Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಧನಿಯಾ ಬೀಜವನ್ನ ಬಳಸುವುದರಿಂದ ಏನೆಲ್ಲಾ ಆರೋಗ್ಯ ಲಾಭಗಳಿದಾವೆ ಗೊತ್ತಾ..?

---Advertisement---

 

ನಮ್ಮ ಅಡುಗೆ ಮನೆಯಲ್ಲಿರುವ ಪದಾರ್ಥಗಳೇ ನಮ್ಮ ಆರೋಗ್ಯವನ್ನ ಕಾಪಾಡುತ್ತವೆ. ಆ ಬಗ್ಗೆ ನಮ್ಮ ಹಿರಿಯರು ಈಗಾಗಲೇ ಸಾಕಷ್ಟು ಸಲ ಹೇಳಿದ್ದಾರೆ. ಅದರಲ್ಲೂ ಈ ಗ್ಯಾಸ್ಟ್ರಿಕ್‌ ಸಮಸ್ಯೆ ಇರುವವರು, ಜೀರ್ಣಕ್ರಿಯೆ ಸರಿಯಾಗಿ ಆಗುತ್ತಿಲ್ಲ ಎನ್ನುವವರು ಅಡುಗೆ ಮನೆಯಲ್ಲಿರುವ ಅಡುಗೆಗೆ ಪ್ರತಿನಿತ್ಯ ಬಳಸುವ ಪದಾರ್ಥಗಳಿಂದಾನೇ ಆರೋಗ್ಯ ಸಮಸ್ಯೆಯನ್ನ ಬಗೆಹರಿಸಿಕೊಳ್ಳಬಹುದು. ಅದರಲ್ಲೂ ಧನ್ಯ ಎಲ್ಲರ ಮನೆಯಲ್ಲೂ ಇದ್ದೇ ಇರುತ್ತದೆ. ಆ ಧನ್ಯದಿಂದ ಏನೆಲ್ಲಾ ಆರೋಗ್ಯಕರ ಲಾಭಗಳು ಇದಾವೆ ಎಂಬುದರ ಮಾಹಿತಿ ಇಲ್ಲಿದೆ‌ ನೋಡಿ.

 

1. ಜೀರ್ಣಕ್ರಿಯೆ ಸುಧಾರಿಸಲು ಈ ಧನ್ಯವನ್ನು ಮದ್ದಾಗಿ ಬಳಸಬಹುದಾಗಿದೆ. ಇದನ್ನ ಬಳಕೆ ಮಾಡುವುದು ಹೇಗೆ ಗೊತ್ತಾ..? 1 ಚಮಚ ಕೊತ್ತಂಬರಿ ಬೀಜವನ್ನು ನೀರಿನಲ್ಲಿ ಕುದಿಸಿ. ನಂತರ ತಣ್ಣಗಾಗಲು ಬಿಡಿ. ಆ ನೀರನ್ನ ಕುಡಿಯುತ್ತಾ ಬಂದರೆ ನಿಮಗೆ ಜೀರ್ಣಕ್ರಿಯೆ ಸುಲಲಿತವಾಗುತ್ತದೆ. ಇದರಿಂದ ಹೊಟ್ಟೆ ಉರಿಯೂತ, ಆಮ್ಲತೆ (ಅಸಿಡಿಟಿ), ಗ್ಯಾಸ್ಟ್ರಿಕ್ ಸಮಸ್ಯೆ ನಿವಾರಣೆಯಾಗುತ್ತದೆ.

ಅಷ್ಟೇ ಅಲ್ಲ ರಕ್ತದೊತ್ತಡ ಬಿ.ಪಿ.ನಿಯಂತ್ರಣಕ್ಕೆ ಬರುತ್ತದೆ. 1 ಚಮಚ ಕೊತ್ತಂಬರಿ ಬೀಜವನ್ನು ರಾತ್ರಿ ನೀರಿನಲ್ಲಿ ನೆನೆಸಿ, ಬೆಳಗ್ಗೆ ಖಾಲಿ ಹೊಟ್ಟೆಗೆ ಆ ತಂಪಾಗಿರುವ ನೀರನ್ನು ಸೋಸಿ ಕುಡಿಯಿರಿ. ಇದರಿಂದ ರಕ್ತ ಒತ್ತಡ ನಿಯಂತ್ರಣಕ್ಕೆ ಬರಲಿದೆ. ರಕ್ತದೊತ್ತಡ ತಗ್ಗಿಸಲು, ದೇಹದ ತಾಪಮಾನವನ್ನು ಸಮತೋಲನದಲ್ಲಿರಿಸಲು ಸಹಾಯ ಮಾಡುತ್ತದೆ. ಹೀಗಾಗಿ ಪ್ರತಿದಿನ ಈ ನೀರನ್ನ ಸೇವಿಸಿ.

ಇನ್ನು ಥೈರಾಯ್ಡ್ ಸಮಸ್ಯೆ ಇರುವವರು ಹೆಚ್ಚಾಗಿದ್ದಾರೆ. ಅಂಥವರು ರಾತ್ರಿ ನೀರಿನಲ್ಲಿ ಮೇಲಿನ ಪ್ರಮಾಣದಲ್ಲಿ ನೆನೆಸಿಟ್ಟು ಬೆಳಿಗ್ಗೆ ಖಾಲಿ ಹೊಟ್ಟೆಗೆ ತಂಪಾದ ಕೊತ್ತಂಬರಿ ನೀರನ್ನು ಸೋಸಿ ಕುಡಿಯಿರಿ ದೇಹಕ್ಕೆ ತಂಪು, ಥೈರಾಯ್ಡ್ ನಿಂದ ಮುಕ್ತಿಯನ್ನು ಪಡೆಯಬಹುದಾಗಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment