12-14 ವರ್ಷದ ಮಕ್ಕಳಿಗೆ ಲಸಿಕೆ ಹಾಕುವ ಬಗ್ಗೆ ಕೇಂದ್ರ ಸರ್ಕಾರ ಏನ್ ಹೇಳಿದೆ ಗೊತ್ತಾ..?

suddionenews
1 Min Read

ನವದೆಹಲಿ: ಈಗಾಗಲೇ 15 ಮೇಲ್ಪಟ್ಟ ಎಲ್ಲಾ ವಯೋಮಾನದವರಿಗೂ ಕೊರೊನಾ ಲಸಿಕೆ ಹಾಕಲಾಗುತ್ತಿದೆ. ಇತ್ತೀಚೆಗೆ ಪ್ರಧಾನಿ ಮೋದಿ 15-17 ವರ್ಷದ ಮಕ್ಕಳಿಗೆ ವ್ಯಾಕ್ಸಿನ್ ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದಾರೆ. ಇನ್ನು12-14 ವರ್ಷದ ಮಕ್ಕಳಿಗೆ ವ್ಯಾಕ್ಸಿನ್ ನೀಡ್ತಾರಾ ಎಂಬ ಪ್ರಶ್ನೆಗೆ ಕೇಂದ್ರ ಆರೋಗ್ಯ ಸಚಿವಾಲಯ ಸ್ಪಷ್ಟನೆ ನೀಡಿದೆ.

12-14 ವರ್ಷದ ಮಕ್ಕಳಿಗೆ ಫೆಬ್ರವರಿ ಅಂತ್ಯ ಅಥವಾ ಮಾರ್ಚ್ ಆರಂಭದಿಂದ ಕೋವಿಡ್ ಲಸಿಕೆ ನೀಡಲಾಗುವುದು ಎನ್‌ಟಿಎಜಿಐ ಮುಖ್ಯಸ್ಥರು ತಿಳಿಸಿದ್ದಾರೆ ಎಂದು ವರದಿಯಾಗಿತ್ತು. ಈ ಬಗ್ಗೆ ಕೇಂದ್ರ ಆರೋಗ್ಯ ಸಚಿವಾಲಯ, ವ್ಯಾಕ್ಸಿನ್ ನೀಡುವ ಬಗ್ಗೆ ಇನ್ನು ಯಾವುದೇ ತೀರ್ಮಾನವಾಗಿಲ್ಲ ಎಂದು ತಿಳಿಸಿದ್ದಾರೆ.

ಜನವರಿ 3 ರಿಂದ 15-17 ವರ್ಷದ ಮಕ್ಕಳಿಗೆ ಲಸಿಕೆ ನೀಡುವ ಅಭಿಯಾನ ಆರಂಭವಾಗಿದೆ. ಈಗಾಗಲೇ 3.5 ಕೋಟಿ ಮಕ್ಕಳು ಲಸಿಕೆ ಪಡೆದಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *