Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬೆಂಗಳೂರಿನಲ್ಲಿ ಜಲಕ್ಷಾಮ ಉಂಟಾಗುವುದಕ್ಕೆ ಕಾರಣವೇನು ಗೊತ್ತಾ..?

---Advertisement---

ಬೆಂಗಳೂರು: ನಗರಾದ್ಯಂತ ಬೇಸಿಗೆಯ ಆರಂಭದಲ್ಲಿಯೇ ನೀರಿಗೆ ಹಾಹಾಕಾರ ಶುರುವಾಗಿದೆ. ಎಷ್ಟೋ ಏರಿಯಾಗಳಿಗೆ ಈಗಾಗಲೇ ಟ್ಯಾಂಕರ್ ನೀರನ್ನು ಸರಬರಾಜು ಮಾಡಲಾಗುತ್ತಿದೆ. ಅಪಾರ್ಟ್ಮೆಂಟ್ ಗಳಿಗಂತು ನೀರಿನ ಸಮಸ್ಯೆ ಜೋರು ತಲೆದೂರಿದೆ. ಬೆಂಗಳೂರು ಕೆರೆಗಳ ಊರಾಗಿತ್ತು. ಆದರೆ ಸಿಲಿಕಾನ್ ಸಿಟಿಯಲ್ಲಿ ನೀರಿನ ಕ್ಷಾಮ ಎದುರಾಗಿದ್ದೇಕೆ ಎಂಬುದೇ ಎಲ್ಲರ ಪ್ರಶ್ನೆ. ಅದಕ್ಕೆ ಉತ್ತರ ಇಲ್ಲಿದೆ.

 

ನಗರದಲ್ಲಿ ಒಟ್ಟು 4 ಲಕ್ಷ ಕೊಳವೆ ಬಾವಿಗಳಿದೆ. ವಾಡಿಕೆಯಷ್ಟು ಮಳೆಯಾಗದ ಕಾರಣ ಅಂತರ್ಜಲ ಪಾತಾಳ ಸೇರಿದ್ದು, ಶೇ.30ರಿಂದ ಶೇ.40ರಷ್ಟು ಬೋರ್ ವೆಲ್ ಗಳು ಬತ್ತಿ ಹೋಗಿವೆ. 16,781 ಕೊಳವೆ ಬಾವಿಗಳ ಪೈಕಿ 6997 ಬೋರ್ ವೆಲ್ ಗಳು ಬತ್ತಿ ಹೋಗಿವೆ. 7,784 ಕೊಳವೆ ಬಾವಿಗಳಷ್ಟೇ ಚಾಲ್ತಿಯಲ್ಲಿವೆ. ಅದಷ್ಟೇ ಅಲ್ಲ ಸಾರ್ವಜನಿಕರೂ ಸ್ವಂತ ಬಳಕೆಗೆ ಕೊರೆಸಿದ್ದ ಕೊಳವೆ ಬಾವಿಗಳಲ್ಲೂ ಅಂತರ್ಜಲದ ಮಟ್ಟ ಕುಸಿತ ಕಂಡಿದೆ.

ಅಂದು ಬೆಂಗಳೂರು ಸುತ್ತಮುತ್ತಲಿನ ವಿಸ್ತಿರ್ಣ ಕಡಿಮೆ ಇತ್ತು. ಆದರೆ ಇಂದು ಆ ವಿಸ್ತೀರ್ಣ 800ರಷ್ಟು ಜಾಸ್ತಿ ಆಗಿದೆ. ಜನಸಂಖ್ಯೆ ಕೂಡ 1.30 ಕೋಟಿಗೆ ಮುಟ್ಟಿದೆ. 2007 ರಲ್ಲಿ ಬಿಬಿಎಂಪಿ ತೆಕ್ಕೆಗೆ 110 ಹಳ್ಳಿ, 7 ನಗರಸಭೆ ಹಾಗೂ ಪುರಸಭೆಗೆ ನೀರು ಕಲ್ಪಿಸಲಾಗಿತ್ತು. ಹೀಗಾಗಿ ಎಲ್ಲಾ ಸಾಕಷ್ಟು ನೀರಿನ ಸಮಸ್ಯೆ ಉಂಟಾಗಿದೆ. ಮಳೆ ಇಲ್ಲದೆ ಕಾವೇರಿ ಕೊಳ್ಳದಲ್ಲೂ ಮಳೆಯಿಲ್ಲದೆ ನೀರಿಗೆ ಅಭಾವ ಬಂದಿದೆ. ಕೆರೆ ಕಟ್ಟೆಗಳು, ಕೊಳವೆ ಬಾವಿಗಳು ಬತ್ತಿ ಹೋಗಿದೆ. ಈ ಎಲ್ಲದರಿಂದಾಗಿ ನೀರಿಗೆ ಸಮಸ್ಯೆಯಾಗಿದೆ‌. ಹೀಗಾಗಿ ಬೆಂಗಳೂರಿನಾದ್ಯಂತ ನೀರಿಗೆ ಹಾಹಾಕಾರ ಶುರುವಾಗಿದೆ. ಅದಕ್ಕೆ ಜನ ಟ್ಯಾಂಕರ್ ಮೂಲಕ, ಕ್ಯಾನ್ ಮೂಲಕ ನೀರನ್ನು ಒದಗಿಸಲಾಗುತ್ತಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment