2019ರಲ್ಲಿ ಇದು 15.88 ಕೋಟಿ ರೂಪಾಯಿ ಇದ್ದು,2024ರ ಲೋಕಸಭಾ ಚುನಾವಣೆಯ ವೇಳೆ ಸಲ್ಲಿಸಿದ ಅಫಿಡವಿಟ್‌ನಲ್ಲಿ ಬಹಿರಂಗವಾಗಿತ್ತು. ಅದರ ಪ್ರಕಾರ, ಅವರು ತಮ್ಮ ಒಟ್ಟು ಆಸ್ತಿಯನ್ನು ಸುಮಾರು 20.39 ಕೋಟಿ ರೂಪಾಯಿ ಎಂದು ಘೋಷಿಸಿದ್ದರು.
ತಮ್ಮ ಬಳಿ ಕೇವಲ 55,000 ರೂಪಾಯಿ ನಗದು ಇದ್ದು, ಎರಡು ಬ್ಯಾಂಕ್ ಖಾತೆಗಳಲ್ಲಿ 26.25 ಲಕ್ಷ ರೂಪಾಯಿ ಠೇವಣಿ ಇಟ್ಟಿದ್ದಾರೆ ಎಂದು ಅವರು ತಿಳಿಸಿದ್ದಾರೆ.25 ಕಂಪನಿಗಳಲ್ಲಿ ಒಟ್ಟು 4.33 ಕೋಟಿ ರೂಪಾಯಿ ಮೌಲ್ಯದ ಷೇರುಗಳನ್ನು ಹೊಂದಿದ್ದಾರೆ. ಜೊತೆಗೆ ಏಳು ಮ್ಯೂಚುವಲ್ ಫಂಡ್‌ಗಳಲ್ಲಿ 3.81 ಕೋಟಿ ರೂಪಾಯಿ ಹೂಡಿಕೆ ಮಾಡಿದ್ದಾರೆ ಎಂದು ಅಫಿಡವಿಟ್‌ನಲ್ಲಿ ಇದೆ.
ಸುಮಾರು 15 ಲಕ್ಷ ರೂಪಾಯಿ ಮೌಲ್ಯದ ಚಿನ್ನದ ಬಾಂಡ್‌ಗಳು, 61.52 ಲಕ್ಷ ರೂಪಾಯಿ ಮೌಲ್ಯದ ವಿಮಾ ಪಾಲಿಸಿಗಳು ಮತ್ತು 4.20 ಲಕ್ಷ ರೂಪಾಯಿ ಮೌಲ್ಯದ ಚಿನ್ನ ಹಾಗೂ ಆಭರಣಗಳನ್ನು ಹೊಂದಿದ್ದಾರೆ. ಒಟ್ಟಾರೆ ಅವರ ಚರ ಆಸ್ತಿ ಸುಮಾರು 9.24 ಕೋಟಿ ರೂಪಾಯಿಗಳಷ್ಟಿದೆ. ಸ್ಥಿರ ಆಸ್ತಿಯಾಗಿ ಸುಮಾರು 11.15 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಹೊಂದಿದ್ದಾರೆ. ಹೆಸರಿನಲ್ಲಿ ಯಾವುದೇ ವಾಹನ ನೋಂದಣಿ ಇಲ್ಲ ಎಂದು ಅವರು ಅಫಿಡವಿಟ್‌ನಲ್ಲಿ ಸ್ಪಷ್ಟಪಡಿಸಿದ್ದಾರೆ. ವಾರ್ಷಿಕ ಆದಾಯ ಕೋಟಿ ದಾಟಿದರೂ ಸ್ವಂತ ಕಾರು ಇಲ್ಲದಿರುವುದು ಹಲವರ ಗಮನ ಸೆಳೆದಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.









