ಶಿವಮೊಗ್ಗ: ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ಅವರ ಆಪ್ತ ಸಹಾಯಕನನ್ನು ಪೊಲೀಸರು ಬಂಧಿಸಿದ್ದಾರೆ. ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ರಾಜೇಶ್ ಹಿರಿಮನೆ, ಅವಹೇಳನಕಾರಿಯಾಗಿ ಪೋಸ್ಟ್ ಹಾಕಿದ್ದರು. ರಾಹುಲ್ ಗಾಂಧಿ ಅವರ ಮುಖ್ ಅರ್ಧ ಭಾಗ ಹಾಗೂ ಪಾಕಿಸ್ತಾನ ಸೇನೆಯ ಸಮವಸ್ತ್ರ ಧರಿಸಿದ ಅಧಿಕಾರಿ ಅಸಿಮ್ ಫೋಟೋವನ್ನು ಎಡಿ್ ಮಾಡಿ, ಒಂದಕ್ಕೊಂದು ಸೇರಿಸಿದ್ದರು.
ಈ ವಿವಾದಾತ್ಮಕ ಚಿತ್ರಕ್ಕೆ ಒನ್ ಅಜೆಂಡಾ ಎಂಬ ಟ್ಯಾಗ್ ಲೈನ್ ನೀಡಿ ಫೇಸ್ ಬುಕ್ ನಲ್ಲಿ ಹರಿಬಿಡಲಾಗಿತ್ತು. ಇದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ಕಾರಣವಾಗಿತ್ತು. ಈ ಆಕ್ಷೇಪಾರ್ಹ ಪೋಸ್ಟ್ ಗಮನಿಸಿದ ಹೊಸನಗರ – ನಗರ ಪೊಲೀಸರು ಮೇ 20, 2025 ರಂದೇ ಬಿಎನ್ಎಸ್ ಕಾಯ್ದೆಯ ಸೆಕ್ಷನ್ 353(2)ರ ಅಡಿಯಲ್ಲಿ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡೊದ್ದರು. ಪ್ರಕರಣದ ತನಿಖೆ ಮುಂದುವರೆಸಿದ್ದು, ಪೊಲೀಸರು ಇದೀಗ ಆರೋಪಿಯನ್ನು ಬಂಧಿಸಿ ಹಾಜರುಪಡಿಸಿದ್ದರು.
ಹೊಸನಗರ ತಾಲೂಕಿನ ಮಳಲಿ ಗ್ರಾಮದ ನಿವಾಸಿ ಹಾಗೂ ಶಾಸಕರ ಆಪ್ತ ಸಹಾಯಕ ರಾಜೇಶ್ ಹಿರಿಮನೆ ಬಂಧಿತ ಆರೋಪಿ. ಇಲ್ಲಿನ ಜೆ.ಎಂ.ಎಫ್.ಸಿ ನ್ಯಾಯಾಲಯವು ಆರೋಪಿಗೆ ಫೆಬ್ರವರಿ 24, 2026 ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ. ರಾಜೇಶ್ ಹಿರಿಮನೆಯನ್ನ ಅರೆಸ್ಟ್ ಮಾಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.


