ಬೆಂಗಳೂರು: ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಪ್ರಕಟಣೆಗೆ ಇನ್ನೊಂದು ದಿನವಷ್ಟೇ ಬಾಕಿ ಇದೆ. ನವೆಂಬರ್ 23ರಂದು ಫಲಿತಾಂಶ ಪ್ರಕಟವಾಗಲಿದೆ. ಅದರಲ್ಲೂ ಚನ್ನಪಟ್ಟಣ ಕ್ಷೇತ್ರ ಸಾಕಷ್ಟು ಹೈವೋಲ್ಟೇಜ್ ಕಣವಾಗಿತ್ತು. ಡಿಕೆ ಬ್ರದರ್ಸ್ ಗೆ ಈ ಕ್ಷೇತ್ರ ಪ್ರತಿಷ್ಠೆಯ ಕಣವಾಗಿದ್ರೆ, ಮಾಜಿ ಸಿಎಂ ಹಾಗೂ ಕೇಂದ್ರ ಸಚಿವ ಕುಮಾರಸ್ವಾಮಿ ಅವರಿಗೆ ಇದು ಅಸ್ತಿತ್ವದ ಪ್ರಶ್ನೆಯಾಗಿದೆ.
ಯಾಕಂದ್ರೆ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ ಜೆಡಿಎಸ್ ನ ಭದ್ರಕೋಟೆಯಾಗಿದೆ. ಆ ಭದ್ರಕೋಟೆಯನ್ನ ಕಾಂಗ್ರೆಸ್ ತನ್ನ ವಶ ಮಾಡಿಕೊಳ್ಳಬೇಕೆಂದು ಸಾಕಷ್ಟು ಶ್ರಮ ಹಾಕುತ್ತಿದೆ. ಹೀಗಾಗಿಯೇ ಬಿಜೆಪಿ ಟಿಕೆಟ್ ಕೊಡಲಿಲ್ಲ ಎಂದು ಬೇಸರದಲ್ಲಿ ಸಿಪಿ ಯೋಗೀಶ್ವರ್ ಅವರಿಗೆ ಗಾಳ ಹಾಕಿ, ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯನ್ನಾಗಿ ಮಾಡಿದರು. ಸದ್ಯಕ್ಕೆ ಕಾಂಗ್ರೆಸ್ ನಿಂದ ಸಿಪಿ ಯೋಗೀಶ್ವರ್ ನಿಂತಿದ್ರೆ, ಮೈತ್ರಿ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ನಿಂತಿದ್ದಾರೆ. ಇಬ್ಬರ ಪರವಾಗಿಯೂ 50:50 ಅಂದಾಜು ಲೆಕ್ಕ ಇದೆ. ಬೆಟ್ಟಿಂಗ್ ದಂಧೆಯು ಚನ್ನಪಟ್ಟಣದಲ್ಲಿ ಜೋರಾಗಿ ನಡೆಯುತ್ತಿದೆ.
ಚುನಾವಣೆ ಮುಗಿದ ಬೆನ್ನಲ್ಲೇ ಒಂದಷ್ಟು ಸಂಸ್ಥೆಗಳು ಸಮೀಕ್ಷೆ ನಡೆಸುವುದು ಕಾಮನ್. ಅದರಂತೆ ಇದೊಇಗ ಚನ್ನಪಟ್ಟಣದಲ್ಲಿ P-Marq ಎಂಬ ಸಂಸ್ಥೆ ಮತದಾನೋತ್ತರ ಸಮೀಕ್ಷೆಯನ್ನು ನಡೆಸಿದೆ. ಈ ಸಮೀಕ್ಷೆಯ ವರದಿ ಪ್ರಕಾರ ಕೇಂದ್ರ ಸಚಿವ ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿಗೇನೆ ಜನ ಜೈ ಎಂದಿದ್ದಾರೆ ಎನ್ನಲಾಗಿದೆ. ಎರಡು ಬಾರಿ ಸೋತಿದ್ದ ನಿಖಿಲ್ ಕುಮಾರಸ್ವಾಮಿ ಮೂರನೇ ಬಾರಿಯೂ ಅದೃಷ್ಟ ಪರೀಕ್ಷೆಗೆ ಇಳಿದಿದ್ದರು. ಶನಿವಾರ ಚುನಾವಣೆಯ ಫಲಿತಾಂಶ ಏನಾಗಿದೆ..? ಜನ ಯಾರತ್ತ ಒಲವು ಮೂಡಿಸಿದ್ದಾರೆ ಎಂಬುದರ ಸ್ಪಷ್ಟ ಚಿತ್ರ ಸಿಗಲಿದೆ.