Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಎಸ್‍ಐಆರ್ ಬಗ್ಗೆ ಉದಾಸೀನ ಮಾಡಬೇಡಿ, ಗಂಭೀರವಾಗಿ ಪರಿಗಣಿಸಿ : ಶಾಸಕ ಕೆ.ಸಿ.ವೀರೇಂದ್ರಪಪ್ಪಿ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಜುಲೈ. 18 : ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ಎಸ್‍ಐಆರ್.ನ್ನು ಉದಾಸೀನ ಮಾಡಬೇಡಿ. ಗಂಭೀರವಾಗಿ ತೆಗೆದುಕೊಳ್ಳಿ ಎಂದು ಶಾಸಕ ಕೆ.ಸಿ.ವೀರೇಂದ್ರಪಪ್ಪಿ ಕರೆ ನೀಡಿದರು.

ಬ್ಯಾಂಕ್ ಕಾಲೋನಿಗೆ ಹೊಂದಿಕೊಂಡಿರುವ ಶ್ರೀಶೈಲ ಬಡಾವಣೆಯಲ್ಲಿ ಸಿ.ಸಿ.ರಸ್ತೆ ಕಾಮಗಾರಿ ಹಾಗೂ ಸಿಹಿ ನೀರಿನ ಪೈಪ್‍ಲೈನ್ ಉದ್ಘಾಟಿಸಿ ಮಾತನಾಡಿದರು.
ಬಿಎಲ್‍ಓ.ಗಳು ನೀಡುವ ಅರ್ಜಿಯನ್ನು ಭರ್ತಿ ಮಾಡಿ ಹಿಂದಿರುಗಿಸಿ. ಗ್ರಾಮಾಂತರ ಭಾಗದಲ್ಲಿ ಶೇ.70 ರಷ್ಟಾಗಿದ್ದು, ನಗರ ಪ್ರದೇಶದಲ್ಲಿ ಕಡಿಮೆಯಿರುವುದರಿಂದ ಪ್ರತಿಯೊಬ್ಬರು ಎಸ್‍ಐಆರ್. ಪ್ರಕ್ರಿಯಲ್ಲಿ ಪಾಲ್ಗೊಂಡು ಮತದಾರರ ಪಟ್ಟಿಯಿಂದ ನಿಮ್ಮ ಹೆಸರುಗಳು ಡಿಲಿಟ್ ಆಗದಂತೆ ನೋಡಿಕೊಳ್ಳಿ ಎಂದು ಶ್ರೀಶೈಲ ಬಡಾವಣೆಯ ನಿವಾಸಿಗಳಲ್ಲಿ ಮನವಿ ಮಾಡಿದರು.

ಗೃಹ ಜ್ಯೋತಿಗೂ ದಾಖಲೆಗಳನ್ನು ನೀಡಿ ನೊಂದಾಯಿಸಿಕೊಳ್ಳಿ. ಎಸ್‍ಐಆರ್.ನಿಂದ ಹೊರಗುಳಿದರೆ ಸರ್ಕಾರದಿಂದ ಯಾವ ಸೌಲಭ್ಯವೂ ಸಿಗುವುದಿಲ್ಲ. ಅದಕ್ಕಾಗಿ ಎಸ್‍ಐಆರ್. ಬಗ್ಗೆ ಗಮನ ಕೊಡಿ. ರಸ್ತೆ, ಪುಷ್ಕರಣಿ, ಪಾರ್ಕ್ ಅಭಿವೃದ್ದಿಗೆ ಲಕ್ಷಗಟ್ಟಲೆ ಹಣ ಬಿಡುಗಡೆಗೊಳಿಸಿದ್ದೇನೆ. ಯಾವುದೇ ಒಂದು ಸಂಘ ರಚಿಸುವುದು ಸುಲಭ. ಆದರೆ ಎಲ್ಲರೂ ಒಗ್ಗಟ್ಟಿನಿಂದಿದ್ದು, ಮುಂದುವರೆಸಿಕೊಂಡು ಹೋಗುವುದು ಕಷ್ಟದ ಕೆಲಸ. ಶ್ರೀಶೈಲ ಬಡಾವಣೆಯ ನಾಗರೀಕರ ಕ್ಷೇಮಾಭಿವೃದ್ದಿ ಸಂಘ ರಚಿಸಿಕೊಂಡು ಕೇವಲ ಒಂದುವರೆ ವರ್ಷಗಳಾಗಿದೆ. ಆದರೆ ಬಡಾವಣೆಯ ಮೇಲಿರುವ ನಿಮ್ಮ ಕಾಳಜಿ ನಿಜಕ್ಕೂ ಮೆಚ್ಚುವಂತದ್ದೆಂದು ಶಾಸಕ ಕೆ.ಸಿ.ವೀರೇಂದ್ರಪಪ್ಪಿ ಶ್ಲಾಘಿಸಿದರು.

ಶ್ರೀಶೈಲ ಬಡಾವಣೆಯ ನಾಗರೀಕರ ಕ್ಷೇಮಾಭಿವೃದ್ದಿ ಸಂಘದ ಗೌರವಾಧ್ಯಕ್ಷ ತಿಪ್ಪೇಸ್ವಾಮಿ ಪ್ರಾಸ್ತಾವಿಕವಾಗಿ ಮಾತನಾಡಿ ಇಲ್ಲಿನ ನಿವಾಸಿಗಳಿಗೆ ಮೂಲಭೂತ ಸೌಲಭ್ಯಗಳಾದ ರಸ್ತೆ, ಬೀದಿ ದೀಪ, ಕುಡಿಯುವ ನೀರು ಹಾಗೂ ಚರಂಡಿ ವ್ಯವಸ್ಥೆಯಾಗಬೇಕು. ಅಲೆಕ್ಸಾಂಡರ್ ಬಡಾವಣೆ ಸೇರಿದಂತೆ ನಮಗೂ ಕುಡಿಯುವ ನೀರಿಗೆ ಅನುಕೂಲವಾಗಬೇಕಾದರೆ ಓವರ್‍ಹೆಡ್ ಟ್ಯಾಂಕ್ ನಿರ್ಮಿಸುವಂತೆ ಶಾಸಕರಲ್ಲಿ ಮನವಿ ಮಾಡಿದರು.

ಶ್ರೀಶೈಲ ಬಡಾವಣೆಯ ನಾಗರೀಕರ ಕ್ಷೇಮಾಭಿವೃದ್ದಿ ಸಂಘದ ಅಧ್ಯಕ್ಷ ಪಿ.ಎಂ.ಹನುಮಂತರಾಯಪ್ಪ, ಪ್ರಧಾನ ಕಾರ್ಯದರ್ಶಿ ಧನಂಜಯ ಹಂಪಯ್ಯನಮಾಳಿಗೆ. ನಗರಸಭೆ ಪೌರಾಯುಕ್ತೆ ಲಕ್ಷ್ಮಿ, ಇಂಜಿನಿಯರ್ ರಾಜು, ಬೆಸ್ಕಾಂ ಇಂಜಿನಿಯರ್ ತಿಮ್ಮಣ್ಣ, ಗುತ್ತಿಗೆದಾರ ಬ್ಯಾಲಾಳ್ ಜಯಪ್ಪ ಇವರುಗಳು ವೇದಿಕೆಯಲ್ಲಿದ್ದರು.
ಸಂಘದ ನಿರ್ದೇಶಕರುಗಳಾದ ವಿಜಯಕುಮಾರ್, ನಟರಾಜ್, ಮಂಜುನಾಥರೆಡ್ಡಿ, ರಂಗಪ್ಪ ಹಾಗೂ ಪದಾಧಿಕಾರಿಗಳು ಶ್ರೀಶೈಲ ಬಡಾವಣೆಯ ನಿವಾಸಿಗಳು ಈ ಸಂದರ್ಭದಲ್ಲಿ ಹಾಜರಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now