Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾದ ಡಾಲಿ : ಕಾಳೇನಹಳ್ಳಿಯಲ್ಲಿ ಧನ್ಯತಾ-ಧನಂಜಯ ಎಂಗೇಜ್ಮೆಂಟ್

---Advertisement---

 

ಹಾಸನ: ಸ್ಯಾಂಡಲ್ ವುಡ್ ನಟ ರಾಕ್ಷಸ ಡಾಲಿ ಧನಂಜಯ ಹೊಸ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಈ ಮೊದಲೇ ತಾವೂ ಮದುವೆಯಾಗುತ್ತಿರುವ ಡಾಕ್ಟರ್ ಅನ್ನ ಎಲ್ಲರಿಗೂ ಪರಿಚಯ ಮಾಡಿಕೊಟ್ಟಿದ್ದರು. ಇದೀಗ ಡಾಲಿ ಹಾಗೂ ಧನ್ಯತಾ ಎಂಗೇಜ್ ಆಗಿದ್ದಾರೆ.

ಚಂದನವನದ ಮೋಸ್ಟ್ ಬ್ಯಾಚುಲರ್ ಡಾಲಿ ಧನಂಜಯ್ ಸಂಸಾರಿಕನಾಗುತ್ತಿದ್ದಾರೆ. ಇಂದಿನಿಂದ ನಟ ಡಾಲಿ ಮನೆಯಲ್ಲಿ ಮದುವೆ ಶಾಸ್ತ್ರ ಪ್ರಾರಂಭವಾಗಿದೆ. ಅದರ ಭಾಗವಾಗಿ ನಿಶ್ಚಿತಾರ್ಥ ನಡೆದಿದ್ದು, ಗುರು ಹಿರಿಯರ ಸಮ್ಮುಖದಲ್ಲಿ, ಶಾಸ್ತ್ರಬದ್ಧವಾಗಿ ನಿಶ್ವಿತಾರ್ಥ ಮಾಡಿಕೊಂಡಿದ್ದಾರೆ. ಕುಟುಂಬಸ್ಥರು ಸೇರಿ‌ ನಿಶ್ಚಿತಾರ್ಥ ಮುಗಿಸಿದ್ದಾರೆ.

 

ಅರಸೀಕೆರೆಯ ಕಾಳೇನಹಳ್ಳಿಯಲ್ಲಿರುವ ಡಾಲಿ ಧನಂಜಯ ಅವರ ಮನೆಯಲ್ಲಿ ನಿಶ್ಚಿತಾರ್ಥ ನಡೆದಿದೆ. ಜೊತೆಗೆ ಲಗ್ನ ಪತ್ರಿಕೆ ಶಾಸ್ತ್ರವನ್ನು ಮಾಡಿದ್ದಾರೆ. ಲಗ್ನ ಶಾಸ್ತ್ರದಲ್ಲಿ ಧನಂಜಯ ಹಾಗೂ ಭಾವಿ ಪತ್ನಿ ಧನ್ಯತಾ ಭಾಗಿಯಾಗಿದ್ದರು. ಗುರು ಹಿರಿಯರ ಸಮ್ಮುಖದಲ್ಲಿ ಉಂಗುರ ಬದಲಾಯಿಸಿಕೊಂಡು, ಲಗ್ನ ಪತ್ರಿಕೆಯನ್ನು ಬರೆಸಲಾಗಿದೆ.

ಇನ್ನು ಡಾಲಿ ಹಾಗೂ ಧನ್ಯತಾ 2025ಕ್ಕೆ ಹೊಸ ಜೀವನಕ್ಕೆ ಕಾಲಿಡುತ್ತಿದ್ದಾರೆ. ಫೆಬ್ರವರಿ 16- 2025ಕ್ಕೆ ಡಾಲಿ ಮದುವೆ ನಡೆಯಲಿದೆ. ಮೈಸೂರಿನ ಎಕ್ಸಿಬಿಷನ್ ಗ್ರೌಂಡ್ ನಲ್ಲಿ ನಡೆಯಲಿದೆ ಡಾಲಿ ಹಾಗೂ ಧನ್ಯತಾ ಮದುವೆ ನಡೆಯಲಿದೆ. ಸ್ಯಾಂಡಲ್ ವುಡ್ ನಲ್ಲಿ ನಟ ರಾಕ್ಷಸ ಅಂತಾನೇ ಧನಂಜಯ್ ಹೆಸರು ಪಡೆದಿದ್ದಾರೆ. ಇತ್ತೀಚೆಗಷ್ಟೇ ಭೈರತಿ ರಣಗಲ್ ಸಿನಿಮಾ ನೋಡಲು ಶಿವಣ್ಣನಂತೆ ವೇಷ ತೊಟ್ಟು ಬಂದು ಎಲ್ಲರ ಗಮನ ಸೆಳೆದಿದ್ದರು. ಇದೇ ವೇಳೆ ಧನ್ಯತಾ ಅವರ ಬಗ್ಗೆ ಒಂದಷ್ಟು ವಿಚಾರಗಳನ್ನು ಹಂಚಿಕೊಂಡಿದ್ದರು. ಡಾಲಿ ಆಕ್ಟರ್ ಅನ್ನೇ ಮದುವೆಯಾಗುತ್ತಾರೆ ಎಂಬ ನಿರೀಕ್ಷೆಯನ್ನು ಸುಳ್ಳು ಮಾಡಿ ಡಾಕ್ಟರ್ ನ ಕೈ ಹಿಡಿಯುತ್ತಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...