Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಪ್ರಧಾನಿ ಮೋದಿ ಜೊತೆಗೆ ಅಂದು ಗುಸುಪಿಸು ಮಾತಾಡಿದ್ದೇನು ಗೊತ್ತಾ : ಸಿದ್ದರಾಮಯ್ಯ ಹೇಳಿದ್ದು ಹೀಗೆ..?

---Advertisement---

ಆದಿಚುಂಚನಗಿರಿ ಭೈರವೈಕ್ಯ ಮಂದಿರ ಉದ್ಘಾಟನೆ ಮಾಡುವುದಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಬಂದಿದ್ದರು. ಈ ವೇಳೆ ಏರ್ಪೋರ್ಟ್ ನಲ್ಲಿ ಸಿಎಂ ಸಿದ್ದರಾಮಯ್ಯ ಅವರು ಭೇಟಿಯಾಗಿ, ಸ್ವಾಗತಕೋರಿದ್ದರು. ಆ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರು ಸಿದ್ದರಾಮಯ್ಯ ಅವರ ಕಿವಿಯಲ್ಲಿ ಏನೋ ಪಿಸುಗುಟ್ಟಿದ್ದರು. ಆ ಫೋಟೋ ಅಂತು ಬಹಳ ಚಂದವಾಗಿ ವೈರಲ್ ಆಗಿತ್ತು. ಆ ಫೋಟೋಗೆ ನಾನಾ ಹೋಲಿಕೆಯ ಸಾಲುಗಳು ಬಂದಿದ್ದವು. ಆದರೆ ಸತ್ಯ ಏನು ಎಂಬುದನ್ನ ಸಿದ್ದರಾಮಯ್ಯ ಅವರೇ ತಿಳಿಸಿದ್ದಾರೆ.

 

ಅಂದು ನಮ್ಮ ನಡುವೆ ಅಂತ ಯಾವುದೇ ಗುಪ್ತ ಆಲೋಚನೆಗಳು ನಡೆದಿಲ್ಲ. ಮಹಿಳಾ ಮೀಸಲಾತಿ ಕುರಿತ ನನ್ನ ಅಭಿಪ್ರಾಯವನ್ನು ಪ್ರಧಾನಿ ಕೇಳಿದರು ಅಷ್ಟೇ. ಮಹಿಳಾ ಮೀಸಲಾತಿಯ ಪರವಾಗಿದ್ದೇನೆ ಎಂಬ ಸಕಾರಾತ್ಮಕ ಉತ್ತರವನ್ನೇ ನೀಡಿದ್ದೇನೆ. ಮಹಿಳಾ ಮೀಸಲಾತಿ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ರಾಜಕೀಯ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ಪ್ರಧಾನಿಯವರಿಗೆ ಸಾಮಾಜಿಕ ನ್ಯಾಯದ ಮೇಲೆ ನಂಬಿಕೆಯಿದ್ದರೆ 2023ರಲ್ಲಿಯೇ ಮೀಸಲಾತಿಯನ್ನು ಜಾರಿಗೆ ತರಬೇಕಿತ್ತು. ಮೀಸಲಾತಿ ಜಾರಿಗೆ ನಮ್ಮ ಅಭ್ಯಂತರವಿಲ್ಲ. ಆದರೆ ಕ್ಷೇತ್ರ ಮರುವಿಂಗಡಣೆ ಪ್ರಕ್ರಿಯೆಯಲ್ಲಿ ದಕ್ಷುಣ ಭಾರತದ ರಾಜ್ಯಗಳಿಗರ ಅನ್ಯಾಯವಾಗಬಾರದು.

ಜನಸಂಖ್ಯಾ ನಿಯಂತ್ರಣ ಮಾಡಿರುವ ದಕ್ಷಿಣದ ರಾಜ್ಯಗಳ ಹಿತರಕ್ಷಣೆಗೆ ಹೊಸ ಜನಗಣತಿಯ ಆಧಾರದ ಮೇಲೆ ಸಮಾನ ಹಂಚಿಕೆಯಾಗಬೇಕು ಎಂಬುದು ನಮ್ಮ ಒತ್ತಾಯವಾಗಿದೆ ಎಂದರು. ​ತಮಿಳುನಾಡು ಮತ್ತು ಕೇರಳ ರಾಜ್ಯಗಳ ಚುನಾವಣಾ ಫಲಿತಾಂಶದ ಕುರಿತು ವಿಶ್ವಾಸ ವ್ಯಕ್ತಪಡಿಸಿದ ಮುಖ್ಯಮಂತ್ರಿಗಳು, ತಮಿಳುನಾಡಿನಲ್ಲಿ ಡಿಎಂಕೆ ಮತ್ತು ಕೇರಳದಲ್ಲಿ ಕಾಂಗ್ರೆಸ್ ಮೈತ್ರಿಕೂಟ ಜಯಗಳಿಸಲಿದೆ ಎಂದು ಆತ್ಮ ವಿಶ್ವಾಸದ ಮಾತುಗಳನ್ನ ಆಡಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...