Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ದರ್ಶನ್ ಕಾಂಗ್ರೆಸ್ ಪರವಾಗಿ ಪ್ರಚಾರ ಮಾಡುತ್ತಿರುವುದೇಕೆ ಗೊತ್ತಾ : ನಾಗಮಂಗಲದಲ್ಲಿ ಸತ್ಯ ಹೇಳಿದ ಚಾಲೆಂಜಿಂಗ್ ಸ್ಟಾರ್

---Advertisement---

ಮಂಡ್ಯ: ಲೋಕಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇದೆ. ಮೊದಲ ಹಂತದ ಚುನಾವಣೆಗೆ ಇನ್ನೆರಡು ದಿನ ಬಾಕಿ. ಎರಡನೇ ಹಳತದ ಚುನಾವಣೆಗೆ 13 ದಿನ ಬಾಕಿ ಇದೆ. ಹೀಗಿರುವಾಗ ಪಕ್ಷಗಳೆಲ್ಲಾ ಅಭ್ಯರ್ಥಿಗಳ ರವಾವಿ ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾರೆ. ಮಂಡ್ಯದ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಪರವಾಗಿ ನಟ ದರ್ಶನ್ ಪ್ರಚಾರ ಕಾರ್ಯ ಆರಂಭಿಸಿದ್ದಾರೆ

ಕಳೆದ ಲೋಕಸಭಾ ಚುನಾವಣೆಯಲ್ಲಿ ದರ್ಶನ್ ಹಾಗೂ ಯಶ್ ಸುಮಲತಾ ಪರವಾಗಿ ಪ್ರಚಾರ ಕಾರ್ಯ ಆರಂಭಿಸಿದ್ದರು. ಆದರೆ ಈ ಸಲ ಸುಮಲತಾ ಸ್ಪರ್ಧೆ ಮಾಡುವುದಕ್ಕೆ ಆಗಲಿಲ್ಲ. ಹೀಗಾಗಿ ದರ್ಶನ್ ಕಾಂಗ್ರೆಸ್ ಪರ ಪ್ರಚಾರ ನಡೆಸುತ್ತಿದ್ದಾರೆ. ನೋಡುಗರಿಗೆ ಇದು ಗೊಂದಲಕ್ಕೆ ಕಾರಣವಾಗಿತ್ತು. ಸುಮಲತಾಗೆ ಟಿಕೆಟ್ ಸಿಗಲಿಲ್ಲ ಅಂತ ದರ್ಶನ್ ಅವರು ಕಾಂಗ್ರೆಸ್ ಪರ ಪ್ರಚಾರ ಮಾಡುತ್ತಿದ್ದಾರಾ ಎನಿಸಿತ್ತು. ಇದೀಗ ಕಾಂಗ್ರೆಸ್ ಪರ ಯಾಕೆ ಪ್ರಚಾರ ಮಾಡುತ್ತಿರುವುದು ಎಂಬ ಸತ್ಯವನ್ನು ದರ್ಶನ್ ಹೇಳಿದ್ದಾರೆ.

ಬೆಳ್ಳೂರು ರೋಡ್ ಶೋನಲ್ಲಿ ಮಾತನಾಡಿದ ದರ್ಶನ್, ಸುಮಲತಾ ಚುನಾವಣೆಯಲ್ಲಿ ನಿಂತಾಗ ಕಾಂಗ್ರೆಸ್ ನಾಯಕರು ಸಹಾಯ ಮಾಡಿದರು. ಸಚಿವ ಚೆಲುವರಾಯಸ್ವಾಮಿ ಸುಮಲತಾ ಗೆಲುವಿಗೆ ಪ್ರಮುಖ ಕಾರಣರಾಗಿದ್ದರು. ಆ ಸಹಾಯವನ್ನು ಏಳು ಜನ್ಮವಾದರೂ ಮರೆಯುವುದಕ್ಕೆ ಆಗಲ್ಲ‌. ಕಳೆದ ಲೋಕಸಭಾ ಚುನಾವಣೆಯಲ್ಲಿ ಸುಮಲತಾ ಅವರನ್ನು ಗೆಲ್ಲಿಸಿದ್ದಕ್ಕಾಗಿ ಈ ಬಾರಿ ಕಾಂಗ್ರೆಸ್ ಪರ ಪ್ರಚಾರ ನಡೆಸುತ್ತಿದ್ದೇನೆ. ಆ ಋಣ ತೀರಿಸಲು ಇವತ್ತಿನ ಪ್ರಚಾರ ಕಾರ್ಯದಲ್ಲಿ ತೊಡಗಿದ್ದೇನೆ. ಸ್ಟಾರ್ ಚಂದ್ರುಗೆ ಮತ ನೀಡಿ, ನಿಮ್ಮಗಳ ಸೇವೆ ಮಾಡಲು ಅವಕಾಶ ಮಾಡಿಕೊಡಿ ಎಂದು ದರ್ಶನ್ ಜನರಲ್ಲಿ ಮನವಿ ಮಾಡಕೊಂಡಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment