ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾದ ಮೇಲೆ ತಾವೂ ಘೋಷಿಸಿದ ಐದು ಗ್ಯಾರಂಟಿಗಳನ್ನು ಜಾರಿಗೆ ತಂದಿದೆ. ಅದರಲ್ಲಿ ಈಗಾಗಲೇ ಶಕ್ತಿ ಯೋಜನೆಯನ್ನು ಮಹಿಳೆಯರೆಲ್ಲಾ ಪಡೆಯುತ್ತಿದ್ದಾರೆ. ಅದರ ಜೊತೆಗೆ ಗೃಹ ಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ. ಈಗಾಗಲೇ ಸಂಕಷ್ಟು ಅರ್ಜಿಗಳು ಸಲ್ಲಿಕೆಯಾಗಿದೆ. ಇನ್ನು ಕೂಡ ಅರ್ಜಿ ಹಾಕುವವರು ಹಾಕುತ್ತಲೇ ಇದ್ದಾರೆ. ಆದರೆ ಅರ್ಜಿ ಸಲ್ಲಿಸಲು ಕಡೆಯ ದಿನಾಂಕ ಯಾವುದು ಎಂಬ ಮಾಹಿತಿ ಇಲ್ಲಿದೆ.
ಗೃಹಜ್ಯೋತಿ ಯೋಜನೆಗೆ ಜೂನ್ 18ರಿಂದ ಅರ್ಜಿಸಲ್ಲಿಕೆಯಾಗುತ್ತಿದೆ. ಮೊದಲ ದಿನವೇ ಸುಮಾರು 55 ಸಾವಿರ ಅರ್ಜಿ ಸಲ್ಲಿಕೆ ಮಾಡಿದ್ದರು. ಈ ಯೋಜನೆ ಮೂಲಕ ಪ್ರತಿ ಮನೆಗೆ ಪ್ರತಿ ತಿಂಗಳು 200 ಯೂನಿಟ್ ಗಳಷ್ಟು ವಿದ್ಯುತ್ ಉಚಿತವಾಗಿ ನೀಡಲಾಗುತ್ತದೆ. ಸುಮಾರು 500ರಿಂದ 1200 ಯುನಿಟ್ ಬರುವವರಿಗೆ ಮಾತ್ರ ಈ ಯೋಜನೆಯ ಲಾಭ ಸಿಗಲಿದೆ.
ಗೃಹಜ್ಯೋತಿ ಯೋಜನೆಗೆ ಕಡೆಯ ದಿನಾಂಕವನ್ನು ಘೋಷಣೆ ಮಾಡಿರಲಿಲ್ಲ. ಆದ್ರೆ ಈಗ ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕವನ್ನು ಘೋಷಣೆ ಮಾಡಿದೆ. ಜುಲೈ 27ರಂದು ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸಲು ಕಡೆಯ ದಿನಾಂಕವಾಗಿದೆ. ಇನ್ನು 10 ದಿನಗಳು ಮಾತ್ರ ಬಾಕಿ ಉಳಿದಿದೆ.