಸಿಕೊಳ್ಳಲು ಸಹಾಯ ಮಾಡುತ್ತದೆ. ಖಾಲಿ ಹೊಟ್ಟೆಯಲ್ಲಿ ತೆಗೆದುಕೊಂಡಾಗ ಆರೋಗ್ಯಕರ ಜೀರ್ಣಾಂಗ ವ್ಯವಸ್ಥೆಯನ್ನು ಉತ್ತೇಜಿಸುತ್ತದೆ. ತುಪ್ಪವು ಮಲಬದ್ಧತೆಯ ಸಮಸ್ಯೆಯನ್ನು ಪರಿಹರಿಸುತ್ತದೆ. ಚಯಾಪಚಯ ಕ್ರಿಯೆಯನ್ನು ಸುಧಾರಿಸುತ್ತದೆ. ಸಣ್ಣ ಕರುಳು ಪೋಷಕಾಂಶಗಳನ್ನು ಉತ್ತಮವಾಗಿ ಹೀರಿಕೊಳ್ಳಲು ಸಹಾಯ ಮಾಡುತ್ತದೆ.

ಶತಮಾನಗಳಿಂದಲೂ ತುಪ್ಪವನ್ನು ಔಷಧವಾಗಿ ಬಳಸಲಾಗುತ್ತಿದೆ. ಇದು ಮೂಗು, ಗಂಟಲು ಮತ್ತು ಎದೆಯ ಸೋಂಕಿನಿಂದ ರಕ್ಷಿಸುತ್ತದೆ. ಖಾಲಿ ಹೊಟ್ಟೆಯಲ್ಲಿ ತುಪ್ಪ ಸೇವಿಸಿದರೆ ದೇಹ ಬೆಚ್ಚಗಿರುತ್ತದೆ. ಇದು ಜ್ವರ ಮತ್ತು ನೆಗಡಿಯಂತಹ ದೈನಂದಿನ ಕಾಯಿಲೆಗಳನ್ನು ಗುಣಪಡಿಸುತ್ತದೆ. ಪ್ರತಿದಿನ ಖಾಲಿ ಹೊಟ್ಟೆಯಲ್ಲಿ ತುಪ್ಪವನ್ನು ಸೇವಿಸಿದರೆ ರೋಗನಿರೋಧಕ ಶಕ್ತಿಯನ್ನು ಬಲಪಡಿಸುತ್ತದೆ.

ತುಪ್ಪ ಮೆದುಳಿನ ಆರೋಗ್ಯಕ್ಕೆ ತುಂಬಾ ಒಳ್ಳೆಯದು.  ಮೆದುಳಿನಲ್ಲಿ ಶೇ. 50% ಕ್ಕಿಂತ ಹೆಚ್ಚು ಕೊಬ್ಬು ಇರುತ್ತದೆ. ಮೆದುಳಿನ ಸರಿಯಾದ ಕಾರ್ಯನಿರ್ವಹಣೆಗೆ ಕೊಬ್ಬಿನಾಮ್ಲಗಳು ಅವಶ್ಯಕ. ತುಪ್ಪವು ಮೆದುಳಿಗೆ ಸಾಕಷ್ಟು ಕೊಬ್ಬನ್ನು ಒದಗಿಸುತ್ತದೆ. ಇದರಿಂದಾಗಿ ಅಗತ್ಯವಾದ ಪೋಷಣೆಯನ್ನು ಒದಗಿಸುತ್ತದೆ. ಇದು ಮೆದುಳನ್ನು ಹೈಡ್ರೀಕರಿಸುತ್ತದೆ, ಇದರಿಂದಾಗಿ ಅರಿವಿನ ಕಾರ್ಯಗಳು ಮತ್ತು ಏಕಾಗ್ರತೆಯನ್ನು ಹೆಚ್ಚಿಸುತ್ತದೆ. ಇದಲ್ಲದೆ, ತುಪ್ಪದಲ್ಲಿರುವ ವಿಟಮಿನ್ ಇ ಮೆದುಳಿನ ಸಮಸ್ಯೆಗಳಿಂದ ರಕ್ಷಿಸುತ್ತದೆ. ಖಾಲಿ ಹೊಟ್ಟೆಯಲ್ಲಿ ತೆಗೆದುಕೊಂಡಾಗ ಇದು ಮ್ಯಾಜಿಕ್ ನಂತೆ ಕೆಲಸ ಮಾಡುತ್ತದೆ.

ತುಪ್ಪವು ಸಂಧಿವಾತ ನೋವನ್ನು ಕಡಿಮೆ ಮಾಡಲು ಪರಿಣಾಮಕಾರಿಯಾಗಿದೆ.  ತುಪ್ಪದಲ್ಲಿ ಒಮೆಗಾ-3 ಕೊಬ್ಬಿನಾಮ್ಲಗಳು ಇರುತ್ತವೆ. ಇವು ಆಸ್ಟಿಯೊಪೊರೋಸಿಸ್ ರೋಗಿಗಳಲ್ಲಿ ಉರಿಯೂತವನ್ನು ಕಡಿಮೆ ಮಾಡುತ್ತದೆ. ಕ್ಯಾಲ್ಸಿಯಂ ಕೊರತೆಯಿರುವ ಮಹಿಳೆಯರು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ತುಪ್ಪವನ್ನು ಸೇವಿಸಬಹುದು ಎಂದು ತಜ್ಞರು ಹೇಳುತ್ತಾರೆ. ತುಪ್ಪವು ಕೀಲುಗಳು ಮತ್ತು ಅಂಗಾಂಶಗಳ ನಡುವೆ Lubricant ಆಗಿ ಕಾರ್ಯನಿರ್ವಹಿಸುತ್ತದೆ. ಈ ಮೂಲಕ ಮೂಳೆಯ ಬಲವನ್ನು ಹೆಚ್ಚಿಸುತ್ತದೆ ಮತ್ತು ತೂಕ ನಷ್ಟವನ್ನು ಉತ್ತೇಜಿಸುತ್ತದೆ.

ದೇಸಿ ಹಸುವಿನ ತುಪ್ಪ ಅತ್ಯುತ್ತಮ ಕೂಲಿಂಗ್ ಏಜೆಂಟ್ ಆಗಿ ಕಾರ್ಯನಿರ್ವಹಿಸುತ್ತದೆ.  ತುಪ್ಪದಲ್ಲಿರುವ ಒಮೆಗಾ 3 ಕೊಬ್ಬಿನಾಮ್ಲಗಳು ದೃಷ್ಟಿ ಸಮಸ್ಯೆಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಕಣ್ಣಿನ ಆಯಾಸ ಮತ್ತು ಒಣ ಕಣ್ಣುಗಳಂತಹ(Dry eye ness) ಸಮಸ್ಯೆಗಳನ್ನು ನಿವಾರಿಸುತ್ತದೆ.

ತುಪ್ಪದಲ್ಲಿರುವ ಬ್ಯುಟರಿಕ್ ಆಮ್ಲ ಮತ್ತು ಮಧ್ಯಮ ಸರಪಳಿ ಟ್ರೈಗ್ಲಿಸರೈಡ್‌ಗಳು ಉತ್ತಮ ಕೊಲೆಸ್ಟ್ರಾಲ್ ಮತ್ತು ಕರುಳಿನ ಆರೋಗ್ಯವನ್ನು ಉತ್ತೇಜಿಸುತ್ತದೆ. ಕೊಬ್ಬು ಸೇರಿದಂತೆ ವಿಷಕಾರಕಗಳನ್ನು ಹೊರಹಾಕಲು ಸಹಾಯ ಮಾಡುತ್ತದೆ. ಇದು ಕೆಟ್ಟ ಕೊಲೆಸ್ಟ್ರಾಲ್ ಅನ್ನು 10 ರಿಂದ 20% ರಷ್ಟು ಕಡಿಮೆ ಮಾಡುತ್ತದೆ. ಒಮೆಗಾ -3 ಕೊಬ್ಬಿನಾಮ್ಲಗಳು ಕೊಲೆಸ್ಟ್ರಾಲ್ ಅನ್ನು ಕರಗಿಸಲು ಸಹಾಯ ಮಾಡುತ್ತದೆ. ಇದು ಹೃದಯದ ಆರೋಗ್ಯವನ್ನು ಸುಧಾರಿಸುತ್ತದೆ.

ಪ್ರಮುಖ ಸೂಚನೆ : ಆರೋಗ್ಯ ತಜ್ಞರು ಮತ್ತು ಅಧ್ಯಯನಗಳ ಪ್ರಕಾರ ಈ ವಿವರಗಳನ್ನು ಒದಗಿಸಲಾಗಿದೆ. ಈ ಲೇಖನವು ನಿಮ್ಮ ಮಾಹಿತಿಗಾಗಿ ಮಾತ್ರ. ಸೌಂದರ್ಯ ಮತ್ತು ಆರೋಗ್ಯಕ್ಕೆ ಸಂಬಂಧಿಸಿದ ಯಾವುದೇ ಸಣ್ಣ ಸಮಸ್ಯೆಗೆ, ವೈದ್ಯರನ್ನು ಸಂಪರ್ಕಿಸುವುದು ಉತ್ತಮ ಮಾರ್ಗವಾಗಿದೆ.

suddionenews

Recent Posts

ಮೈಕ್ರೋ ಫೈನಾನ್ಸ್ ಸುಗ್ರಿವಾಜ್ಞೆಗೆ ಅಂಕಿತ ಹಾಕದ ರಾಜ್ಯಪಾಲರು : ಸರ್ಕಾರಕ್ಕೆ ಹಿನ್ನಡೆ

ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…

46 minutes ago

ಚಿತ್ರದುರ್ಗ APMC | ಶೇಂಗಾ, ಕಡಲೆ ಸೇರಿದಂತೆ ಇತರೆ ಉತ್ಪನ್ನಗಳ ಫೆಬ್ರವರಿ 07 ರ ಮಾರುಕಟ್ಟೆ ಧಾರಣೆ ವಿವಿರ ಇಲ್ಲಿದೆ…!

  ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…

1 hour ago

ಚಿತ್ರದುರ್ಗದ ಅಳಿಯ ಡಾಲಿ ಮೇಲೆ ದರ್ಶನ್ ಫ್ಯಾನ್ಸ್ ಗರಂ : ಫುಲ್ ಟ್ರೋಲ್..!

ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…

4 hours ago

ಮೂಡಾ ಅಪ್ಡೇಟ್: ಸಿಎಂ ಸಿದ್ದರಾಮಯ್ಯರಿಗೆ ರಿಲೀಫ್ ನೀಡಿದ ಹೈಕೋರ್ಟ್

ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…

4 hours ago

ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ

ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…

11 hours ago

ಫೆಬ್ರವರಿ 10ಕ್ಕೆ ಕರ್ನಾಟಕದಲ್ಲಿ ಕುಂಭಮೇಳ : ಹೇಗಿದೆ ತಯಾರಿ..?

  144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…

20 hours ago