ಚಿಕ್ಕೋಡಿ: ಚುನಾವಣೆ ಹತ್ತಿರವಾಗುತ್ತಿದ್ದಂತೆ ಪಕ್ಷಗಳು ಜನರನ್ನು ಸೆಳೆಯಲು ಪ್ರಣಾಳಿಕೆಯನ್ನು ರಿಲೀಸ್ ಮಾಡುತ್ತೆ. ಆ ಪ್ರಣಾಳಿಕೆಯಲ್ಲಿ ಜನರಿಗೆ ಹಲವು ಆಶ್ವಾಸನೆಗಳನ್ನು ನೀಡುತ್ತಾರೆ. ಇದೀಗ ಕಾಂಗ್ರೆಸ್ ಒಂದಷ್ಟು ಭರವಸೆಗಳನ್ನು ನೀಡಿದ್ದಾರೆ. ಈ ಬಾರಿ ಅಧಿಕಾರಕ್ಕೆ ಬಂದರೆ ವಿದ್ಯುತ್ ಉಚಿತವಾಗಿ ನೀಡುವ ಬಗ್ಗೆ ಭರವಸೆ ನೀಡಿದ್ದಾರೆ.
ಅಧಿಕಾರಕ್ಕೆ ಬಂದರೆ 200 ಯೂನಿಟ್ ವಿದ್ಯುತ್ ಉಚಿತವಾಗಿ ನೀಡುವುದಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ಈ ಸಂಬಂಧ ಮುಖಂಡರಿಂದ ಭಿತ್ತಿ ಫಲಕ ಬಿಡುಗಡೆ ಮಾಡಿದ್ದಾರೆ. ಇನ್ಮೇಲೆ ನೀವ್ಯಾರು ದುಡ್ಡು ಕಟ್ಟುವಂತಿಲ್ಲ. 200 ಯೂನಿಟ್ ವಿದ್ಯುತ್ ಗೆ ಬಿಲ್ ಕಟ್ಟುವಂತಿಲ್ಲ. ರೈತರ ಆದಾಯ ಡಬಲ್ ಮಾಡುತ್ತೇವೆ ಎಂದು ವಚನ ಕೊಟ್ರು, ಯಾರಿಗಾದರೂ ಆಯ್ತಾ..? ನಿಮ್ಮ ಎಲ್ಲಾ ಸಾಲಗಳನ್ನು ಮನ್ನಾ ಮಾಡುತ್ತೇನೆ ಅಂತ ಹೇಳಿದ್ರು. ಯಾರದ್ದಾದರೂ ಸಾಲ ಮನ್ನಾ ಆಯ್ತಾ..? ಎಂದು ಪ್ರಶ್ನೆ ಮಾಡಿದ್ದಾರೆ.
ಆಪರೇಷನ್ ಕಮಲ ಮಾಡಿ ನಿಮ್ಮ ಜಿಲ್ಲೆಯ ಮೂವರನ್ನು ಕರೆದುಕೊಂಡು ಸರ್ಕಾರ ಮಾಡಿದರು. ಇವರು ನಿಗೇನಾದರೂ ಹೇಳಿದ್ರಾ..? ಬಿಜೆಪಿಯ ಪಾಪದ ಪುರಾಣ ನಾವೂ ಬಿಡುಗಡೆ ಮಾಡಿದ್ದೇವೆ. ಇದು ಬಿ ರಿಪೋರ್ಟ್ ಬರೆಯುವ ಸರ್ಕಾರ. ಮಂಚ, ಲಂಚದ ಸರ್ಕಾರ. 40 ಪರ್ಸೆಂಟ್ ಕಮಿಷನ್ ಸರ್ಕಾರ. ಈ ದೇಶದಲ್ಲಿ ಬರೀ ಕೋಮು ವಿಷ ಬೀಜ ಬಿತ್ತುವ ಕೆಲಸ ಮಾಡಲಾಗುತ್ತಿದೆ ಎಂದು ಕಿಡಿಕಾರಿದ್ದಾರೆ.