ಕಾಸಿದ್ರೆ ‘ಕೈಲಾಸ’ಕ್ಕೂ ಹೋಗಬಹುದು : ಟ್ರಾನ್ಸ್ ಸಾಂಗ್ ಹೇಗಿದೆ ಗೊತ್ತಾ..?

2 Min Read

ಬೆಂಗಳೂರು : ನಾಗ್ ವೆಂಕಟ್ ನಿರ್ದೇಶನದ ಕಾಸಿದ್ರೆ ಕೈಲಾಸ ಸಿನಿಮಾ ರಿಲೀಸ್ ಗೆ ರೆಡಿಯಾಗಿದೆ. ಟ್ರಾನ್ಸ್ ಸಾಂಗ್ ಒಂದನ್ನು ಬಿಟ್ಟು ಬಾರೀ ಕುತೂಹಲವನ್ನು ಕೆರಳಿಸಿದೆ. ಸೋಷಿಯಲ್ ಮೀಡಿಯಾದಲ್ಲೆಲ್ಲಾ ಈ ಸಾಂಗ್ ನದ್ದೇ ಕಂಪು ಸೂಸುತ್ತಿದೆ.

ಮೂಲತಃ ಸಾಫ್ಟ್ ವೇರ್ ಇಂಜಿನಿಯರ್ ಆಗಿದ್ದ ನಾಗ್ ವೆಂಕಟ್ ಈಗೊಂದಷ್ಟು ವರ್ಷಗಳ ಹಿಂದೆಯೇ ಪೂರ್ಣಪ್ರಮಾಣದಲ್ಲಿ ಸಿನಿಮಾ ರಂಗದಲ್ಲಿ ತೊಡಗಿಸಿಕೊಂಡಿದ್ದಾರೆ. ಈವರೆಗೂ ಸಾಕಷ್ಟು ಕಿರು ಚಿತ್ರಗಳ ಮೂಲಕ ಪರೀಕ್ಷೆಗೊಡ್ಡಿಕೊಂಡಿದ್ದ ನಾಗ್ ವೆಂಕಟ್, ಕೈಲಾಸ ಕಾಸಿದ್ರೆ ಚಿತ್ರದ ಮೂಲಕ ಸ್ವತಂತ್ರ ನಿರ್ದೇಶಕರಾಗಿದ್ದಾರೆ. ಈಗಾಗಲೇ ಟೀಸರ್ ಮೂಲಕ ಝಲಕ್ಕುಗಳನ್ನು ಅನಾವರಣಗೊಳಿಸಿದ್ದ ಚಿತ್ರತಂಡವೀಗ ಕನ್ನಡದ ಮಟ್ಟಿಗೆ ಹೊಸತೆನ್ನಿಸುವಂಥಾ ಟ್ರಾನ್ಸ್ ಸಾಂಗ್ ವೊಪಂದನ್ನು ಬಿಡುಗಡೆಗೊಳಿಸಿದೆ. ದೃಷ್ಯಗಳ ಮೂಲಕವೇ ಕಿಕ್ಕೇರಿಸೋ ಶೈಲಿಯಲ್ಲಿದೆ.

ಈ ಸಿನಿಮಾದ ಆಂತರ್ಯಕ್ಕನುಗುಣವಾಗಿ ಈ ಟ್ರಾನ್ಸ್ ವೀಡಿಯೋ ಸಾಂಗ್ ಅನ್ನು ನಿರ್ದೇಶಕರು ರೂಪಿಸಿದ್ದಾರಂತೆ. ಮಾದಕ ಜಗತ್ತಿನ ಉನ್ಮತ್ತ ಕ್ಷಣಗಳನ್ನು ಹಿಡಿದಿಟ್ಟಂತೆ ಭಾಸವಾಗುವ ಈ ಹಾಡಿನ ಮಧ್ಯೆ ಪೂರಕವಾದ ಒಂದಷ್ಟು ಸಾಲುಗಳು, ಪಾತ್ರದ ಕಡೆಯಿಂದ ತಗೇಲಿ ಬರುತ್ತದೆ. ಅದಕ್ಕೆ ಲೇಖಕ್ ಎಂ ಸಿದ್ದಾರ್ಥ ಸಾಹಿತ್ಯ ಒದಗಿಸಿದ್ದಾರೆ. ಆಶಿಕ್ ಅರುಣ್ ಸಂಗೀತ ಸಂಯೋಜನೆಯೊಂದಿಗೆ ಈ ಟ್ರಾನ್ಸ್ ವೀಡಿಯೋ ಸಾಂಗ್ ಮೂಡಿ ಬಂದಿದೆ. ಇದರ ಮೂಲಕವೇ ನಾಯಕ ರವಿಯ ಪಾತ್ರ ಕೂಡಾ ಪ್ರೇಕ್ಷಕರ ಮುಂದೆ ಸುಳಿದಂತಾಗಿದೆ. ಇದುವರೆಗೂ ಕನ್ನಡ ಸಿನಿಮಾಗಳಲ್ಲಿ ಇಂಥಾ ಟ್ರಾನ್ಸ್ ವೀಡಿಯೋ ಸಾಂಗ್ ಅಲ್ಲಲ್ಲಿ ಕಾಣಿಸಿಕೊಂಡಿವೆ. ಆದರೆ ಈ ಚಿತ್ರದಲ್ಲಿ ಅದನ್ನು ಪೂರ್ಣಪ್ರಮಾಣದಲ್ಲಿ ಪ್ರಯೋಗ ಮಾಡಲಾಗಿದೆಯಂತೆ.
ಇದು ಕ್ರೈಂ ಕಂ ಕಾಮಿಡಿ ಜಾನರಿಗೊಳಪಡುವ ಚಿತ್ರ. ಪಕ್ಕಾ ಕಮರ್ಶಿಯಲ್ ಬಗೆಯಲ್ಲಿ ತಯಾರುಗೊಂಡಿರುವ ಇದು ನಾಗ್ ವೆಂಕಟ್ ನಿರ್ದೇಶನದ ಮೊದಲ ಸಿನಿಮಾ.

 

ಈ ಸಿನಿಮಾವನ್ನು ತೆರೆಗಾಣಿಸಲು ತಯಾರಿ ನಡೆಯುತ್ತಿದೆ. ಇದೇ ತಿಂಗಳ 24ರಂದು ಟ್ರೈಲರ್ ಬಿಡುಗಡೆಗೊಳ್ಳಲಿದೆ. ತಾರಕಾಸುರ ನಂತರ ರವಿ ಮತ್ತೊಂದು ವಿಶೇಷವಾದ ಪಾತ್ರದ ಮೂಲಕ ಪ್ರೇಕ್ಷಕರನ್ನು ಅಚ್ಚರಿಗೀಡು ಮಾಡಲಿದ್ದಾರಂತೆ. ಈಗ ಬಿಡುಗಡೆಯಾಗಿರೋ ನಶೆ ಹಾಡಿನ ಪ್ರಭೆಯಲ್ಲಿಯೇ, ಪ್ರೇಮಿಗಳ ದಿನದಂದು ಚೆಂದದ್ದೊಂದು ಹಾಡು ಬಿಡುಗಡೆಗೊಳಿಸಲು ಚಿತ್ರತಂಡ ತೀರ್ಮಾನಿಸಿದೆ. ವಿಶೇಷವೆಂದರೆ, ಈ ಚಿತ್ರದಲ್ಲಿ ಕ್ರೈಂ ಹಾಗೂ ಕಾಮಿಡಿ ಮಿಳಿತವಾಗಿರೋದರಿಂದಾಗಿ ಕಾಮಿಡಿ ಕಿಲಾಡಿಗಳು ಖ್ಯಾತಿಯ ಸೂರಜ್ ಕೂಡಾ ಪ್ರಧಾನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

 

ರವಿಗೆ ಜೋಡಿಯಾಗಿ ಸುಕನ್ಯಾ ನಟಿಸಿದ್ದಾರೆ. ಶಿವಾಜಿ ಸುರತ್ಕಲ್ ಚಿತ್ರದ ಸಣ್ಣ ಪಾತ್ರದಲ್ಲಿ ನಟಿಸಿದ್ದ ಸುಕನ್ಯಾ ಈ ಮೂಲಕ ನಾಯಕಿಯಾಗಿದ್ದಾರೆ. ವಾಸಿಕ್ ಅಲ್ಸಾದ್ ನಿರ್ಮಾಣ ಮಾಡಿರುವ ಕೈಲಾಸ ಚಿತ್ರಕ್ಕೆ ಆಶಿಕ್ ಅರುಣ್ ಸಂಗೀತ, ತ್ಯಾಗರಾಜನ್ ಸಂಕಲನ, ಲೇಖಕ್ ಎಂ ಸಾಹಿತ್ಯ, ವಿನೋದ್ ರಾಜೇಂದ್ರನ್ ಛಾಯಾಗ್ರಹಣ, ಧನಂಜಯ ಬಿ ನೃತ್ಯ ನಿರ್ದೇಶನವಿದೆ.

Share This Article
Leave a Comment

Leave a Reply

Your email address will not be published. Required fields are marked *