ಬೆಂಗಳೂರು: 2023ರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ಆಕಾಂಕ್ಷಿಗಳ ಸಂಖ್ಯೆ ಬೆಳೆಯುತ್ತಲೆ ಇದೆ. ಈ ಬಾರಿ ಬಿಜೆಪಿ ಸೋಲಿಸಿ, ಅಧಿಕಾರಕ್ಕೆ ಬರಕೇಬೇಕೆಂಬ ಹಠ ತೊಟ್ಟಿದ್ದಾರೆ. ಅದಕ್ಕೆಂದೆ ಪಕ್ಷ ಸಂಘಟನೆಯಲ್ಲೂ ತೊಡಗಿದ್ದಾರೆ. ಈ ಮಧ್ಯೆ ಸಿದ್ದರಾಮಯ್ಯ ಅವರು ತಮ್ಮ ಕ್ಷೇತ್ರವನ್ನು ಆಯ್ಕೆ ಮಾಡಿಕೊಂಡಿದ್ದಾಗಿದೆ. ಆದರೆ ಈ ಬಗ್ಗೆ ಕೆಪಿಸಿಸಿ ಅಧ್ಯಕ್ಷರಿಗೇನೆ ಮಾಹಿತಿ ಇಲ್ಲವಂತೆ.
ಸಿದ್ದರಾಮಯ್ಯ ಅವರ ಕ್ಷೇತ್ರ ಆಯ್ಕೆಯ ಬಗ್ಗೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಅವರು ಕೋಲಾರದಲ್ಲಿ ಕಾರ್ಯಕರ್ತರ ಸಭೆಗೆ ಹೋಗುವುದಾಗಿ ಹೇಳಿದ್ದರು. ಅವರು ಅಲ್ಲಿಂದಲೇ ಸ್ಪರ್ಧಿಸುತ್ತೇನೆ ಅಂತ ಹೇಳಿರುವುದು ನನ್ನ ಗಮನಕ್ಕೆ ಬಂದಿಲ್ಲ. ಈ ವಿಚಾರದ ಬಗ್ಗೆ ತಿಳಿದುಕೊಂಡು ಮಾತನಾಡುತ್ತೇನೆ ಎಂದಿದ್ದಾರೆ.
ಸಿದ್ದರಾಮಯ್ಯ ಅವರು ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎಂಬ ಕುತೂಹಲ ಎಲ್ಲರಲ್ಲೂ ಇತ್ತು. ಜೊತೆಗೆ ಇಲ್ಲೇ ಬಂದು ನಿಲ್ಲಿ ಗೆಲ್ಲಿಸುತ್ತೇವೆ ಎಂದು ಅಭಿಮಾನಿಗಳು, ಬೆಂಬಲಿಗರು ಕರೆಯುತ್ತಲೇ ಇದ್ದರು. ಇದೀಗ ಕೋಲಾರದಲ್ಲಿ ನಿಲ್ಲುವುದಾಗಿ ಹೇಳಿ ಆ ಎಲ್ಲಾ ಕುತೂಹಲಕ್ಕೆ ತೆರೆ ಎಳೆದಿದ್ದಾರೆ. ಅದರ ಜೊತೆಗೆ ಡಿಕೆ ಶಿವಕುಮಾರ್ ವಿಚಾರವೇ ಗೊತ್ತಿಲ್ಲ ಅಂತ ಹೇಳುತ್ತಿರುವುದು ಶಾಕ್ ಆಗಿದೆ.
ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…
ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…
ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…
ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…
144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…