ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ನವೆಂಬರ್.22 : ಜಯಲಕ್ಷ್ಮೀ ಬಡಾವಣೆ ಕ್ಷೇಮಾಭಿವೃದ್ದಿ ಸಮಿತಿಯಿಂದ ಗಾರೆಹಟ್ಟಿಯಲ್ಲಿ ನಿರ್ಮಾಣವಾಗುತ್ತಿರುವ ಶ್ರೀ ಉಮಾ ಮಹೇಶ್ವರಸ್ವಾಮಿ ದೇವಸ್ಥಾನದ ಜೀರ್ಣೋದ್ದಾರಕ್ಕೆ ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗಡೆರವರು ಮಂಜೂರು ಮಾಡಿರುವ ಒಂದು ಲಕ್ಷದ ಐವತ್ತು ಸಾವಿರ ರೂ.ಡಿ.ಡಿ.ಯನ್ನು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ. ಟ್ರಸ್ಟ್ ತಾಲ್ಲೂಕು ಯೋಜನಾಧಿಕಾರಿ ಅಶೋಕ್‍ರವರು ಸಮಿತಿಯ ಅಧ್ಯಕ್ಷ ನಾಗೇಂದ್ರಯ್ಯನವರಿಗೆ ಹಸ್ತಾಂತರಿಸಿದರು.

ಸಮಿತಿ ಕಾರ್ಯದರ್ಶಿ ಕರಿಬಸಯ್ಯ, ಸದಸ್ಯರುಗಳು, ವಲಯ ಮೇಲ್ವಿಚಾರಕರು ಮತ್ತು ಸೇವಾಪ್ರತಿನಿಧಿಗಳು ಹಾಗೂ ಗಾರೆಹಟ್ಟಿಯ ಗಣ್ಯರು ಈ ಸಂದರ್ಭದಲ್ಲಿದ್ದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

















