ಸದ್ಯ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದೆ. ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಹಗರಣಗಳ ತನಿಖೆಗೆ ಈಗ ರಾಜ್ಯ ಕಾಂಗ್ರೆಸ್ ಸರ್ಕಾರ ಅಗ್ರಹಿಸಿದೆ. ಹಗರಣಗಳ ತನಿಖೆ ಮಾಡಿ ತಪ್ಪಿತಸ್ಥರಿಗೆ ಶಿಕ್ಷೆ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಅದರಲ್ಲಿ ಮುಖ್ಯವಾಗಿ ನಾಲ್ಕು ಕಾಲೇಜುಗಳ ಹಗರಣ, 40% ಕಮಿಷನ್, ಕೊರೋನಾ ಸಮಯದಲ್ಲಿ ವೈದ್ಯಕೀಯ ಸಾಮಗ್ರಿಗಳ ಖರೀದಿಯಲ್ಲಿ ಹಗರಣ, ನೀರಾವರಿ ಹಗರಣ, ಪಿಎಸ್ಐ ಹಗರಣ ,ಬಿಟ್ ಕಾಯಿನ್ ಹಗರಣ ಹೀಗೆ ಹಲವು ಹಲವು ಪ್ರಕರಣಗಳ ತನಿಖೆಯನ್ನು ನಡೆಸಲು ಸಿಎಂ ಸಿದ್ದರಾಮಯ್ಯ ಸರ್ಕಾರ ಮುಂದಾಗಿದೆ.
ಈ ಬಗ್ಗೆ ಮಾತನಾಡಿದ ಗೃಹ ಸಚಿವ ಡಾ ಜಿ ಪರಮೇಶ್ವರ್, ಹಿಂದಿನ ಸರ್ಕಾರದ ಅವಧಿಯಲ್ಲಿ ನಡೆದಿರುವ ಹಗರಣಗಳನ್ನು ತನಿಖೆ ನಡೆಸುತ್ತೇವೆ. ಅದಕ್ಕಾಗಿ ವಿಶೇಷ ಪೊಲೀಸ್ ತಂಡಗಳನ್ನು ರಚಿಸಲಾಗುವುದು. ಈ ತನಿಖೆಯನ್ನು ಸಮರ್ಥ ಹಾಗೂ ಹಿರಿಯ ತನಿಖಾಧಿಕಾರಿಗಳು ನಡೆಸಲಿದ್ದಾರೆ ಎಂದು ತಿಳಿಸಿದ್ದಾರೆ.